ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ನಡೆದಿದ್ದು ಐಟಿ ದಾಳಿಯಲ್ಲ!

Recommended Video

      ದರ್ಶನ್ ಗೆ ಐಟಿ ಶಾಕ್ | ಮೈಸೂರಿನ ಫಾರ್ಮ್ ಹೌಸ್ ಮೇಲೆ ಐಟಿ ದಾಳಿ | Oneindia Kannada

      ಮೈಸೂರು, ಏಪ್ರಿಲ್ 15:ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರಕ್ಕಿಳಿದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಫಾರ್ಮ್ ಹೌಸ್ ಮೇಲೆ ನಡೆದಿದ್ದು ಐಟಿ ದಾಳಿಯಲ್ಲ, ಅದು ಚುನಾವಣಾ ಅಧಿಕಾರಿಗಳ ಪರಿಶೀಲನೆ ಎಂಬ ಸ್ಪಷ್ಟ ಮಾಹಿತಿ ಇದೀಗ ಲಭ್ಯವಾಗಿದೆ.

      ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

      ಮೈಸೂರಿನ ಟಿ. ನರಸೀಪುರ ರಸ್ತೆಯಲ್ಲಿರುವ ದರ್ಶನ್ ತೂಗುದೀಪ ಫಾರ್ಮ್ ಹೌಸ್ ಮೇಲೆ ಚುನಾವಣೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ಬಗ್ಗೆ ನಟ ದರ್ಶನ್ ಪ್ರತಿಕ್ರಿಯೆ ನೀಡಿದ್ದು, ಪ್ರಾಣಿ-ಪಕ್ಷಿಗಳನ್ನು ನೋಡಿಕೊಂಡು ಹೋಗ್ಲಿ ಬಿಡಿ ಎಂದು ಕೂಲ್ ಆಗಿಯೇ ಉತ್ತರ ನೀಡಿದ್ದಾರೆ.

      Darshans farm house has not been raided by IT officials

      ನಟ ದರ್ಶನ್ ಫಾರಂ ನಲ್ಲಿ ಚುನಾವಣೆಗೆ ಹಣ ಹಂಚಲು ಹಣ ಇಟ್ಟಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಟಿ.ನರಸೀಪುರ ತಹಶೀಲ್ದಾರ್ ಗೆ ಸಾರ್ವಜನಿಕರು ಕರೆ ಮಾಡಿದ್ದರು. ಸಾರ್ವಜನಿಕರ ದೂರಿನ ಮಲೆ ದರ್ಶನ್ ಫಾರಂ ಹೌಸ್ ನಲ್ಲಿ ತಪಾಸಣೆ ನಡೆಸಲಾಗಿದೆ.

      Darshans farm house has not been raided by IT officials

      ತಪಾಸಣೆ ಮಾಡಿದ ವೇಳೆ ಯಾವುದೇ ಹಣ ಪತ್ತೆಯಾಗಿಲ್ಲ ಎಂಬ ಮಾಹಿತಿಯನ್ನು ತಿ.ನರಸೀಪುರ ತಹಶೀಲ್ದಾರ್ ನೀಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+