ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು, ಕೊಡಗಿಗೆ ಮತ್ತೆ ಕೊರೊನಾ ವೈರಸ್ ಭೀತಿ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮೇ 18: ಸರ್ಕಾರ ಹಾಗೂ ಜಿಲ್ಲಾಡಳಿತ ತೆಗೆದುಕೊಂಡ ಕಠಿಣ ಕ್ರಮಗಳಿಂದ ಕಡಿಮೆ ಆಗಿದ್ದ ಕೊರೊನಾ ವೈರಸ್ ಸೋಂಕು ಇಂದು ಮತ್ತೆ ತನ್ನ ಆರ್ಭಟ ತೋರಿಸಲು ಮುಂದಾಗಿದೆ.

ಹಸಿರು ವಲಯದಲ್ಲಿದ್ದ ಕೊಡಗು ಜಿಲ್ಲೆಯಲ್ಲಿ ಇಂದು ಒಂದು ಕೊರೊನಾ ಸೋಂಕು ಪ್ರಕರಣ ಪತ್ತೆಯಾದ ಬೆನ್ನಲ್ಲೇ, ಇತ್ತೀಚಿಗೆ ಕೊರೊನಾ ಮುಕ್ತವಾಗಿದ್ದ ಮೈಸೂರಿನಲ್ಲಿ ಇನ್ನೊಂದು ಸೋಂಕು ಪ್ರಕರಣ ಪತ್ತೆಯಾಗಿದೆ. ಇದರಿಂದ ಜನರಲ್ಲಿ ಮತ್ತೆ ಕೊರೊನಾ ಭೀತಿ ಎದುರಾಗಿದೆ.

ಮೈಸೂರೀಗ ಕೊರೊನಾಮುಕ್ತ; ಕಾರಣಕರ್ತರಿಗೆ ಉಸ್ತುವಾರಿ ಸಚಿವರ ಅಭಿನಂದನಾರ್ಪಣೆಮೈಸೂರೀಗ ಕೊರೊನಾಮುಕ್ತ; ಕಾರಣಕರ್ತರಿಗೆ ಉಸ್ತುವಾರಿ ಸಚಿವರ ಅಭಿನಂದನಾರ್ಪಣೆ

ಮುಂಬೈನಿಂದ ಪ್ರವಾಸ ಮಾಡಿರುವ ಇತಿಹಾಸ ಹೊಂದಿರುವ ವ್ಯಕ್ತಿಯಲ್ಲಿ ಪಿ-1225 ಇಂದು ಕೊರೊನಾ ಸೋಂಕು ದೃಢಪಟ್ಟಿದೆ. ಜೊತೆಗೆ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ಸೋಮವಾರ ಒಂದೇ ದಿನ 17 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

Coronavirus Detect In Mysuru And Kodagu Districts

ಮುಂಬೈ ಪ್ರಯಾಣದ ಹಿನ್ನೆಲೆ ಹೊಂದಿರುವ 17 ವ್ಯಕ್ತಿಗಳಿಗೆ ಸೋಂಕು ಇರುವುದು ದೃಢವಾಗಿದ್ದು, ಎಲ್ಲರೂ ಕೆ.ಆರ್ ಪೇಟೆ ತಾಲ್ಲೂಕಿನವರೇ ಆಗಿದ್ದಾರೆ. ಇದರಿಂದ ಮಂಡ್ಯ ಜಿಲ್ಲೆಯಲ್ಲಿ ಒಟ್ಟು 89 ಪ್ರಕರಣ ದಾಖಲಾಗಿದ್ದು, ಇದರಲ್ಲಿ 19 ಜನ ಸೋಂಕಿತರು ಗುಣಮುಖರಾಗಿದ್ದಾರೆ.

ಸರ್ಕಾರವು ಅಂತರ ರಾಜ್ಯ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿರುವುದರಿಂದ ಕೊರೊನಾ ಸೋಂಕು ಹರಡುತ್ತಿದೆ ಎಂದು ಹೇಳಲಾಗಿದೆ.

English summary
One coronavirus infection was detected in Kodagu, another corona Infection recently found in Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X