ಕೇಂದ್ರ-ರಾಜ್ಯ ಸರಕಾರಗಳ ಪತನಕ್ಕೆ ಕ್ಷಣಗಣನೆ

ಮೈಸೂರು, ಏ.3- ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಕೌಂಟ್‌ ಡೌನ್ ಪ್ರಾರಂಭವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್‌ ಕುಮಾರ್ ಹೇಳಿದ್ದಾರೆ.

ಮೈಸೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅನಂತ್‌ ಕುಮಾರ್ ಅವರು, ಈ ಬಾರಿ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ 100 ಸ್ಥಾನಗಳನ್ನು ಗೆಲ್ಲಲಾರದೆ ಸಂಪೂರ್ಣ ನಾಶವಾಗಲಿದೆ. ಇನ್ನು, ಈ ಬಾರಿ ರಾಜ್ಯದಲ್ಲಿ ಬಿಜೆಪಿ 20 ಸ್ಥಾನಗಳನ್ನು ಗಳಿಸಲಿದೆ ಎಂಬುದು ಗೊತ್ತಾಗಿದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತಿನ ಸ್ಥಿಮಿತ ಕಳೆದುಕೊಂಡವಂತೆ ಮಾತನಾಡುತ್ತಿದ್ದಾರೆ ಎಂದು ಭವಿಷ್ಯ ನುಡಿದರು.

ಪ್ರಧಾನಿ ಮನಮೋಹನ್‌ ನೈಟ್‌ ವಾಚ್‌ ಮನ್:


ಈ ಬಾರಿ ಸೋಲುವುದು ಖಚಿತ ಎಂಬುದನ್ನು ಅರಿತಿರುವುದರಿಂದಲೇ ರಾಹುಲ್ ಸೇರಿದಂತೆ ಯಾರೂ ಕೂಡ ಪ್ರಧಾನಿ ಅಭ್ಯರ್ಥಿ ಎಂದು ಹೇಳಿಕೊಳ್ಳಲು ಮುಂದಾಗುತ್ತಿಲ್ಲ ಎಂದು ಟೀಕಿಸಿದರು. ಪ್ರಧಾನ ಮಂತ್ರಿ ಮನಮೋಹನ್‌ ಸಿಂಗ್ ಯಾವುದೇ ಚುನಾವಣೆಯನ್ನು ಎದುರಿಸಿಲ್ಲ. ಅವರು ನೈಟ್‌ ವಾಚ್‌ ಮನ್ ಇದ್ದಂತೆ ಎಂದೂ ಅನಂತ್ ಗೇಲಿ ಮಾಡಿದರು. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]

ಕಾಂಗ್ರೆಸ್ಸಿನ ಹಲವಾರು ನಾಯಕರೇ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ. ಏಕೆಂದರೆ ಅವರಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂಬುದರ ಅರಿವಾಗಿದೆ. ಕಾಂಗ್ರೆಸ್ ಯುದ್ಧದ ಮೈದಾನದಿಂದ ಪಲಾಯನ ಮಾಡಿದೆ ಎಂದು ಅವರು ಟೀಕಿಸಿದರು.

ನರೇಂದ್ರ ಮೋದಿ ಹಾಗೂ ಅನಂತ ಕುಮಾರ್ ಕಾಂಬಿನೇಷನ್‌ ನಲ್ಲಿ ದೇಶ ಮತ್ತು ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಮೋದಿ ಅವರು ಪ್ರಧಾನ ಮಂತ್ರಿಯಾದರೆ ಜೀವನಾವಶ್ಯಕ ವಸ್ತುಗಳ ಬೆಲೆ ಇಳಿಸಿ ವಾಜಪೇಯಿ ಸರ್ಕಾರ ಇದ್ದಾಗ ಇದ್ದ ಬೆಲೆಗೆ ಇಳಿಸುತ್ತೇವೆ. ವರ್ಷಕ್ಕೆ ಒಂದು ಕೋಟಿ ಉದ್ಯೋಗವನ್ನು ಸೃಷ್ಟಿಸುತ್ತೇವೆ. ಗಡಿ ಭದ್ರತೆಗೆ ಆದ್ಯತೆ ನೀಡಲಾಗುವುದು. ರಾಜ್ಯದಲ್ಲಿ ಹಲವಾರು ಸುಧಾರಣೆ ಮಾಡಲಾಗುವುದು ಹಾಗೂ ರಫ್ತು ಹಣ ತಡೆಗಟ್ಟಲು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

BJP MP H Ananth Kumar in Mysore
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+