ಮೈಸೂರು ದಸರಾ- 2021ರ ಉದ್ಘಾಟನೆ ಹಾಗೂ ಕಾರ್ಯಕ್ರಮಗಳ ಪಟ್ಟಿ
ಮೈಸೂರು, ಸೆಪ್ಟೆಂಬರ್ 8: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ನೇತೃತ್ವದಲ್ಲಿ ದಸರಾ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಯಿತು.
ಕೊರೊನಾ ಆತಂಕದ ನಡುವೆಯೇ ಕಳೆದ ಬಾರಿಯಂತೆ ಈ ಬಾರಿಯೂ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ ಜರುಗಲಿದೆ. ಮೈಸೂರು ದಸರಾವನ್ನು ಎಷ್ಟೇ ಸರಳವಾಗಿ ಆಚರಿಸಿದರೂ ಅದರ ಮುಖ್ಯ ಆಕರ್ಷಣೆ ಜಂಬೂ ಸವಾರಿ. ಹೀಗಾಗಿ ಈ ಬಾರಿಯ ದಸರಾ ಸಂಬಂಧಿತ ಸಭೆಯಲ್ಲಿ ಜಂಬೂ ಸವಾರಿ ಸೇರಿದಂತೆ ಕೆಲ ವಿಚಾರಗಳ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗಿದ್ದು, ದಸರಾ ಆನೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಮೈಸೂರು ದಸರಾ ಕಾರ್ಯಕಾರಿ ಸಮಿತಿ ಸಭೆ ಮುಕ್ತಾಯದ ಬಳಿಕ ಸಚಿವ ಎಸ್.ಟಿ. ಸೋಮಶೇಖರ್ ಸುದ್ದಿಗೋಷ್ಠಿ ನಡೆಸಿ ದಸರಾ ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ನೀಡಿದರು.

ಮೈಸೂರು ದಸರಾ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ
* ಸೆಪ್ಟೆಂಬರ್ 13 ರಂದು ಬೆಳಿಗ್ಗೆ 9.30ಕ್ಕೆ ಗಜಪಡೆ ಪೂಜೆ ಮಾಡಿ, ವೀರನಹೊಸಹಳ್ಳಿಯಿಂದ ಎಂಟು ಆನೆಗಳನ್ನು ಕರೆ ತರಲಾಗುತ್ತದೆ.
* ಸೆಪ್ಟೆಂಬರ್ 16 ರಂದು ಮೈಸೂರು ಅರಮನೆ ಬಳಿ ಗಜಪಡೆಯನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಗುವುದು
* ಅಕ್ಟೋಬರ್ 7ರಿಂದ 15 ರವರೆಗೆ ದಸರಾ ಮಹೋತ್ಸವದಲ್ಲಿ ದೀಪಾಲಂಕಾರವಿರುತ್ತದೆ.
* ಅಕ್ಟೋಬರ್ 1ರಿಂದ 9 ದಿನ ಅರಮನೆ ಆವರಣದಲ್ಲಿ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳಿರುತ್ತವೆ

* ಅಕ್ಟೋಬರ್ 7ರಂದು ಚಾಮುಂಡಿ ಬೆಟ್ಟದಲ್ಲಿ ಅಧಿಕೃತ ಮೈಸೂರು ದಸರಾ ಉದ್ಘಾಟನೆ
* ಅಕ್ಟೋಬರ್ 15ರ ಸಂಜೆ 4.36ಕ್ಕೆ ಮೈಸೂರು ಅರಮನೆ ಆವರಣದಲ್ಲಿ ನಂದಿ ಪೂಜೆ
* ಅಕ್ಟೋಬರ್ 15ರ ಸಂಜೆ 5ಕ್ಕೆ ಅರಮನೆ ಆವರಣದಲ್ಲಿ ಸರಳ ಹಾಗೂ ಸಾಂಪ್ರದಾಯಿಕವಾಗಿ ಜಂಬೂಸವಾರಿ
* ಅಕ್ಟೋಬರ್ 16ರಂದು ಗಜಪಡೆಗೆ ಬೀಳ್ಕೊಡುಗೆ
ಸೆ.16 ರಂದು ಅರಮನೆಗೆ ಗಜಪಡೆ ಎಂಟ್ರಿ
ಕ್ಯಾಪ್ಟನ್ ಅಭಿಮನ್ಯು ತನ್ನ ಇತರ ಏಳು ಆನೆಗಳ ತಂಡದೊಂದಿಗೆ ಸೆಪ್ಟೆಂಬರ್ 16 ರಂದು ಮೈಸೂರು ಅರಮನೆಗೆ ಎಂಟ್ರಿ ಕೊಡಲಿದೆ. ಈ ಬಾರಿ ಅಭಿಮನ್ಯು ಸೇರಿ 8 ಆನೆಗಳು ಈ ಬಾರಿಯ ದಸರಾದಲ್ಲಿ ಭಾಗಿಯಾಗಲಿವೆ.

