• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರು ದಸರಾ: ಜೋರಾಗಿ ನಡೆಯುತ್ತಿದೆ ಜಂಬೂಸವಾರಿ ಉತ್ಸವಮೂರ್ತಿ ಶುಚಿ ಕಾರ್ಯ

By ಮೈಸೂರು ಪ್ರತಿನಿಧಿ
|

ಮೈಸೂರು, ಅಕ್ಟೋಬರ್ 13: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಮೈಸೂರು ಜಿಲ್ಲಾಡಳಿತ ಸರಳ, ಸುಸೂತ್ರ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಒಂದು ಕಡೆ ಗಜಪಡೆಗೆ ಅರಮನೆ ಆವರಣದಲ್ಲಿ ತಾಲೀಮು ನಡೆಯುತ್ತಿದ್ದರೆ, ಮತ್ತೊಂದೆಡೆ ಅರಮನೆ ಒಳಗಡೆಯಲ್ಲೂ ದಸರಾ ಅಚರಣೆಗೆ ಸಿದ್ಧತೆಗಳು ನಡೆಯುತ್ತಿವೆ.

ಅದೇ ರೀತಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಜಂಬೂಸವಾರಿಗೆ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಸಜ್ಜುಗೊಳಿಸಲಾಗುತ್ತಿದೆ. ಚಾಮುಂಡಿಬೆಟ್ಟ ದೇವಾಲಯದ ಆವರಣದಲ್ಲಿ ಉತ್ಸವ ಮೂರ್ತಿಯನ್ನು ಶುಚಿಗೊಳಿಸುವ ಕಾರ್ಯ ಮಂಗಳವಾರ ನಡೆಯಿತು.

ಪಂಚಲೋಹದಲ್ಲಿ ತಯಾರಿಸಲಾದ ವಿಶೇಷ ಮೂರ್ತಿಯನ್ನು ನುರಿತ ಸ್ವಯಂ ಸೇವಕರು ಚಾಮುಂಡಿಬೆಟ್ಟ ದೇವಾಲಯದಲ್ಲಿ ಶುಚಿಗೊಳಿಸಿದರು. ಕೆಲವು ದಿನಗಳ ಹಿಂದೆಯಷ್ಟೆ ಅರಮನೆಯಿಂದ ಚಾಮುಂಡಿ ಬೆಟ್ಟಕ್ಕೆ ಉತ್ಸವಮೂರ್ತಿಯನ್ನು ತರಲಾಗಿತ್ತು.

ಅಂಬಾರಿ ಹೊರುವ ಅಭಿಮನ್ಯುಗೆ ತಾಲೀಮು; ಗೋಪಿ, ವಿಕ್ರಮನ ಸಾಥ್

ನವರಾತ್ರಿಯಲ್ಲಿ ಉತ್ಸವಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ನಂತರ ಜಂಬೂಸವಾರಿ ದಿನ ಅರಮನೆಗೆ ಚಾಮುಂಡೇಶ್ವರಿ ಉತ್ಸವಮೂರ್ತಿಯನ್ನು ತಂದು ಚಿನ್ನದ ಅಂಬಾರಿಯಲ್ಲಿ ಮೆರವಣಿಗೆ ಮಾಡಲಾಗುವುದು.

ಅಕ್ಟೋಬರ್ 17 ರಂದು ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಿ, ನಂತರ ದಸರಾಗೆ ಚಾಲನೆ ನೀಡಲಾಗುವುದು.

English summary
The Days Counting for the world famous Dasara Mahotsav has begun and the Mysuru District Administration is preparing for a simple celebration.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X