ಯದುವೀರರಿಗೆ ಮಂಗಳಸ್ನಾನ, ರಾಜಮಾತೆಗೆ ಪಾದಪೂಜೆ
ಮೈಸೂರು, ಮೇ 27 : ಮೈಸೂರು ಅರಮನೆಯಲ್ಲಿ ಹಬ್ಬದ ಸಂಭ್ರಮ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟಾಭಿಷೇಕದ ವಿಧಿವಿಧಾನಗಳು ಬುಧವಾರ ಬೆಳಗ್ಗೆಯಿಂದಲೇ ಅಂಬಾವಿಲಾಸ ಅರಮನೆಯಲ್ಲಿ ಆರಂಭವಾಗಿದೆ. ಗುರುವಾರ ಬೆಳಗ್ಗೆ ಕರ್ಕಾಟಕ ಲಗ್ನದಲ್ಲಿ ಪಟ್ಟಾಭಿಷೇಕ ನಡೆಯಲಿದೆ.
ಬುಧವಾರ ಮುಂಜಾನೆ 5 ಗಂಟೆಗೆ ಯದುವೀರ ಒಡೆಯರ್ ಅವರಿಗೆ ಮಂಗಳಸ್ನಾನ ಮಾಡಿಸುವ ಮೂಲಕ ಧಾರ್ಮಿಕ ಕಾರ್ಯಗಳಿಗೆ ಚಾಲನೆ ನೀಡಲಾಯಿತು. ಮಂಗಳಸ್ನಾನದ ನಂತರ ಮೆರವಣಿಗೆಯಲ್ಲಿ ಅರಮನೆ ಆವರಣದಲ್ಲಿನ ವೆಂಕಟೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಯದುವೀರ ಒಡೆಯರ್ ಅಂಬಾ ವಿಲಾಸ ಅರಮನೆಗೆ ಆಗಮಿಸಿದರು. [ಯದುವೀರರಿಗೆ ಪಟ್ಟಾಭಿಷೇಕ ಹೀಗೆ ನಡೆಯುತ್ತದೆ]
ಧಾರ್ಮಿಕ ಪೂಜಾ ಕಾರ್ಯದ ವೇಳೆ ಸಂಪ್ರದಾಯದಂತೆ ರಾಜಮಾತಾ ಪ್ರಮೋದಾ ದೇವಿ ಒಡೆಯರ್ ಅವರಿಗೆ ಯುವರಾಜ ಯದುವೀರ ಒಡೆಯರ್ ಪಾದಪೂಜೆ ನೆರವೇರಿಸಿದರು. ಈ ವೇಳೆ ಶ್ರೀಕಂಠದತ್ತ ಒಡೆಯರ್ ಅವರನ್ನು ನೆನೆದು ರಾಣಿ ಪ್ರಮೋದಾ ದೇವಿಯವರು ಕಣ್ಣೀರಿಟ್ಟಿರು. [ಮೈಸೂರು ಮಹಾರಾಜರ 550 ವರ್ಷಗಳ ಭವ್ಯ ಇತಿಹಾಸ]
ಗುರುವಾರ ಯದುವೀರ ಅರಸ್ ಅವರ ಪಟ್ಟಾಭಿಷೇಕ ನಡೆಯಲಿದೆ. ಬೆಳಗ್ಗೆ 9.30 ರಿಂದ 10.30ರವರೆಗೆ ಸಲ್ಲುವ ಶುಭ ಕರ್ಕಾಟಕ ಲಗ್ನದಲ್ಲಿ ನಡೆಯಲಿದೆ. ಆದರೆ, ಈ ಕಾರ್ಯಕ್ರಮ ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶವಿಲ್ಲ. ಸಂಜೆ 6.30ಕ್ಕೆ ದರ್ಬಾರ್ ಸಭಾಂಗಣದಲ್ಲಿ ಆರತಕ್ಷತೆ ಏರ್ಪಡಿಸಲಾಗಿದ್ದು ಇದನ್ನು ಸಾರ್ವಜನಿಕರು ವೀಕ್ಷಿಸಬಹುದಾಗಿದೆ. [ಚಿತ್ರಕೃಪೆ : ಯದುವೀರ ಒಡೆಯರ್ ಫೇಸ್ ಬುಕ್ ಪುಟ]

