ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಎಫೆಕ್ಟ್: ಮೈಸೂರಲ್ಲಿ ಮಾಸ್ಕ್ ಗಳಿಗೆ ದುಪ್ಪಟ್ಟು ದರ ವಸೂಲಿ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮಾರ್ಚ್ 11: ರಾಜ್ಯದ ಎಲ್ಲ ಕಡೆಗಳಲ್ಲೂ ಕೊರೊನಾ ವೈರಸ್‌ ಕುರಿತು ಜನರು ಭಯಭೀತರಾಗಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಗಳನ್ನು ಧರಿಸುತ್ತಿದ್ದಾರೆ. ಈಗ ಮಾಸ್ಕ್ ಗಳಿಗೂ ಸಿಕ್ಕಾಪಟ್ಟೆ ಬೇಡಿಕೆ ಬಂದಿದೆ.

ಮೆಡಿಕಲ್ ಸ್ಟೋರ್ ಗಳಲ್ಲಿ ಮಾಸ್ಕ್ ಗಳು ಸಿಗುತ್ತಿಲ್ಲ, ಅಧಿಕ ಬೆಲೆಗೆ ಮಾಸ್ಕ್ ಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಇಂದು ಮೈಸೂರು ನಗರಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಗೋಪಿ ನೇತೃತ್ವದಲ್ಲಿ ಸದಸ್ಯರು ಹಾಗೂ ಆರೋಗ್ಯ ಅಧಿಕಾರಿಗಳು ಕೆ.ಆರ್.ಆಸ್ಪತ್ರೆ ಹಾಗೂ ನಗರದ ಕೆಲವು ಮೆಡಿಕಲ್ ಸ್ಟೋರ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

"ಕೊರೊನಾ ಸೋಂಕಿಗೆ ಭಾರತದಲ್ಲಿಯೇ ರಾಸಾಯನಿಕ ಔಷಧಿ ಅಭಿವೃದ್ಧಿ'

ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಗೋಪಿ ಮಾತನಾಡಿ, ""ಕೆಲವು ಮೆಡಿಕಲ್ ಸ್ಟೋರ್ ಗಳಲ್ಲಿ ಅಧಿಕ ಬೆಲೆಗೆ ಮಾಸ್ಕ್ ಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ನಗರಪಾಲಿಕೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸುತ್ತಿದ್ದೇವೆ. ಮಾಸ್ಕ್ ಗಳನ್ನು ಅಧಿಕ ಬೆಲೆಗೆ ಮಾರಾಟ ಮಾಡುತ್ತಿರುವುದು ಸಾಬೀತಾದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು'' ಎಂದರು.

Corona Effect: Masks Rate High In Mysore

ಮಹಾನಗರ ಪಾಲಿಕೆ ಆರೋಗ್ಯ ಅಧಿಕಾರಿ ಡಾ.ನಾಗರಾಜ್ ಮಾತನಾಡಿ, ""ಅಧಿಕಾರಿಗಳ ತಂಡವು ಇಂದು ಕೃಷ್ಣರಾಜ ಆಸ್ಪತ್ರೆಗೆ ಭೇಟಿ ನೀಡಿ ತುರ್ತು ಔಷಧ ಅಥವಾ ಇನ್ನಿತರ ಸಾಮಾಗ್ರಿಗಳ ಕೊರತೆ ಇದೆಯೇ ಮತ್ತು ನಗರಪಾಲಿಕೆಯಿಂದ ಏನಾದರೂ ಸಹಕಾರ ಬೇಕಾಗಿದೆಯೇ ಎಂದು ವಿಚಾರಿಸಿದ್ದೇವೆ'' ಎಂದು ತಿಳಿಸಿದರು.

ಕೊರೊನಾ ಎಫೆಕ್ಟ್; ಮೈಸೂರಲ್ಲಿ ಶೇ.70 ಇಳಿದಿದೆ ತರಕಾರಿ ಬೆಲೆಕೊರೊನಾ ಎಫೆಕ್ಟ್; ಮೈಸೂರಲ್ಲಿ ಶೇ.70 ಇಳಿದಿದೆ ತರಕಾರಿ ಬೆಲೆ

ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಯಲ್ಲಿ ಈಗಾಗಲೇ ಪ್ರತ್ಯೇಕ ವಾರ್ಡ್ ನ್ನು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

English summary
Masks are also demand in Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X