ಮೈಸೂರು: ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆಯಲ್ಲಿ ಜನಸಾಗರ
ಮೈಸೂರು, ಸೆಪ್ಟೆಂಬರ್, 29: ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ. ಪ್ರತಿನಿತ್ಯ ಹತ್ತಾರು ಕಾರ್ಯಕ್ರಮಗಳನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳುತ್ತಿದ್ದಾರೆ. ಕುಸ್ತಿ, ಸಂಗೀತ, ನೃತ್ಯ, ಕ್ರೀಡಾಕೂಟ, ಮಕ್ಕಳ ದಸರಾ, ಮಹಿಳಾ ದಸರಾ, ಆಹಾರ ಮೇಳ, ಯುವ ದಸರಾ ಎಲ್ಲೆಡೆ ಜನ ದಟ್ಟಣೆ ಕಂಡುಬರುತ್ತಿದೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಯೋಗ ದಸರಾ ಉಪಸಮಿತಿ ವತಿಯಿಂದ ಕರ್ನಾಟಕ ವಸ್ತು ಪ್ರದರ್ಶನ ಆವರಣದ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ "ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆ"ಯನ್ನು ಆಯೋಜಿಸಲಾಗಿದೆ. ದೀಪ ಬೆಳಗಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಸಂಸದ ಪ್ರತಾಪ್ ಸಿಂಹ ಅವರು ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆಯನ್ನು ಉದ್ಘಾಟಿಸಿದರು.
ಯೋಗಾಸನ ಸ್ಪರ್ಧೆ ಬಗ್ಗೆ ಸಿಂಹ ಅಭಿಪ್ರಾಯ
ಬಳಿಕ ಪ್ರತಾಪ್ ಸಿಂಹ ಅವರು ಮಾತನಾಡಿ, ''ನಾಡಹಬ್ಬ ದಸರಾ ಹಬ್ಬದ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಬಹಳ ಆಸಕ್ತಿ ಹೊಂದಿದ್ದು, ವಿವಿಧ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಒತ್ತು ನೀಡುತ್ತಿದ್ದಾರೆ. ಎರಡು ವರ್ಷಗಳಿಂದ ಕೋವಿಡ್, ನೆರೆಯ ಕಾರಣದಿಂದ ಅದ್ಧೂರಿ ದಸರಾ ಆಚರಣೆ ಮಾಡಲು ಆಗಿರಲಿಲ್ಲ. ಈ ಬಾರಿ ಮುಖ್ಯಮಂತ್ರಿಗಳ ಒಪ್ಪಿಗೆ ಪಡೆದು ಜಿಲ್ಲಾ ಉಸ್ತುವಾರಿ ಸಚಿವರು ವಿಶೇಷವಾಗಿ ಆಯೋಜನೆ ಮಾಡಿದ್ದಾರೆ. ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರ ಆಗಮನ ಹಾಗೂ ಯುವ ದಸರಾವನ್ನು ಅಪ್ಪು ನಮನವಾಗಿ ಆಚರಣೆಯು ಇದಕ್ಕೆ ಸಾಕ್ಷಿ ಆಗಿದೆ'' ಎಂದು ತಿಳಿಸಿದರು.
ಸಿಟಿ ಆಫ್ ಯೋಗ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸಬೇಕು ಎಂಬ ಆಸೆಯು ಅಂತಾರಾಷ್ಟ್ರೀಯ ಯೋಗ ದಿನದಂದು ನೆರವೇರಿತು. ಮುಂದಿನ ದಿನಗಳಲ್ಲಿ ಯೋಗಕ್ಕೆ ಮೈಸೂರಿನಲ್ಲಿ ಮತ್ತಷ್ಟು ಒತ್ತು ನೀಡುವ ಮೂಲಕ ಯೋಗವನ್ನು ಗಟ್ಟಿಗೊಳಿಸುವ ಕಾರ್ಯ ಆಗಬೇಕಿದೆ. ಆರೋಗ್ಯಯುತ ಜೀವನಕ್ಕೆ ಯೋಗವು ಸಹಕಾರಿ ಆಗಿದ್ದು, ಪೋಷಕರು ಮಕ್ಕಳಿಗೆ ಯೋಗ ಕಲಿಸಲು ಹೆಚ್ಚಿನ ಆಸಕ್ತಿ ತೋರಿಸಬೇಕು ಎಂದು ತಿಳಿಸಿದರು.

ವೇದಿಕೆ ಆರಂಭದಲ್ಲಿ ನಾಲ್ಕು ಯೋಗಾಪಟುಗಳು ಯೋಗಾಪ್ರದರ್ಶನ ಮಾಡಿದರು. 12 ವರ್ಷ ಮೇಲ್ಪಟ್ಟವರಿಂದ 65 ವರ್ಷದವರವರೆಗೆ ಬಾಲಕರು, ಬಾಲಕಿಯರು, ಪುರುಷರು, ಮಹಿಳೆಯರು ನಾಲ್ಕು ವಿಭಾಗದಲ್ಲಿ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಶೇಷಚೇತನರು ಸೇರಿದಂತೆ ಸುಮಾರು ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ದಸರಾ ಯೋಗಾ ಉಪಸಮಿತಿ ಅಧ್ಯಕ್ಷರಾದ ಬಾಲಕೃಷ್ಣ, ಜಂಗಲ್ ರೆಸಾರ್ಟ್ ಮಾಜಿ ಅಧ್ಯಕ್ಷ ಅಪ್ಪಣ್ಣ, ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಮಿರ್ಲೆ ಶ್ರೀನಿವಾಸ, ಯೋಗ ದಸರಾ ಉಪ ವಿಶೇಷಾಧಿಕಾರಿ ಸೀಮಂತಿನಿ, ಯೋಗಾ ಫೌಂಡೇಶನ್ ಕಾರ್ಯದರ್ಶಿ ಶಶಿಕುಮಾರ್ ಸೇರಿದಂತೆ ಮತ್ತತರರು ಉಪಸ್ಥಿತರಿದ್ದರು.
