ಅಪಘಾತಕ್ಕೊಳಗಾದ ದರ್ಶನ್ ಕಾರು ನಾಪತ್ತೆ... ಎಲ್ಹೋಯ್ತು?

ಮೈಸೂರು, ಸೆಪ್ಟೆಂಬರ್ 24: ಮೈಸೂರಿನಲ್ಲಿ ಇಂದು ಬೆಳಿಗ್ಗೆ ಅಪಘಾತಕ್ಕೊಳಗಾದ ನಟ ದರ್ಶನ್ ಅವರ ಆಡಿ ಕ್ಯೂ7 ಕಾರು ನಾಪತ್ತೆಯಾಗಿದ್ದು ಅಚ್ಚರಿ ಮೂಡಿಸಿದೆ.

ದರ್ಶನ್ ಕಾರುಗಳ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದರೆ ಅಭಿಮಾನಿಗಳಲ್ಲಿ ಆತಂಕ ಹೆಚ್ಚುತ್ತದೆ ಎಂಬ ಕಾರಣಕ್ಕೆ ಕಾರನ್ನು ನಾಪತ್ತೆ ಮಾಡಲಾಗಿದೆ ಎಂದೂ ಹೇಳಲಾಗುತ್ತಿದೆ. ಕಾರು ಪೊಲೀಸರ ವಶದಲ್ಲಿದೆಯೇ ಎಂಬ ಬಗ್ಗೆ ವಿವಿ ಪುರಂ ಠಾಣೆಯ ಪೊಲೀಸರಿಂದ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಕಾರು ಎಲ್ಲಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ.

ಸೋಮವಾರ ಬೆಳಿಗ್ಗೆ 3 ಗಂಟೆಯ ಸಮಯದಲ್ಲಿ ಸಂಭವಿಸಿದ ಅಪಘಾತದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಲ ಮುಂಗೈ ಮುರಿದಿದೆ. ಅವರು ಶಸ್ತ್ರ ಚಿಕಿತ್ಸೆಗೊಳಗಾಗಿದ್ದು, ಪತ್ನಿ ವಿಜಯಲಕ್ಷ್ಮಿ, ಮಗ ಮತ್ತು ಬಂಧುಗಳ ಆಸ್ಪತ್ರೆಗೆ ಆಗಮಿಸಿದ್ದಾರೆ.

Darshans car which met with an accident missing

ಅಪಘಾತದ ಸಂದರ್ಭದಲ್ಲಿ ದರ್ಶನ್ ಅವರೇ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದ್ದು, ಅವರೊಂದಿಗೆ ಈ ಸಂದರ್ಭದಲ್ಲಿ ನಟರಾದ ದೇವರಾಜ್, ಪ್ರಜ್ವಲ್ ದೇವರಾಜ್ ಇದ್ದರು. ಅವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ.

ದರ್ಶನ್ ಸ್ಥಿತಿ ಹೇಗಿದೆ ?, ವಿನೋದ್ ಪ್ರಭಾಕರ್ ನೀಡಿದ ಮಾಹಿತಿ

ಮೈಸೂರಿನಿಂದ ಬೆಂಗಳೂರಿಗೆ ನಟರು ವಾಪಸ್ಸಾಗುತ್ತಿದ್ದ ವೇಳೆಯಲ್ಲಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆ ಪರಿಣಾಮ ಈ ದುರಂತ ಸಂಭವಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+