ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನ ಚಾಮುಂಡಿ ಬೆಟ್ಟದ ನಂದಿ ವಿಗ್ರಹದಲ್ಲಿ ಬಿರುಕು

|
Google Oneindia Kannada News

ಮೈಸೂರು, ಜೂನ್ 15: ಸಾಂಸ್ಕೃತಿಕ ನಗರಿಯ ಪ್ರಸಿದ್ಧ ಚಾಮುಂಡಿ ಬೆಟ್ಟದ ಮೇಲಿರುವ ನಂದಿ ವಿಗ್ರಹದಲ್ಲಿ ಸ್ವಲ್ಪ ಪ್ರಮಾಣದ ಬಿರುಕು ಕಂಡು ಬಂದಿದ್ದು, ಪಾರಂಪರಿಕ ತಜ್ಞರಲ್ಲಿ ಆತಂಕ ಮೂಡಿಸಿದೆ.

 ಬಸವಣ್ಣನ ಐಕ್ಯಸ್ಥಳದಲ್ಲಿನ ಇಷ್ಟಲಿಂಗದಲ್ಲಿ ಬಿರುಕು ಬಸವಣ್ಣನ ಐಕ್ಯಸ್ಥಳದಲ್ಲಿನ ಇಷ್ಟಲಿಂಗದಲ್ಲಿ ಬಿರುಕು

ಮೈಸೂರು ಜಿಲ್ಲಾ ಪಾರಂಪರಿಕ ಸಮಿತಿ ಈ ಕುರಿತು ಸ್ಥಳ ಪರಿಶೀಲನೆ ನಡೆಸಿದ್ದು, ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಅಭಿರಾಮ್ ಶಂಕರ್ ಅವರಿಗೆ ಸದ್ಯದಲ್ಲೇ ವರದಿ ಸಲ್ಲಿಸಲಿದೆ. ಮೈಸೂರು ಪಾರಂಪರಿಕ ಸಮಿತಿ ಸದಸ್ಯರಾಗಿರುವ ಇತಿಹಾಸ ತಜ್ಞ ಪ್ರೊ. ರಂಗರಾಜು ಅವರು ಇತ್ತೀಚೆಗೆ ಬೆಟ್ಟಕ್ಕೆ ತೆರಳಿದ್ದ ವೇಳೆ ನಂದಿ ವಿಗ್ರಹದ ಕಿಬ್ಬೊಟ್ಟೆ ಬಳಿ ಅಲ್ಪ ಪ್ರಮಾಣದ ಬಿರುಕು ಬಿಟ್ಟಿದ್ದನ್ನು ಗಮನಿಸಿದ್ದರು. ನಂತರ ಈ ವಿಷಯವನ್ನು ಪಾರಂಪರಿಕ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸಿದಾಗ, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸಲು ಸೂಚಿಸಿದರು.

Crack in Mysuru chamundi hill nandi statue

ವಿಗ್ರಹದ ಸಂರಕ್ಷಣೆಗೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಪ್ರಮುಖವಾಗಿ ಶಿಫಾರಸ್ಸು ಮಾಡುತ್ತೇವೆ. ವಿಗ್ರಹದಲ್ಲಿ ಬಿರುಕು ಆಗದಂತೆ ತಡೆಯುವ ಕಾರ್ಯವನ್ನು ಪ್ರಾಚ್ಯವಸ್ತು ಇಲಾಖೆ ಮಾಡಲಿದೆ ಎಂದು ಪ್ರೊ. ರಂಗರಾಜು ತಿಳಿಸಿದ್ದಾರೆ.

English summary
Famous nandi statue in Mysuru chamundi hills cracked little bit.Heritage department officials are examining the reason and gave assurance for repair.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X