ಅಪ್ಪು ನೆನೆದು ಅಶ್ವಿನಿ ಕಣ್ಣೀರು
ದಸರಾದ ಕೇಂದ್ರ ಬಿಂದುವಾದ ಯುವ ದಸರಾವನ್ನು ಅಪ್ಪು ನಮನದ ಮೂಲಕ ಅಶ್ವಿನಿ ಪುನೀತ್ ರಾಜ್‌ಕುಮಾರ್ ಉದ್ಘಾಟಿಸಿದರು. ಅಲ್ಲದೇ ಅಪ್ಪು ನಮನದ ವೇಳೆ ಅಶ್ವಿನಿ ಅವರು ಪುನೀತ್ ರಾಜ್‌ಕುಮಾರ್ ಅವರನ್ನು ನೆನೆದು ಕಣ್ಣೀರಿಟ್ಟರು. ಉದ್ಘಾಟನೆ ಬಳಿಕ ರಾಘವೇಂದ್ರ ರಾಜ್‌ಕುಮಾರ್ ಅವರು ಮಾತನಾಡಿ, ಅಂದು ಅಪ್ಪುವನ್ನು ಪ್ರೀತಿಸುತ್ತಿದ್ದಿರಿ. ಇಂದು ಪೂಜಿಸುತ್ತಿದ್ದೀರಾ. ಹೀಗಾಗಿ ಇಂದು ಅಪ್ಪುವನ್ನು ಎಲ್ಲರಲ್ಲೂ ನೋಡಲಾಗುತ್ತಿದೆ ಎಂದು ಸಹೋದರನನ್ನು ಸ್ಮರಿಸಿದರು.
ಅಭಿಮಾನಿಗಳನ್ನು ರಂಜಿಸಿದ ವಶಿಷ್ಠ ಸಿಂಹ
ಅಭಿಮಾನಿಗಳನ್ನು ದೇವರು ಅಂದವರು ಅಪ್ಪು. ಆದರೆ ಇಂದು ಅವರೇ ಅಭಿಮಾನಿಗಳಿಗೆ ದೇವರಾಗಿದ್ದಾರೆ. ಅವರ ಆದರ್ಶಗಳನ್ನು ಪಾಲಿಸಬೇಕು ಎಂದು ಹೇಳುವುದರ ಜೊತೆಗೆ ರಾಜ್‌ಕುಮಾರ ಚಿತ್ರದ "ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ನೀನೆ ರಾಜಕುಮಾರ," ದಯವಿಟ್ಟು ಗಮನಿಸಿ ಚಿತ್ರದ "ಮರೆತು ಹೋದೆನು" ಹಾಡನ್ನು ಹಾಗೂ ಟಗರು ಚಿತ್ರದ ಡೈಲಾಗ್ ಹೊಡೆಯುವ ಮೂಲಕ ನಟ ವಶಿಷ್ಠ ಸಿಂಹ ಅಭಿಮಾನಿಗಳನ್ನು ರಂಜಿಸಿದರು.
ಅಪ್ಪು ಅಭಿಮಾನಿಗಳ ಸಂಭ್ರಮ
ಕಾರ್ಯಕ್ರಮದ ಉದ್ಘಾಟನೆಗೂ ಮೊದಲು ಮೈಸೂರು ನೃತ್ಯ ಕಲಾವಿದರ ಕಲಾತಂಡವು ಡಾ.ಪುನೀತ್ ರಾಜ್‌ಕುಮಾರ್ ಅವರ ಚಿತ್ರಗಳಾದ ಯುವರತ್ನ, ಜಾಕಿ, ಪವರ್, ಅಣ್ಣಾಬಾಂಡ್ ಸೇರಿದಂತೆ ಅನೇಕ ಚಿತ್ರಗಳಿಗೆ ನೃತ್ಯ ಮಾಡುವ ಮೂಲಕ ನೆರೆದಿದ್ದ ಪ್ರೇಕ್ಷಕರನ್ನು ರಂಜಿಸಿದರು. ಈ ಮೂಲಕ ಪುನೀತ್ ರಾಜ್‌ಕುಮಾರ್ ಅವರಿಗೆ ನಮನ ಸಲ್ಲಿಸಿದರು. ಡಾ.ಪುನೀತ್ ರಾಜ್‌ಕುಮಾರ್ ಹೆಸರು ಹಾಗೂ ಹಾಡುಗಳು ಬರುತ್ತಿದ್ದಂತೆ ನೆರೆದಿದ್ದ ಸಾವಿರಾರು ಪ್ರೇಕ್ಷಕರು ಕುಣಿದು ಕುಪ್ಪಳಿಸಿ ಯುವ ಸಂಭ್ರಮದಲ್ಲಿ ಸಡಗರದಿಂದ ಪಾಲ್ಗೊಂಡರು. ಹಾಡು ಮುಗಿದ ಬಳಿಕವು ಮೈದಾನದಲ್ಲಿ ಅಪ್ಪು ಅಪ್ಪು ಎನ್ನುವ ಮೂಲಕ ಅಭಿಮಾನಿಗಳೂ ಸಹ ಅಪ್ಪು ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications