ಮೈಸೂರಿನ ನೀರು ಶುದ್ಧೀಕರಣ ಘಟಕದ ಮೇಲೆ ಮೊಸಳೆ ಪ್ರತ್ಯಕ್ಷ
ಮೈಸೂರು,
ಜನವರಿ 13: ಇಲ್ಲಿನ ವಿದ್ಯಾರಣ್ಯಪುರಂನಲ್ಲಿರುವ ಸೂಯಜ್ ಫಾರಂನ ವಾಟರ್ ಫಿಲ್ಟರ್ ಘಟಕದಲ್ಲಿ ಭಾನುವಾರ ಇದ್ದಕ್ಕಿದ್ದಂತೆ ಮೊಸಳೆಯೊಂದು ಪತ್ತೆಯಾಗಿ ಆತಂಕ ಸೃಷ್ಟಿಸಿತ್ತು. id="toptextpromo"> id='are-slot-1' class='oiad oi-axt oiadv'>id='top-searched-articles'>
ಘಟಕದ
ದಂಡೆಯ ಮೇಲೆ ಮೊಸಳೆ ಮಲಗಿರುವುದನ್ನು ಕಂಡ ಪ್ರತ್ಯಕ್ಷದರ್ಶಿಯೊಬ್ಬರು ಸಿಬ್ಬಂದಿಯನ್ನು ಕರೆದು ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ. ಆಗ ಸ್ಥಳಕ್ಕೆ ಧಾವಿಸಿದ ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಗಮನಿಸಿದಾಗ ಮೊಸಳೆಯು ನಿತ್ರಾಣಗೊಂಡಿದ್ದು, ಚಲಿಸಲು ಕಷ್ಟಪಡುತ್ತಿರುವುದು ಕಂಡುಬಂದಿದೆ. ನಂತರ ಈ ಪ್ರದೇಶಕ್ಕೆ ಸಾರ್ವಜನಿಕ ಪ್ರವೇಶವನ್ನು ನಿಲ್ಲಿಸಿ ಅರಣ್ಯಾಧಿಕಾರಿಗಳು ಮೊಸಳೆಯನ್ನು ಬೇರೆಡೆ ಸ್ಥಳಾಂತರ ಮಾಡಿ ಸಿಬ್ಬಂದಿ ಆತಂಕವನ್ನು ದೂರ ಮಾಡಿದ್ದಾರೆ.











Click it and Unblock the Notifications