BREAKING: ನಾನು ಬೆದರಿಸುವಂತೆ ಹೇಳಿದ್ದೆ: ನಟ ದರ್ಶನ್ ಮೊದಲ ಪ್ರತಿಕ್ರಿಯೆ

ಬೆಂಗಳೂರು, ಜೂನ್ 11. ಗೆಳತಿ ಪವಿತ್ರಾಗೌಡ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಸಂದೇಶ ಮಾಡಿದ್ದ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವದ ಬಳಿಕ ನಟ ದರ್ಶನ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಬಂಧನ ಬಳಿಕ ಪೊಲೀಸರ ವಿಚಾರಣೆ ವೇಳೆ ಮಾತನಾಡಿದ ನಟ ದರ್ಶನ್, ನಾನು ರೇಣುಕಾಸ್ವಾಮಿ ಕೊಲೆ ಮಾಡಲು ಹೇಳಿಲ್ಲ. ರೇಣುಕಾಸ್ವಾಮಿಯನ್ನು ಬೆದರಿಸುವಂತೆ ಮಾತ್ರ ಹೇಳಿದ್ದೆ ಎಂದು ಅವರು ಪೊಲೀಸರ ಕೆಲವು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

Darshan First Reaction after Arrest in Renuka Swamy Murder Case

ಮೈಸೂರಿನಲ್ಲಿ ನಟ ದರ್ಶನ್‌ನನ್ನು ಬಂಧಿಸಿರುವ ಬೆಂಗಳೂರು ಕಾಮಾಕ್ಷಿಪಾಳ್ಯ ಪೊಲೀಸರು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಇಟ್ಟು ವಿಚಾರಣೆ ನಡೆಸುತ್ತಿದ್ದಾರೆ. ಬೆಳಗ್ಗೆಯಿಂದಲೇ ಇಟ್ಟುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ದರ್ಶನ್ ನನ್ನು ವಿಚಾರಣೆ ನಡೆಸುತ್ತಿರುವ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಕೊಲೆ ಪ್ರಕರಣದ ವಿಚಾರವಾಗಿ, ನಟನ ಪ್ರೇಯಸಿ ಪವಿತ್ರಾ ಗೌಡರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೊಲೆಯಲ್ಲಿ ಇವರದ್ದೇನಾದರೂ ಪಾತ್ರವಿ ಇದೆಯೇ? ಇವರ ಕುಮ್ಮಕ್ಕಿನಿಂದಲೇ ಹತ್ಯೆ ನಡೆಯಿತೇ? ಎಂಬೆಲ್ಲ ಆಯಾಮದಲ್ಲಿ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಸದ್ಯ ವಿಚಾರಣೆ ಮುಂದುವರೆದಿದೆ.

ಮೃತನ ಪತ್ನಿ ಮೂರು ತಿಂಗಳ ಗರ್ಭಿಣಿ

ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಮೃತ ರೇಣುಕಸ್ವಾಮಿ ಪತ್ನಿ ಮೂರು ತಿಂಗಳ ಗರ್ಭಿಣಿ ಎಂಬ ಮಾಹಿತಿ ಲಭ್ಯವಾಗಿದೆ. ಇಂತಹ ಸಂದರ್ಭದಲ್ಲಿ ಆವರ ಪತಿ ನಟ ದರ್ಶನ್ ಸೂಚನೆ ಮೇರೆಗೆ ಕೊಲೆ ಆಗಿದ್ದಾರೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತ ರೇಣುಕಸ್ವಾಮಿ ಅಪೋಲೋ ಮೆಡಿಕಲ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇನ್ನೂ ಮೃತ ರೇಣುಕಾಸ್ವಾಮಿ ಅವರು ಪವಿತ್ರ ಗೌಡ ಅವರ ಸಂಬಂಧಿಯು ಎಂಬ ಮಾಹಿತಿ ಕೂಡ ತಿಳಿದು ಬಂದಿದೆ. ಮೃತ ವ್ಯಕ್ತಿ ಪವಿತ್ರ ಗೌಡ ಅವರಿಗೆ ಅಶ್ಲೀಲ ಪೋಟೋ, ಮೆಸೇಜ್ ಕಳಿಸುತ್ತಿದ್ದ. ಇದರಿಂದ ಕೋಪಗೊಂಡ ನಟ ದರ್ಶನ್ ಕೊಲೆ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+