ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ದಸರಾ 2022; ದಸರಾ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿದ ನಟಿ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಸೆಪ್ಟೆಂಬರ್‌, 26: ಮೈಸೂರು ನಗರದ ಕಲಾಮಂದಿರದಲ್ಲಿ ದಸರಾ ಚಲನಚಿತ್ರೋತ್ಸವಕ್ಕೆ ಚಿತ್ರ ನಟಿ ಅನುಪ್ರಭಾಕರ್, ಅಮೃತ ಅಯ್ಯಂಗಾರ್ ಚಾಲನೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಈ ಬಗ್ಗೆ ಮಾತನಾಡಿ, ಚಲನಚಿತ್ರೋತ್ಸವದಲ್ಲಿ ಹಲವು ಚಲನಚಿತ್ರಗಳನ್ನು ವೀಕ್ಷಿಸುವ ಸುವರ್ಣ ಅವಕಾಶ ಸಿಕ್ಕಿದೆ. ಚಲನಚಿತ್ರೋತ್ಸವದಲ್ಲಿ ಒಂದು ದಿನ ಪುನೀತ್ ರಾಜ್‌ಕುಮಾರ್ ಅಭಿನಯದ ಚಿತ್ರಗಳನ್ನೇ ಪ್ರದರ್ಶಿಸುವಂತೆ ಸೂಚಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಸರಳ ದಸರಾ ಆಚರಣೆ ಮಾಡಲಾಗುತ್ತಿತ್ತು. ಆದರೆ ಈ ವರ್ಷ ಅದ್ಧೂರಿ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಸುಮಾರು 124 ಕಿಲೋ ಮೀಟರ್‌ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಯುವ ದಸರಾದಲ್ಲಿ ಅಪ್ಪು ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪುನೀತ್ ರಾಜ್‌ಕುಮಾರ್‌ ಅವರ ಪತ್ನಿ ಅಶ್ವಿನಿ ಅವರು ಆಗಮಿಸಲಿದ್ದಾರೆ ಎಂದು ಹೇಳಿದರು.

ಮೈಸೂರಿನಲ್ಲೇ ತಯಾರಾದ ರೇಷ್ಮೆ ಸೀರೆಯಲ್ಲಿ ಆಗಮಿಸಿ, ದಸರಾಗೆ ಮೆರುಗು ತಂದ ರಾಷ್ಟ್ರಪತಿ!ಮೈಸೂರಿನಲ್ಲೇ ತಯಾರಾದ ರೇಷ್ಮೆ ಸೀರೆಯಲ್ಲಿ ಆಗಮಿಸಿ, ದಸರಾಗೆ ಮೆರುಗು ತಂದ ರಾಷ್ಟ್ರಪತಿ!

ಚಲನಚಿತ್ರೋತ್ಸವಕ್ಕೆ ಚಾಲನೆ
ನಂತರ ಚಿತ್ರ ನಟಿ ಅನುಪ್ರಭಾಕರ್ ಅವರು ಮಾತನಾಡಿ, 2007ರಲ್ಲಿ ಪಾರ್ವತಮ್ಮ ರಾಜ್‌ಕುಮಾರ್ ಹಾಗೂ ಎಂ.ಪಿ.ಶಂಕರ್‌ ಅವರ ಜೊತೆ ಇದೇ ಚಲನಚಿತ್ರೋತ್ಸವವನ್ನು ಉದ್ಘಾಟಿಸುವ ಮೂಲಕ ವೇದಿಕೆ ಹಂಚಿಕೊಂಡಿದ್ದೆ. ಮತ್ತೆ ಇದೇ ಕಾರ್ಯಕ್ರಮದಲ್ಲಿ ಭಾಗಿ ಆಗಿರುವುದಕ್ಕೆ ಸಂತೋಷ ಆಗುತ್ತಿದೆ.
ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಅಪ್ಪುದಿನ ಮಾಡಿ, ಅಪ್ಪು ಚಿತ್ರಗಳನ್ನು ಪ್ರದರ್ಶನ ಮಾಡಲಾಗುತ್ತಿದೆ. ಕರ್ನಾಟಕ, ಕನ್ನಡಿಗರು ಇರುವವರೆಗೂ ಅಪ್ಪು ಅಮರರಾಗಿರುತ್ತಾರೆ ಎಂದು ಹೇಳಿದರು.

Dasara 2022; Actress Anu Prabhakar, Amrita Iyengar Inaugurate Film Festival

ಈ ಸಂದರ್ಭದಲ್ಲಿ ಶಾಸಕರಾದ ಎಲ್.ನಾಗೇಂದ್ರ, ಮೇಯರ್‌ ಶಿವಕುಮಾರ್‌, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಅಪರ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಟಿಯರಾದ ಕಾವ್ಯ ಶೆಟ್ಟಿ, ಅಮೃತ ಅಯ್ಯಂಗಾರ್‌ ಸೇರಿದಂತೆ ಹಲವರು ಗಣ್ಯರು ಉಪಸ್ಥಿತರಿದ್ದರು.

Dasara 2022; Actress Anu Prabhakar, Amrita Iyengar Inaugurate Film Festival

ದಿಢೀರ್‌ ಯುವ ದಸರಾ ಮುಂದೂಡಿಕೆ
ಯುವ ದಸರಾ ಕಾರ್ಯಕ್ರಮ ಒಂದು ದಿನ ಮುಂದೂಡಿಕೆ ಮಾಡಲಾಗಿದ್ದು, ಸೆಪ್ಟೆಂಬರ್ 26ರ ಬದಲಿಗೆ ಸೆಪ್ಟೆಂಬರ್ 27ರಂದು ನಡೆಸಲು ನಿರ್ಧರಿಸಲಾಗಿದೆ. ಇಂದು ಮೈಸೂರಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ. ಯುವ ದಸರಾ ಕಾರ್ಯಕ್ರಮವನ್ನು ಒಂದು ದಿನ ಮುಂದೂಡಲಾಗಿದ್ದು, ಸೆಪ್ಟೆಂಬರ್ 26ರ ಬದಲು ಸೆಪ್ಟೆಂಬರ್ 27ಕ್ಕೆ ಯುವದಸರಾ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ. ಡಾ. ಪುನೀತ್ ರಾಜ್‌ಕುಮಾರ್‌ ಅವರಿಗೆ ಈ ಬಾರಿಯ ಯುವ ದಸರಾ ಅರ್ಪಣೆ ಮಾಡಲಾಗಿದ್ದು, ಯುವದಸರಾವನ್ನು ಪುನೀತ್ ರಾಜ್‌ಕುಮಾರ್ ಪತ್ನಿ ಅಶ್ವನಿ ಅವರು ಉದ್ಘಾಟಿಸಲಿದ್ದಾರೆ.

English summary
Kannada actors Anuprabhakar, Amrita Iyengar inaugurated Dasara film festival at Mysuru city Kalamandir, Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X