ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮುಂಡಿ ಬೆಟ್ಟದ ನಂದಿ ವಿಗ್ರಹದಲ್ಲಿ ಮತ್ತೆ ಬಿರುಕು

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಫೆಬ್ರವರಿ 19: ಸುಮಾರು 400 ವರ್ಷಗಳಷ್ಟು ಹಳೆಯದಾದ ಮೈಸೂರು ಚಾಮುಂಡಿ ಬೆಟ್ಟದಲ್ಲಿನ ನಂದಿ ವಿಗ್ರಹದಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.

ಈ ವಿಗ್ರಹಕ್ಕೆ ಪೂಜೆ ಸಲ್ಲಿಸುವ ಕೆಲವು ಭಕ್ತರು ಈ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ. ಈ ಕುರಿತು ಜಿಲ್ಲಾಡಳಿತವು ನೀಡಿದ ಸೂಚನೆಯ ಮೇರೆಗೆ, ಪುರಾತತ್ವ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ ಮಂಗಳವಾರ ನಂದಿ ವಿಗ್ರಹ ಪರಿಶೀಲನೆ ನಡೆಸಿದೆ.

ಪ್ರವಾಸಿ ತಾಣಗಳಿಗೆ ಆನ್ ಲೈನ್ ಟಿಕೆಟ್ ಜಾರಿಗೆ ಚಿಂತನೆಪ್ರವಾಸಿ ತಾಣಗಳಿಗೆ ಆನ್ ಲೈನ್ ಟಿಕೆಟ್ ಜಾರಿಗೆ ಚಿಂತನೆ

ನಂದಿ ವಿಗ್ರಹ ಬಿರುಕು ಬಿಟ್ಟಿದೆ ಎಂಬ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ, ಮೈಸೂರು ಜಿಲ್ಲಾಡಳಿತ ಪಾರಂಪರಿಕ ತಜ್ಞರ ಸಮಿತಿಯನ್ನು ರಚಿಸಿ ವಿಗ್ರಹ ಪರಿಶೀಲನೆಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಶಿಲ್ಪಿ ತಂಡ ವಿಗ್ರಹ ಪರಿಶೀಲನೆ ನಡೆಸಿದ್ದಾರೆ.

Crack Appeared Again In Nandi Statue Of Chamundi Hills

ಕೆಲವು ಕಡೆ ಬಿರುಕು ಬಿಟ್ಟಿರುವ ರೀತಿ ಮೇಲ್ನೋಟಕ್ಕೆ ಕಾಣುತ್ತಿದ್ದು, ಆದರೆ ಅದು ಬಿರುಕಲ್ಲ. ಕಲ್ಲಿನ ನೈಜತೆ ಎಂದು ಸಮಿತಿ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಂಪೂರ್ಣವಾಗಿ ಪರಿಶೀಲನೆ ನಡೆಸಿ ಸಮಿತಿ ವರದಿ ನೀಡಲಿದ್ದು, ಬಿರುಕು ಬಿಟ್ಟಿದೆ ಎಂದು ತಜ್ಞರು ಸ್ಪಷ್ಟಪಡಿಸಿದರೆ ಅದನ್ನು ಸೂಕ್ತ ರೀತಿಯಲ್ಲಿ ದುರಸ್ತಿಗೊಳಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದೆ.

Crack Appeared Again In Nandi Statue Of Chamundi Hills

ಫೆ.20 ರಂದು ಜಯಚಾಮರಾಜ ಒಡೆಯರ್ ಜನ್ಮಶತಮಾನೋತ್ಸವ ಸಮಾರಂಭಫೆ.20 ರಂದು ಜಯಚಾಮರಾಜ ಒಡೆಯರ್ ಜನ್ಮಶತಮಾನೋತ್ಸವ ಸಮಾರಂಭ

ಚಾಮುಂಡಿ ಬೆಟ್ಟದ ಪ್ರಮುಖ ಆಕರ್ಷಣೆ ಅಗಿರುವ ಈ ನಂದಿ ವಿಗ್ರಹದ ಕಾಲು, ಕುತ್ತಿಗೆ ಹಾಗೂ ಮುಖದ ಕೆಲವೆಡೆ ಬಿರುಕು ಕಾಣಿಸಿಕೊಂಡಿದೆ ಎಂದು ಭಕ್ತರು ಜಿಲ್ಲಾಡಳಿತಕ್ಕೆ ತಿಳಿಸಿದ್ದರು. ಕಪ್ಪಾಗಿದ್ದ ನಂದಿ ವಿಗ್ರಹವನ್ನು ಇತ್ತೀಚೆಗೆ ಪಾಲಿಶ್ ಮಾಡಿ ಹೊಸ ರೂಪ ನೀಡಲಾಗಿದ್ದ ವೇಳೆ ಈ ಬಿರುಕು ಪತ್ತೆ ಆಗಿತ್ತು.

English summary
It is said that crack appeared again in 400 years nandi statue of chamundi hills today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X