55 ವರ್ಷ ವಯಸ್ಸಿನ ಅಭಿಮನ್ಯು ಮೈಸೂರು ದಸರಾ ಜಂಬೂ ಸವಾರಿ ತಂಡದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಆನೆಗಳಲ್ಲಿ ಒಂದಾಗಿದೆ. ಈ ವರ್ಷವೂ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿ ದೇವಿಯ ವಿಗ್ರಹವನ್ನು ಹೊತ್ತೊಯ್ಯಲಿದ್ದಾನೆ.
ಅಭಿಮನ್ಯು ಕಳೆದ 19 ವರ್ಷಗಳಿಂದ ಜಂಬೂ ಸವಾರಿಯಲ್ಲಿ ಭಾಗವಹಿಸುತ್ತಿದ್ದು, ಅತಿ ಹೆಚ್ಚು ದಸರಾ ಆಚರಣೆಗಳಲ್ಲಿ ಭಾಗವಹಿಸಿದ ದಾಖಲೆ ಹೊಂದಿದ್ದಾನೆ. ಅಭಿಮನ್ಯು ಆನೆ ಕೊಡಗು ಜಿಲ್ಲೆಯ ಮತ್ತಿಗೋಡು ಆನೆ ಶಿಬಿರದಲ್ಲಿ ನೆಲೆಸಿದೆ. ಅಭಿಮನ್ಯು 2.68 ಮೀಟರ್ ಎತ್ತರ ಮತ್ತು 3.51 ಮೀಟರ್ ಉದ್ದವಿದ್ದು, ಸುಮಾರು 4,550 ಕೆಜಿ ತೂಕ ಹೊಂದಿದೆ.
ಈ ಬಾರಿ ಗಜಪಡೆಯಲ್ಲಿ 5 ಗಂಡಾನೆ, 3 ಹೆಣ್ಣಾನೆ ಭಾಗಿಯಾಗಲಿದ್ದು, ಮೈಸೂರು ದಸರಾದಲ್ಲಿ ಚಿನ್ನದ ಅಂಬಾರಿ ಹೊರಲಿರುವ ಕ್ಯಾಪ್ಟನ್ ಮತ್ತಿಗೋಡು ಶಿಬಿರದ ಅಭಿಮನ್ಯು, ಗೋಪಾಲಸ್ವಾಮಿ, ಆನೆಕಾಡು ಶಿಬಿರದ ವಿಕ್ರಮ, ದುಬಾರೆ ಶಿಬಿರದ ಕಾವೇರಿ, ಧನಂಜಯ, ನಾಗರಹೊಳೆಯ ದೊಡ್ಡಹರವೆ ಶಿಬಿರದ ಅಶ್ವತ್ಥಾಮ, ಬಂಡೀಪುರ ರಾಂಪುರ ಶಿಬಿರದ ಚೈತ್ರಾ ಹಾಗೂ ಲಕ್ಷ್ಮಿ ಆಗಮಿಸಲಿವೆ.
ಇದೇ ಪ್ರಥಮವಾಗಿ 34 ವರ್ಷದ ಅಶ್ವತ್ಥಾಮ ದಸರಾಗೆ ಅವಕಾಶ ಪಡೆದಿದ್ದು, ಕಿರಿಯ ಆನೆಯಾಗಿ ಲಕ್ಷ್ಮೀ ಎರಡನೇ ಬಾರಿಗೆ ದಸರಾದಲ್ಲಿ ಭಾಗಿಯಾಗುತ್ತಿದೆ. ಸೆ.13ರಂದು ಬೆಳಿಗ್ಗೆ 9:30 ಕ್ಕೆ ಹುಣಸೂರು ತಾಲೂಕಿನ ವೀರನಹೊಸಳ್ಳಿ ಗೇಟ್ ಬಳಿ ಅಭಿಮನ್ಯು ನೇತೃತ್ವದ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಮಾಡಿ, ಮೈಸೂರಿನ ಅರಣ್ಯ ಭನವನಕ್ಕೆ ಬರಲಿವೆ. ಸೆ.16 ರಂದು ಅರಣ್ಯ ಭವನದಲ್ಲಿ ಅರಣ್ಯ ಇಲಾಖೆ ವತಿಯಿಂದ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ನಂತರ ಆನೆಗಳು ಅರಮನೆಗೆ ಆಗಮಿಸಲಿವೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಮಾಹಿತಿ ನೀಡಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications