• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರಿನಲ್ಲಿ ಕೊರೊನಾ ಸೋಂಕು ಭೀತಿ: ಸಾರ್ವಜನಿಕರಿಗೆ ಮುಡಾ ಕಚೇರಿ ಪ್ರವೇಶ ನಿರ್ಬಂಧ

By ಮೈಸೂರು ಪ್ರತಿನಿಧಿ
|

ಮೈಸೂರು, ಏಪ್ರಿಲ್ 21: ಸರ್ಕಾರಿ ಕಚೇರಿಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ನಗರದ ಮುಡಾ ಕಚೇರಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಮೈಸೂರು ಮಹಾನಗರ ಪಾಲಿಕೆ ಸೇರಿದಂತೆ ಕೆಲವು ಸರ್ಕಾರಿ ಕಚೇರಿಯ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಮುಡಾ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ಕಚೇರಿಗೆ ಭೇಟಿ ನೀಡುವುದಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಹಾಕಿದ್ದಾರೆ. ಹೀಗಾಗಿ ಜನರು ಕಚೇರಿಗೆ ಆಗಮಿಸದಂತೆ ಮುಡಾ ಆಯುಕ್ತ ನಟೇಶ್ ಮನವಿ ಮಾಡಿದ್ದಾರೆ.

ಮೈಸೂರಿನ KR ಆಸ್ಪತ್ರೆಗೆ ಸಚಿವ ಸೋಮಶೇಖರ್ ದಿಢೀರ್ ಭೇಟಿ

ಇನ್ನು ಕೊರೊನಾ ಸೋಂಕು ಹರಡುವಿಕೆ ಹೆಚ್ಚುತ್ತಿರುವ ಪರಿಣಾಮ, ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ಸಂಖ್ಯೆ ಗಣನೀಯ ಇಳಿಕೆ ಕಂಡಿದೆ. ಮಹಾನಗರ ಪಾಲಿಕೆಯಲ್ಲಿ ಜನರ ಓಡಾಟ, ಸಾರ್ವಜನಿಕ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಇದರ ಪರಿಣಾಮ ಮೈಸೂರಿನ ಸರ್ಕಾರಿ ಕಚೇರಿಗಳಲ್ಲಿ ಮಧ್ಯಾಹ್ನ 2.30ರಿಂದ 4.30ರವರೆಗೆ ಇದ್ದ ಸಾರ್ವಜನಿಕ ಭೇಟಿ ವ್ಯವಸ್ಥೆ ತಾತ್ಕಾಲಿಕ ರದ್ದುಪಡಿಸಲಾಗಿದೆ.

ಪಾಲಿಕೆಗೆ ಮತ್ತೆ ಶಾಕ್

ಮೈಸೂರಿನಲ್ಲಿ ದೊಡ್ಡಮಟ್ಟದ ಕೊರೊನಾ ಸೋಂಕಿನ ಆಘಾತ ನೀಡಿದ್ದ ಮೈಸೂರು ಮಹಾನಗರ ಪಾಲಿಕೆಯಲ್ಲಿ ಮಹಾಮಾರಿ ಅಬ್ಬರ ಮುಂದುವರಿದಿದೆ. ಮಂಗಳವಾರ ನಗರ ಪಾಲಿಕೆಯ ಮತ್ತೊಬ್ಬ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಪಾಲಿಕೆಯ ತೆರಿಗೆ ವಿಭಾಗದ ಕಟ್ಟಡದ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ.

ಈ ಹಿನ್ನೆಲೆ ತೆರಿಗೆ ವಿಭಾಗದ ಕಟ್ಟಡವನ್ನು ಸಂಪೂರ್ಣ ಸ್ಯಾನಿಟೈಜ್ ಮಾಡಲಾಗಿದೆ. ಪಾಲಿಕೆಯ ಅಭಯ ಟೀಮ್ ನ ಸಿಬ್ಬಂದಿ ಕಟ್ಟಡ ಸಂಪೂರ್ಣ ಸ್ಯಾನಿಟೈಜ್ ಮಾಡಿದ್ದಾರೆ. ಕಳೆದ ಎರಡು ವಾರಗಳಿಂದ ಪಾಲಿಕೆ ಅಧಿಕಾರಿ, ಸಿಬ್ಬಂದಿಯನ್ನು ಬೆಂಬಿಡದೆ ಕಾಡುತ್ತಿರುವ ಕೊರೊನಾ ಸೋಂಕಿನ ಆತಂಕ ಮತ್ತಷ್ಟು ಉಲ್ಬಣಗೊಂಡಿದೆ. ಎರಡು ವಾರಗಳಲ್ಲಿ ಪಾಲಿಕೆಯ 25ಕ್ಕೂ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.

English summary
The MUDA office in Mysuru has been restricted to public access due to the increasing number of coronavirus cases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X