ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ, ಅಕ್ರಮಗಳು ಹೆಚ್ಚಾಗಿವೆ; ಸಿದ್ದರಾಮಯ್ಯ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಏಪ್ರಿಲ್ 30: ಬಿಜೆಪಿಯವರು ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ, ಅಕ್ರಮಗಳು ಹೆಚ್ಚಾಗಿವೆ ಎಂದು ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ಶನಿವಾರ ಮೈಸೂರು ಜಿಲ್ಲೆಯ ತಿ. ನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಜಕೀಯ ಲಾಭಕ್ಕಾಗಿ ಒಂದು ಧರ್ಮವನ್ನು ಟಾರ್ಗೆಟ್ ಮಾಡಬೇಡಿ ಎಂದು ಬಿಜೆಪಿಗೆ ಕುಟುಕಿದರು.

ಕಾನೂನು ಎಲ್ಲರಿಗೂ ಒಂದೇ. ರಾಜಕೀಯ ಲಾಭಕ್ಕಾಗಿ ಒಂದು ಧರ್ಮವನ್ನು ಟಾರ್ಗೆಟ್ ಮಾಡಬೇಡಿ. ಮುಸ್ಲಿಂ, ಕ್ರಿಶ್ಚಿಯನ್, ಹಿಂದೂ ಯಾರೇ ತಪ್ಪು ಮಾಡಿದರೂ ಕ್ರಮ ತೆಗೆದುಕೊಳ್ಳಿ. ಒಂದು ವರ್ಗವನ್ನು ಟಾರ್ಗೆಟ್ ಮಾಡಿದರೆ ಮತ ಧ್ರುವೀಕರಣ ಆಗುತ್ತದೆ ಎಂಬ ಭ್ರಮೆಯಲ್ಲಿ ಬಿಜೆಪಿ ಇದೆ. ಅದು ಅಸಾಧ್ಯ. ಈಗಾಗಲೇ ಅವರಿಗೆ ತಿರುಗುಬಾಣ ಆಗಿದೆ ಎಂದು ಸಿದ್ದರಾಮಯ್ಯ ಹರಿಹಾಯ್ದರು.

Corruption And Illegal Activities Rise Since the BJP Came To Power Says Siddaramaiah

ಹಿಂದಿ ರಾಷ್ಟ್ರ ಭಾಷೆ ಚರ್ಚೆ ವಿಚಾರದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಸಂವಿಧಾನ 15 ಭಾಷೆಗಳಿಗೆ ಅಧಿಕೃತ ಭಾಷೆ ಎಂಬ ಮಾನ್ಯತೆ ನೀಡಿದೆ. ಹಿಂದಿ ಕೂಡ ಒಂದು ಭಾಷೆ. ಹಿಂದಿ ರಾಷ್ಟ್ರ ಭಾಷೆ ಅಂತ ಎಲ್ಲಿಯೂ ಹೇಳಿಲ್ಲ. ಅಮಿತ್ ಶಾ ಅವರು ಹಿಂದಿಯನ್ನು ಸಂಪರ್ಕ ಭಾಷೆಯಾಗಿ ಬಳಸಬೇಕು ಅಂದಿರುವ ಕಾರಣಕ್ಕಾಗಿ ಬಿಜೆಪಿಯವರು ಓಲೈಕೆ ಮಾಡುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ಸೋನಿಯಾ ಗಾಂಧಿ ಗುಲಾಮ ಎಂಬ ಸಿ.ಟಿ. ರವಿ ಹೇಳಿಕೆಗೆ ಗರಂ ಆದ ಅವರು, ಪ್ರಜಾಪ್ರಭುತ್ವದಲ್ಲಿ ಯಾರು ಯಾರಿಗೂ ಗುಲಾಮರಲ್ಲ. ಅಮಿತ್ ಶಾ ಓಲೈಸಿ ಮಾತನಾಡಿದ್ದಕ್ಕೆ ಸಿ.ಟಿ. ರವಿಯನ್ನು ಗುಲಾಮ ಎಂದಿದ್ದು. ಸೋನಿಯಾ ಗಾಂಧಿ ಹಿಂದಿ ರಾಷ್ಟ್ರೀಯ ಭಾಷೆ ಅಂದಿದ್ದಾರಾ? ರಾಹುಲ್ ಗಾಂಧಿ ಆ ರೀತಿ ಮಾತನಾಡಿದ್ದಾರಾ? ಪ್ರಜಾಪ್ರಭುತ್ವದಲ್ಲಿ ಯಾರಿಗೆ ಯಾರೂ ಗುಲಾಮರಲ್ಲ ಎಂದು ತಿರುಗೇಟು ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮುಸ್ಲಿಂಮರ ಮಟನ್ ಸ್ಟಾಲ್, ಕಸಾಯಿಖಾನೆ ಮುಚ್ಚಲು ನೋಟಿಸ್ ಕೊಟ್ಟಿರುವ ವಿಚಾರದ ಬಗ್ಗೆ ಪ್ರತಕರ್ತರು ಗಮನ ಸೆಳೆದಾಗ, ಕೇವಲ ಮುಸ್ಲಿಮರನ್ನೇ ಯಾಕೆ ಟಾರ್ಗೆಟ್ ಮಾಡುತ್ತಿರಾ. ಒಂದು ಧರ್ಮ, ಒಂದು ಜಾತಿ ಟಾರ್ಗೆಟ್ ಮಾಡಬೇಡಿ. ಎಲ್ಲರ ಮೇಲೂ ಕಾನೂನು ಕ್ರಮ ಕೈಗೊಳ್ಳುವಂತಿದ್ದರೆ ಮಾಡಿ ಎಂದು ಸಲಹೆ ನೀಡಿದರು.

ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಕಾಂಗ್ರೆಸ್‌ಗೆ ನೈತಿಕತೆ ಇಲ್ಲ ಎಂಬ ಸಚಿವ ಆರ್. ಅಶೋಕ್ ಹೇಳಿಕೆ ಕುರಿತು ಮಾತನಾಡಿದ ಸಿದ್ದರಾಮಯ್ಯ, ನಮ್ಮ ಸರ್ಕಾರ ಇದ್ದಾಗ ಅಶೋಕ ಏನ್ ಮಾಡುತ್ತಿದ್ದರು. ಆಗ ಬಿಜೆಪಿ ಪ್ರತಿಪಕ್ಷದಲ್ಲಿತ್ತು. ಆ ಸಮಯದಲ್ಲಿ ಯಾಕೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿಲ್ಲ. ಆಗ ಅಶೋಕ್ ತಮ್ಮ ಬಾಯಿಗೆ ಕಡುಬು ಹಾಕಿಕೊಂಡಿದ್ದರೇ? ಎಂದು ಪ್ರಶ್ನಿಸಿದರು.

Corruption And Illegal Activities Rise Since the BJP Came To Power Says Siddaramaiah

ಸುಮ್ನೆ ಏನೇನೋ ಮಾತನಾಡುವುದಲ್ಲ. ನಮ್ಮ ಕಾಲದಲ್ಲೂ ಪಿಎಸ್‌ಐ ನೇಮಕಾತಿ ಆಯ್ತು. ಬೇರೆ ಬೇರೆ ನೇಮಕಾತಿಗಳಾದವು. ಆಗೆಲ್ಲ ಇಂತಹ ಭ್ರಷ್ಟಾಚಾರ ನಡೆದಿತ್ತಾ? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಪಿಎಸ್‌ಐ ಮರು ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರಕ್ಕೆ ಬೆಂಬಲ ಇದೆ ಎಂದರು.

ಪರಿಕ್ಷೆಯಲ್ಲಿ ಯಾರು ಅಕ್ರಮ ಮಾಡಿದ್ದಾರೆ, ಯಾರು ಸರಿಯಾಗಿ ಬರೆದಿದ್ದಾರೆ ಗೊತ್ತಾಗಲ್ಲ. ತನಿಖೆ ಮುಂದುವರಿದು 20 ಜನರ ಬಂಧನ ಆಗಿದೆ. ಹೀಗಾಗಿ ಮರು ಪರೀಕ್ಷೆ ಮಾಡುವುದು ಸರಿ ಇದೆ. ಆದರೆ ಈಗ ಪರೀಕ್ಷೆ ಬರೆದಿರುವ ಯಾರ ಬಳಿಯೂ ಪರಿಕ್ಷಾ ಶುಲ್ಕ ಪಡೆಯಬಾರದು. ಬಿಜೆಪಿ ದುರಾಡಳಿತದಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ. ಗೃಹ ಸಚಿವ ಆರಗ ಜ್ಞಾನೇಂದ್ರ ಒಂದು ಕ್ಷಣವೂ ಪದವಿಯಲ್ಲಿ ಮುಂದುವರಿಯಬಾರದು ಎಂದು ಹೇಳಿದರು.

English summary
Former CM Siddaramaiah alleged that Corruption and Irregularities have increased after BJP came to power.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X