ಮೈಸೂರಿನ ದೇವರಾಜ ಮಾರುಕಟ್ಟೆ ಕೆಡವಲು ಕೋರ್ಟ್ ಆದೇಶ

ಮೈಸೂರು, ಜೂನ್ 15: ಮೈಸೂರಿನ ಪ್ರತಿಷ್ಠಿತ ಪಾರಂಪರಿಕ ಕಟ್ಟಡವೆಂದು ಹೆಸರಾದ ದೇವರಾಜ ಮಾರುಕಟ್ಟೆಯನ್ನು ನೆಲಸಮ ಮಾಡಿ ಹೊಸದಾಗಿ ನಿರ್ಮಾಣ ಮಾಡುವಂತೆ ನ್ಯಾಯಾಲಯ ಆದೇಶ ನೀಡಿರುವುದಾಗಿ ಮೇಯರ್ ಪುಷ್ಪಲತಾ ಜಗನ್ನಾಥ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರುಕಟ್ಟೆಯ ಕೆಲ ಮಳಿಗೆಯವರು, ಒಡೆಯದೆ ನವೀಕರಣಗೊಳಿಸಬೇಕು ಎಂದು ನ್ಯಾಯಾಲಯದ ಮೊರೆ ಹೋಗಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್, ಕಟ್ಟಡ ಶಿಥಿಲಾವಸ್ಥೆಯಲ್ಲಿರುವುದರಿಂದ ಒಡೆದು ಹಾಕಿ ಪುನರ್ ನಿರ್ಮಾಣ ಮಾಡುವಂತೆ ಆದೇಶಿಸಿದೆ ಎಂದರು. ಮಾರುಕಟ್ಟೆ ನವೀಕರಣ ವೇಳೆಯೇ ಒಂದು ಭಾಗ ಕುಸಿತಗೊಂಡಿತ್ತು. ಇದೀಗ ಸಂಪೂರ್ಣ ಕೆಡವಿ ಹೊಸದಾಗಿ ನಿರ್ಮಿಸಲು ಕೌನ್ಸಿಲ್ ತೀರ್ಮಾನ ಕೈಗೊಂಡಿದೆ. ಇದಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನೂ ಸಲ್ಲಿಸಲಾಗಿತ್ತು. ಈ ನಡುವೆ ಪಾರಂಪರಿಕ ಕಟ್ಟಡವನ್ನು ಉಳಿಸಿಕೊಳ್ಳಬೇಕೆಂಬ ಅಭಿಪ್ರಾಯವೂ ಕೇಳಿಬಂದಿತ್ತು ಎಂದು ಹೇಳಿದರು.

Court ordered to demolish Devaraja Market in Mysuru

ಈ ಕುರಿತಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸ್ಥಳ ಪರಿಶೀಲನೆ ನಡೆಸಿದ್ದರು. ಪ್ರಸ್ತಾವನೆ ಸರ್ಕಾರದ ಮಟ್ಟದಲ್ಲಿದೆ. ಸರ್ಕಾರದ ಸೂಚನೆಯಂತೆ ನಾವು ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮೇಯರ್ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+