ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ಇನ್ಫೋಸಿಸ್ ನಿಂದ 4 ಸಾವಿರ ಟೆಕ್ಕಿಗಳು ತವರಿಗೆ ವಾಪಸ್‌

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮಾರ್ಚ್ 20: ಈಗಾಗಲೇ ವಿಶ್ವಾದ್ಯಂತ 10 ಸಾವಿರಕ್ಕೂ ಅಧಿಕ ಮತ್ತು ದೇಶದಲ್ಲಿ ಐದು ಬಲಿ ಪಡೆದಿರುವ ಕೊರೊನಾ ವೈರಸ್ ಭೀತಿ ರಾಜ್ಯದಲ್ಲೂ ಹೆಚ್ಚಾಗಿದೆ.

ಕೊರೊನಾ ಭೀತಿಯು ಸಾಂಸ್ಕೃತಿಕ ನಗರಿ ಮೈಸೂರಿಗೂ ತಟ್ಟಿದ್ದು, ಜಿಲ್ಲಾಡಳಿತ ಅನೇಕ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಇದಕ್ಕೆ ಖಾಸಗಿ ಸಂಸ್ಥೆಗಳು, ಸಾರ್ವಜನಿಕರು ಕೈ ಜೋಡಿಸಿದ್ದಾರೆ.

ಕೊರೊನಾ ವೈರಸ್ ಹರಡುವ ಆತಂಕ ಹಿನ್ನೆಲೆಯಲ್ಲಿ ಮಾಹಿತಿ ತಂತ್ರಜ್ಞಾನ ದಿಗ್ಗಜ ಇನ್ಫೋಸಿಸ್ ಕೂಡ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಇನ್ಫೋಸಿಸ್ ನ ಮೈಸೂರು ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದ ಟೆಕ್ಕಿಗಳನ್ನು ಅವರ ಊರಿಗೆ ವಾಪಸ್ ಕಳುಹಿಸಿಕೊಟ್ಟಿದೆ.

Mysuru Infosys Centre 4 Thousand Techies Returns To Home

ಇನ್ಫೋಸಿಸ್ ಗ್ಲೋಬಲ್ ಎಜ್ಯುಕೇಷನ್ ಸೆಂಟರ್ ನಲ್ಲಿ 10 ಸಾವಿರ ಟೆಕ್ಕಿಗಳು ತರಬೇತಿ ಪಡೆಯುತ್ತಿದ್ದರು. ಈ ನಡುವೆ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಇನ್ಫೋಸಿಸ್ ನಲ್ಲಿ ತರಬೇತಿ ಪಡೆಯುತ್ತಿದ್ದ 4 ಸಾವಿರ ಟೆಕ್ಕಿಗಳನ್ನು ವಾಪಸ್ ಕಳುಹಿಸಲಾಗಿದೆ.

ಪುಣೆ, ಹೈದರಾಬಾದ್, ಬೆಂಗಳೂರು ಸೇರಿದಂತೆ ಇತರೆಡೆಗೆ ಟೆಕ್ಕಿಗಳು ವಾಪಸ್ ಆಗಿದ್ದಾರೆ. ಸರ್ಕಾರಿ ಬಸ್ ಹಾಗೂ ಖಾಸಗಿ ವಾಹನಗಳಲ್ಲಿ ಟೆಕ್ಕಿಗಳು ತಮ್ಮ ಊರಿಗೆ ತೆರಳಿದ್ದಾರೆ.

English summary
Techies who were trained at Mysuru Infosys Centre have been sent back to their hometowns.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X