ಮೈಸೂರು : ಸಿಪಿಸಿ ಪಾಲಿಟೆಕ್ನಿಕ್‌ನಲ್ಲಿ ಅರ್ಜಿ ಆಹ್ವಾನ
ಮೈಸೂರು, ಜೂ. 03 : ಮೈಸೂರು ಸಿಪಿಸಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2015-16 ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 9, 2015.
ಅರ್ಜಿಸಲ್ಲಿಕೆಗೆ ಸಹಾಯಕವಾಗಲು ಸರ್ಕಾರಿ ಸಿಪಿಸಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ದಾಖಲೆ ಪರಿಶೀಲನೆ, ಆನ್‍ಲೈನ್ ಅರ್ಜಿ ಸಲ್ಲಿಕೆ/ ಆಪ್ಷನ್ ಎಂಟ್ರಿ ಸಹಾಯ ಕೇಂದ್ರವನ್ನು ತೆರೆಯಲಾಗಿದೆ. ಅರ್ಜಿ ಸಲ್ಲಿಸಿದ ಬಳಿಕ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿಸಿ ಸ್ವೀಕೃತಿ ಪಡೆಯಬೇಕು. [ಪಾಲಿಟೆಕ್ನಿಕ್ ವಿಳಾಸ]

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಶಾಖೆಯಲ್ಲಿ ಉಳಿತಾಯ ಖಾತೆ ಚಲನ್ ಪಡೆದು, ಕಾರ್ಯ ನಿರ್ವಾಹಕ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಉಳಿತಾಯ ಖಾತೆ ಸಂಖ್ಯೆ ED-KEA-DCET-2015 64097386381 ಅರ್ಜಿ ಶುಲ್ಕವನ್ನು ಜಮಾ ಮಾಡಬೇಕು. [ಕ್ರಿಯಾಶೀಲ ಮಾಧ್ಯಮ ಡಿಪ್ಲೊಮಾ ಕೋರ್ಸಿಗೆ ಆಹ್ವಾನ]
ಅರ್ಜಿ ಶುಲ್ಕ : ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಇತರೆ ವರ್ಗದವರಿಗೆ ರೂ.100 ಹಾಗೂ ಎಸ್‌ಸಿ/ಎಸ್‌ಟಿ/ಪ್ರವರ್ಗ -1ರ ವಿದ್ಯಾರ್ಥಿಗಳಿಗೆ 50 ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಚಲನ್ ಪ್ರತಿಯನ್ನು ಸರ್ಕಾರಿ ಸಿಪಿಸಿ ಪಾಲಿಟೆಕ್ನಿಕ್ ಮೈಸೂರು ಸಂಸ್ಧೆ ಇವರಿಗೆ ಸಲ್ಲಿಸಿ ಅರ್ಜಿ ಪಡೆದು ಜೂನ್ 9ರೊಳಗೆ ಸಲ್ಲಿಸಬೇಕು.
ಅರ್ಜಿಯ ಜೊತೆಗೆ ಮಾಹಿತಿ ಪುಸ್ತಕದಲ್ಲಿ ನೀಡಿರುವ ಮೂಲ ದಾಖಲಾತಿಗಳು, ಮೂಲ ದಾಖಲಾತಿಗಳ 1 ಜೊತೆ ದೃಢೀಕೃತ ಜೆರಾಕ್ಸ್ ಪ್ರತಿ, ಮೊಬೈಲ್ ಸಂಖ್ಯೆ ಮತ್ತು ಈ ಮೇಲ್ ವಿಳಾಸ ಸಹ ನಮೂದಿಸಬೇಕು. ಹೆಚ್ಚಿನ ಮಾಹಿತಿಗೆ www.dte.kar.nic.in ವೆಬ್‌ಸೈಟ್ ಅಥವ ಸರ್ಕಾರಿ ಸಿಪಿಸಿ ಪಾಲಿಟೆಕ್ನಿಕ್ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.












Click it and Unblock the Notifications