ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅದ್ದೂರಿ ದಸರಾ ಆಚರಣೆ, ಗಜಪಯಣಕ್ಕೆ ಭಾನುವಾರ ಚಾಲನೆ: ಸಚಿವ ಎಸ್.ಟಿ.ಸೋಮಶೇಖರ್

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಆಗಸ್ಟ್ 6: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಸೆಳೆಯುವ ನಿಟ್ಟಿನಲ್ಲಿ ಈ ಬಾರಿ ಅದ್ದೂರಿ ದಸರಾ ಆಚರಣೆ ಮಾಡಲಾಗುವುದು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಶನಿವಾರ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2022 ಕಾರ್ಯಕಾರಿ ಸಮಿತಿ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, " ಕೋವಿಡ್‌ನಿಂದ ಕಳೆದ ಎರಡು ವರ್ಷಗಳಿಂದ ಸರಳ ದಸರಾ ಆಚರಣೆ ಮಾಡಲಾಗಿದ್ದು, ಈ ಬಾರಿ ಅದ್ದೂರಿ ದಸರಾ ಆಚರಣೆ ಮಾಡುವ ಬಗ್ಗೆ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ " ಎಂದರು.

ದಸರಾದಲ್ಲಿ ಭಾಗವಹಿಸುವ 14 ಆನೆಗಳ ಪಟ್ಟಿ ಬಿಡುಗಡೆ, 3 ಹೊಸ ಆನೆಗಳು ಭಾಗಿದಸರಾದಲ್ಲಿ ಭಾಗವಹಿಸುವ 14 ಆನೆಗಳ ಪಟ್ಟಿ ಬಿಡುಗಡೆ, 3 ಹೊಸ ಆನೆಗಳು ಭಾಗಿ

ಈ ಬಾರಿಯ ದಸರಾದಲ್ಲಿ ದೇಶ, ವಿದೇಶಗಳಿಂದ ಪ್ರವಾಸಿಗರನ್ನು ಆಕರ್ಷಿಸುವ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತದೆ. 15 ದಿನ ಮುಂಚಿತವಾಗಿ ವಸ್ತುಪ್ರದರ್ಶನ ಆರಂಭವಾಗಲಿದೆ. ದಸರಾ ಸಂಬಂಧ ಸಾಕಷ್ಟು ಪ್ರಚಾರ ನೀಡುವ ಕುರಿತು ಚರ್ಚೆಯಾಗಿದೆ. ಕಳೆದ ಎರಡು ವರ್ಷದಂತೆ ಈ ವರ್ಷ ಕೂಡ ಖರ್ಚಿನ ಲೆಕ್ಕ ನೀಡಲಾಗುತ್ತದೆ. ದಸರಾ ಮುಕ್ತಾಯವಾಗುತ್ತಿದ್ದಂತೆ ಸಾರ್ವಜನಿಕರಿಗೆ ವೆಚ್ಚದ ಲೆಕ್ಕ ನೀಡಲಾಗುತ್ತದೆ ಎಂದು ತಿಳಿಸಿದರು.

Dasara 2022; Sunday Inaugurate Gajapayana in Hunsur: ST Somashekar

ದಸರಾ ಉದ್ಘಾಟಕರ ಆಯ್ಕೆ ಅಧಿಕಾರ ಮುಖ್ಯಮಂತ್ರಿ ಅವರದ್ದು. ಉದ್ಘಾಟಕರ ಬಗ್ಗೆ ಸಲಹೆಗಳನ್ನು ನೀಡಬಹುದು. ಅಂತಿಮವಾಗಿ ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ. ಸಭೆಯಲ್ಲಿ ಕಾರ್ಯಕ್ರಮಗಳ ಆಯೋಜನೆ, ದೀಪಾಲಂಕಾರ, ವಸ್ತುಪ್ರದರ್ಶನ, ಪುಷ್ಪಪ್ರದರ್ಶನ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆಯಾಗಿದೆ. ಆದರೆ ಪಾಸ್ ವಿತರಣೆ ವಿಷಯದಲ್ಲಿ ಯಾವುದೇ ಗೊಂದಲಕ್ಕೆ, ದುರ್ಬಳಕೆಗೆ ಅವಕಾಶ ನೀಡುವುದಿಲ್ಲ ಎಂದರು.

ಗಜಪಡೆಗಳ ಪೋಸ್ಟರ್ ಬಿಡುಗಡೆ
ಮೈಸೂರು ದಸರಾದಲ್ಲಿ ಪಾಲ್ಗೊಳ್ಳಲಿರುವ ಗಜಪಡೆಗಳ ಮಾಹಿತಿಯನ್ನು ಒಳಗೊಂಡ ಪೋಸ್ಟರ್ ಅನ್ನು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಶಾಸಕರುಗಳಾದ ಹರ್ಷವರ್ಧನ್, ತನ್ವೀರ್ ಸೇಠ್, ಸಾ.ರಾ.ಮಹೇಶ್, ಅಶ್ವಿನ್, ವಿಧಾನಪರಿಷತ್ ಸದಸ್ಯರುಗಳಾದ ವಿಶ್ವನಾಥ್, ಮಂಜೇಗೌಡ, ಡಾ. ತಿಮ್ಮಯ್ಯ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಮೈಸೂರು ಪೊಲೀಸ್ ಕಮಿಷನರ್ ಚಂದ್ರಗುಪ್ತ, ಎಸ್.ಪಿ.ಚೇತನ್ ಸೇರಿದಂತೆ ಹಲವು ಅಧಿಕಾರಿಗಳು, ನಿಗಮ ಮಂಡಳಿಗಳ ಅಧ್ಯಕ್ಷರು ಉಪಸ್ಥಿತರಿದ್ದರು.

ಗಜಪಯಣಕ್ಕೆ ಚಾಲನೆ
ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಆಗಸ್ಟ್‌ 7ರಂದು ಬೆಳಗ್ಗೆ 9.01ರಿಂದ 9.35ರ ಕನ್ಯಾ ಲಗ್ನದಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಗುತ್ತದೆ. ಆಗಸ್ಟ್‌ 10ರಂದು ಅರಮನೆಗೆ ಗಜಪಡೆಗಳ ಆಗಮನವಾಗಲಿದೆ. ಅಂದು ಬೆಳಗ್ಗೆ 9.20ರಿಂದ 10.00ರ ಕನ್ಯಾ ಲಗ್ನದಲ್ಲಿ ಗಜಪಡೆಗಳನ್ನು ಬರಮಾಡಿಕೊಳ್ಳಲಾಗುತ್ತದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಎರಡು ತಂಡಗಳಲ್ಲಿ 14 ಆನೆಗಳ‌ ಆಗಮನವಾಗಲಿದೆ. ಮೊದಲ ತಂಡದಲ್ಲಿ 9, ಎರಡನೇ ತಂಡದಲ್ಲಿ 5 ಆನೆಗಳು ಆಗಮಿಸಲಿದೆ. ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ 3 ಆನೆಗಳನ್ನು ಕಳುಹಿಸಿಕೊಡಲಿದ್ದು ಉಳಿದ 11 ಆನೆಗಳು ಮೈಸೂರು ದಸರಾ ಮಹೋತ್ಸವದಲ್ಲಿ ಹೆಜ್ಜೆಹಾಕಲಿವೆ ಎಂದರು.

English summary
Cooperation and Mysore District In-charge Minister S. T. Somashekar said that a lavish Dasara celebration will be held this time to attract national and international tourist
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X