ಮೈಸೂರು ಅರಮನೆಯಲ್ಲಿ ಹಬ್ಬದ ಸಂಭ್ರಮ
ಮೈಸೂರು ಅರಮನೆಯಲ್ಲಿ ಹಬ್ಬದ ಸಂಭ್ರಮ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟಾಭಿಷೇಕದ ವಿಧಿವಿಧಾನಗಳು ಬುಧವಾರ ಬೆಳಗ್ಗೆಯಿಂದಲೇ ಅಂಬಾವಿಲಾಸ ಅರಮನೆಯಲ್ಲಿ ಆರಂಭವಾಗಿದೆ.

ಮಂಗಳಸ್ನಾನದೊಂದಿಗೆ ಕಾರ್ಯಕ್ರಮ ಆರಂಭ
ಮುಂಜಾನೆ 5 ಗಂಟೆಗೆ ಯದುವೀರ ಒಡೆಯರ್ ಅವರಿಗೆ ಮಂಗಳಸ್ನಾನ ಮಾಡಿಸುವ ಮೂಲಕ ಧಾರ್ಮಿಕ ಕಾರ್ಯಗಳಿಗೆ ಚಾಲನೆ ನೀಡಲಾಯಿತು. ಮಂಗಳಸ್ನಾನದ ನಂತರ ಅರಮನೆ ಆವರಣದಲ್ಲಿನ ವೆಂಕಟೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಯದುವೀರ ಒಡೆಯರ್ ಅಂಬಾ ವಿಲಾಸ ಅರಮನೆಗೆ ಆಗಮಿಸಿದರು.

ಪರಕಾಲ ಶ್ರೀಗಳ ಪಾದಪೂಜೆ
ಅಂಬಾವಿಲಾಸ ಅರಮನೆಯಲ್ಲಿ ಪರಕಾಲ ಮಠದ ಶ್ರೀಗಳಿಗೆ ಯದುವೀರ ಒಡೆಯರ್ ಅವರು ಪಾದಪೂಜೆ ನೆರವೇರಿಸಿದರು.

ಅರಮನೆಯಲ್ಲಿ ಗಣಪತಿ ಹೋಮ
ಅಂಬಾ ವಿಲಾಸ ಅರಮನೆ ಒಳಭಾಗದಲ್ಲಿ ಗಣಪತಿ ಪೂಜೆ, ಪುಣ್ಯಾಹ ಸೇರಿದಂತೆ ವಿವಿಧ ಪೂಜಾ ವಿಧಿವಿಧಾನಗಳು ನಡೆದವು. ಸಂಜೆ ಕಂಕಣಧಾರಣ ಕಾರ್ಯಕ್ರಮ ನಡೆಯಿತು.

ಕಣ್ಣೀರಿಟ್ಟ ಪ್ರಮೋದಾ ದೇವಿ ಒಡೆಯರ್
ಧಾರ್ಮಿಕ ಪೂಜಾ ಕಾರ್ಯದ ವೇಳೆ ಸಂಪ್ರದಾಯದಂತೆ ರಾಜಮಾತಾ ಪ್ರಮೋದಾ ದೇವಿ ಒಡೆಯರ್ ಅವರಿಗೆ ಯುವರಾಜ ಯದುವೀರ ಒಡೆಯರ್ ಪಾದಪೂಜೆ ನೆರವೇರಿಸಿದರು. ಈ ವೇಳೆ ಶ್ರೀಕಂಠದತ್ತ ಒಡೆಯರ್ ಅವರನ್ನು ನೆನೆದು ರಾಣಿ ಪ್ರಮೋದಾ ದೇವಿಯವರು ಕಣ್ಣೀರಿಟ್ಟಿರು. [ಪಂಚಭೂತಗಳಲ್ಲಿ ಶ್ರೀಕಂಠದತ್ತ ಒಡೆಯರ್ ಲೀನ]

ಭಾವಿ ಪತ್ನಿ ತ್ರಿಶಿಕಾ ಕುಮಾರಿ ಆಗಮನ
ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಭಾವಿ ಪತ್ನಿ ತ್ರಿಶಿಕಾ ಕುಮಾರಿ ಅವರು ಮೈಸೂರಿಗೆ ಆಗಮಿಸಿದ್ದಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications