Darshan Dhruvanarayan files nomination: ದರ್ಶನ್ ಧ್ರುವನಾರಾಯಣ ನಾಮಪತ್ರ ಸಲ್ಲಿಕೆ
ನಂಜನಗೂಡು, ಏಪ್ರಿಲ್ 17: ಸೋಮವಾರ ನಂಜನಗೂಡು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಯಾಗಿ ದರ್ಶನ್ ಧ್ರುವನಾರಾಯಣ್ ಅವರು ನಾಮಪತ್ರ ಸಲ್ಲಿಸಿದರು.
ಕಳೆದ ಒಂದು ತಿಂಗಳಿಂದ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಿದ್ದ ಅವರು ಸೋಮವಾರ ನಂಜನಗೂಡು ತಹಸೀಲ್ದಾರ್ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಇ ವೇಳೆ ಅವರಿಗೆ ವರುಣಾ ವಿಧಾನಸಭಾ ಕ್ಷೇತ್ರದ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಸಾಥ್ ನೀಡಿದರು.

ಇತ್ತೀಚೆಗೆ ದರ್ಶನ್ ಧ್ರುವನಾರಾಯಣ್ ಅವರ ತಂದೆ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್ ಧ್ರುವನಾರಾಯಣ್ ಅವರು ಅಕಾಲಿಕವಾಗಿ ನಿಧನ ಹೊಂದಿದ್ದರು. ಬಳಿಕ ಅವರ ಪತ್ನಿ ವೀಣಾ ಧ್ರುವನಾರಾಯಣ್ ಅವರು ನಿಧನ ಹೊಂದಿದ್ದರು. ಒಂದೇ ತಿಂಗಳಲ್ಲಿ ದರ್ಶನ್ ಧ್ರುವನಾರಾಯಣ್ ಅವರು ತಂದೆ ತಾಯಿ ಇಬ್ಬರನ್ನು ಕಳೆದುಕೊಂಡಿದ್ದರು.
ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್ ಧ್ರುವನಾರಾಯಣ್ ಅವರು ಅಕಾಲಿಕವಾಗಿ ನಿಧನ ಹೊಂದಿದಾಗ ಕ್ಷೇತ್ರದ ಟಿಕೆಟ್ ಅನ್ನು ಅವರ ಮಗ ದರ್ಶನ್‌ಗೆ ನೀಡಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಧ್ರುವನಾರಾಯಣ್ ಅವರ ಬೆಂಬಲಿಗರು ಒತ್ತಡ ತಂದಿದ್ದರು. ಮುಂದಿವರೆದು ದರ್ಶನ್ ಧ್ರುವನಾರಾಯಣ್ ಅವರಿಗೆ ಟಿಕೆಟ್ ನೀಡದಿದ್ದರೆ ಮೈಸೂರು ಹಾಗೂ ಚಾಮರಾಜನಗರ ಎರಡೂ ಜಿಲ್ಲೆಗಳಲ್ಲಿ ಕಾಂಗ್ರೆಸ್ ಸೋಲಿಸುತ್ತೇವೆ ಎಂದು ಅವರು ಹೇಳಿದ್ದರು.
ಅದರಂತೆ ಕಾಂಗ್ರೆಸ್ ಟಿಕೆಟ್ ಅನ್ನು ದರ್ಶನ್ ಧ್ರುವನಾರಾಯಣ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಈ ಹಿಂದೆ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಎಚ್‌ಸಿ ಮಹಾದೇವಪ್ಪ ಅವರು ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯದಿಂದ ಟಿ ನರಸೀಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಇಳಿಯಬೇಕಾಯಿತು.

ಎಚ್‌ಸಿ ಮಹಾದೇವಪ್ಪ ಅವರು ತಾವು ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಕಣಕ್ಕೆ ಇಳಿದು ತಮ್ಮ ಮಗ ಸುನೀಲ್ ಬೋಸ್ ಅವರನ್ನು ಟಿ ನರಸೀಪುರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಪ್ರಯತ್ನ ಮಾಡಿದ್ದರು. ಆದರೆ ನಂಜನಗೂಡು ಸೇರಿದಂತೆ ಮೈಸೂರು ಜಿಲ್ಲಾ ಕಾರ್ಯಕರ್ತರು ದರ್ಶನ್ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯ ಮಾಡಿದ್ದರಿಂದ ದರ್ಶನ್‌ಗೆ ಟಿಕೆಟ್ ನೀಡಲಾಯಿತು.
ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ ಅವರು ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ ಅವರು ಇಂದು ಅಪಾರ ಜನಸ್ತೋಮದೊಂದಿಗೆ ಮೆರವಣಿಗೆಯ ಮೂಲಕ ತೆರಳಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಹಾಜರಿದ್ದು ಶುಭ ಹಾರೈಸಿ, ದರ್ಶನ್ ಅವರನ್ನು ಗರಿಷ್ಠ ಮತಗಳ ಅಂತರದಿಂದ ಗೆಲ್ಲಿಸುವಂತೆ ನಂಜನಗೂಡಿನ ಮತದಾರ ಬಂಧುಗಳಲ್ಲಿ ಮನವಿ ಮಾಡಿದೆ ಎಂದು ಟ್ವೀಟ್ ಮಾಡಿದ್ದಾರೆ.












Click it and Unblock the Notifications