ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನ ನೀರು ಶುದ್ಧೀಕರಣ ಘಟಕದ ಮೇಲೆ ಮೊಸಳೆ ಪ್ರತ್ಯಕ್ಷ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜನವರಿ 13: ಇಲ್ಲಿನ ವಿದ್ಯಾರಣ್ಯಪುರಂನಲ್ಲಿರುವ ಸೂಯಜ್ ಫಾರಂನ ವಾಟರ್ ಫಿಲ್ಟರ್ ಘಟಕದಲ್ಲಿ ಭಾನುವಾರ ಇದ್ದಕ್ಕಿದ್ದಂತೆ ಮೊಸಳೆಯೊಂದು ಪತ್ತೆಯಾಗಿ ಆತಂಕ ಸೃಷ್ಟಿಸಿತ್ತು.

Crocodile Appeared On Water Filter Unit In Mysuru

ಘಟಕದ ದಂಡೆಯ ಮೇಲೆ ಮೊಸಳೆ ಮಲಗಿರುವುದನ್ನು ಕಂಡ ಪ್ರತ್ಯಕ್ಷದರ್ಶಿಯೊಬ್ಬರು ಸಿಬ್ಬಂದಿಯನ್ನು ಕರೆದು ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ. ಆಗ ಸ್ಥಳಕ್ಕೆ ಧಾವಿಸಿದ ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಗಮನಿಸಿದಾಗ ಮೊಸಳೆಯು ನಿತ್ರಾಣಗೊಂಡಿದ್ದು, ಚಲಿಸಲು ಕಷ್ಟಪಡುತ್ತಿರುವುದು ಕಂಡುಬಂದಿದೆ. ನಂತರ ಈ ಪ್ರದೇಶಕ್ಕೆ ಸಾರ್ವಜನಿಕ ಪ್ರವೇಶವನ್ನು ನಿಲ್ಲಿಸಿ ಅರಣ್ಯಾಧಿಕಾರಿಗಳು ಮೊಸಳೆಯನ್ನು ಬೇರೆಡೆ ಸ್ಥಳಾಂತರ ಮಾಡಿ ಸಿಬ್ಬಂದಿ ಆತಂಕವನ್ನು ದೂರ ಮಾಡಿದ್ದಾರೆ.

English summary
On Sunday, a crocodile was found on the water filter unit of Suez Farm in Vidyaranyapuram mysuru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X