ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Dasara flower show 2022: ಫಲಪುಷ್ಪ ಪ್ರದರ್ಶನದ ವಿಶೇಷತೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಸೆಪ್ಟೆಂಬರ್‌, 25: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಫಲಪುಷ್ಪ ಪ್ರದರ್ಶನವನ್ನು ನಿಶಾದ್ ಭಾಗ್ ಕುಪ್ಪಣ್ಣ ಪಾರ್ಕ್‌ನಲ್ಲಿ ಆಯೋಜಿಸಲಾಗಿದೆ. ಸೆಪ್ಟೆಂಬರ್‌ 26ರಿಂದ ಅಕ್ಟೋಬರ್‌ 5ರವರೆಗೆ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಬಿ. ಆರ್. ತಿಳಿಸಿದರು.

ಕುಪ್ಪಣ್ಣ ಪಾರ್ಕ್‌ನಲ್ಲಿ ಮಾಹಿತಿ ನೀಡಿದ ಅವರು, 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಈ ಬಾರಿ ಅದ್ಧೂರಿಯಾಗಿ ರಾಷ್ಟ್ರಪತಿ ಭವನವನ್ನು ಕೆಂಪು, ಬಿಳಿ ಗುಲಾಬಿ ಹಾಗೂ ಸೇವಂತಿಗಳಿಂದ ಸುಮಾರು 20ಅಡಿ ಎತ್ತರದಲ್ಲಿ ಗಾಜಿನ ಮನೆಯಲ್ಲಿ ನಿರ್ಮಿಸಲಾಗುವುದು. ಡಾ.ನಟ ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥವಾಗಿ ಈ ಬಾರಿ ಪುನೀತ್ ರಾಜ್‌ಕುಮಾರ್ ಅವರ ಸಾಧನೆಯ ವಿವರದೊಂದಿಗೆ ಪುತ್ಥಳಿಗಳನ್ನು ಸ್ಥಾಪಿಸಿ ಹೂವಿನೊಂದಿಗೆ ಅಲಂಕರಿಸಲಾಗುವುದು. ಮೈಸೂರು ರಾಜರು ತಮ್ಮ ಆಳ್ವಿಕೆಯ ಸಮಯದಲ್ಲಿ ಜನರು ವಿಶ್ರಾಂತಿ ಪಡೆಯಲು ತಂಡೀ ಸಡಕ್ ಅನ್ನು ನಿರ್ಮಿಸುತ್ತಿದ್ದರು. ಅದರ ಪ್ರತಿರೂಪವನ್ನು ಗಾಜಿನ ಮನೆಯ ಮುಂದೆ ನಿರ್ಮಿಸಲಾಗುತ್ತದೆ ಎಂದರು.

ದಸರಾ ಮಹೋತ್ಸವಕ್ಕೆ ಹೈ ಅಲರ್ಟ್; ಪೊಲೀಸ್ ಸಿದ್ಧತೆ ಬಗ್ಗೆ ಇಲ್ಲಿದೆ ಮಾಹಿತಿದಸರಾ ಮಹೋತ್ಸವಕ್ಕೆ ಹೈ ಅಲರ್ಟ್; ಪೊಲೀಸ್ ಸಿದ್ಧತೆ ಬಗ್ಗೆ ಇಲ್ಲಿದೆ ಮಾಹಿತಿ

7 ಅಡಿ ಜೇನು ಹುಳು, 12ಅಡಿ ಜಿರಾಫೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ಹಲವು ಗೊಂಬೆಗಳನ್ನು ಹೂವಿನಿಂದ ಅಲಂಕರಿಸಲಾಗುವುದು. 7 ಅಡಿ ದಪ್ಪ ಮೆಣಸಿನ ಕಾಯಿಯಿಂದ ಒಂದು ಮನೆಯನ್ನು ನಿರ್ಮಿಸಲಾಗುವುದು ಎಂದರು. ಇತರ ವೈವಿಧ್ಯಮಯದಿಂದ ಕೂಡಿದ ಕಾನ್ಸೆಪ್ಟ್‌ಗಳನ್ನು ನಿರ್ಮಿಸಲಾಗುವುದು. ಡೈರಿ ಡೇ, ಉಲ್ಲಾಸ್ ಅಗರ್ ಬತ್ತೀಸ್, ಸುವರ್ಣ ಚಾನೆಲ್ ಪ್ರಾಯೋಜಕತ್ವ ವಹಿಸಿದ್ದು, ಸಂಜೆಯ ವೇಳೆ ಅನೇಕ ಮನರಂಜನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಸೆ. 26ರಿಂದ ಅ. 5ರವರೆಗೆ ಫಲಪುಷ್ಪ ಪ್ರದರ್ಶನ

ಸೆ. 26ರಿಂದ ಅ. 5ರವರೆಗೆ ಫಲಪುಷ್ಪ ಪ್ರದರ್ಶನ

ಇಲಾಖೆಯಿಂದ 50ಸಾವಿರಕ್ಕೂ ಹೆಚ್ಚು ಹೂವಿನ ಗಿಡಗಳನ್ನು ಬೆಳೆದಿದ್ದು, ಇಡೀ ಕುಪ್ಪಣ್ಣ ಪಾರ್ಕ್ ಅನ್ನು ಹೂವುಗಳಿಂದ ಅಲಂಕರಿಸಲಾಗುವುದು. ಅವುಗಳಲ್ಲಿ ಮುಖ್ಯವಾಗಿ ಮಾರಿಗೋಲ್ಡ್, ಫ್ರೆಂಚ್ ಮಾರಿಗೋಲ್ಡ್, ಜಿನಿಯಾ, ಡಾಲಿಯಾ ಸೇರಿದಂತೆ ಹಲವು ಪ್ರಭೇದದ ಹೂವಿನ ಗಿಡಗಳು, ಪುಣೆಯಿಂದ ವಿಶೇಷ ಅಲಂಕಾರಿಕ ಗಿಡಗಳನ್ನು ತರಲಾಗುತ್ತಿದೆ. ಅಲ್ಲದೆ ಇಲಾಖೆಗೆ ಸಂಬಂಧಿಸಿದ ಮಳಿಗೆಗಳು, ಸಾವಯವ ಮಳಿಗೆಗಳು, ಕೃಷಿಗೆ ಸಂಬಂಧಿಸಿದ ಮಳಿಗೆಗಳು ಐಐಹೆಚ್‌ಆರ್, ಸಿಡಿಬಿ, ಎನ್‌ಹೆಚ್‌ಬಿ, ಸಿಎಫ್‌ಟಿಆರ್‌ಐ ಸಂಸ್ಥೆಗಳಿಗೆ ಪತ್ರ ಬರೆದಿದ್ದು, ರೈತರಿಗೆ ದೊರಕುವ ಸೌಲಭ್ಯಗಳ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದರು. ಇದೇ ಸಂದರ್ಭದಲ್ಲಿ ಭಿತ್ತಿ ಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಪ್ರಮೋದಾದೇವಿ ಅವರನ್ನು ಆಹ್ವಾನಿಸಿದ ಸಚಿವ

ಪ್ರಮೋದಾದೇವಿ ಅವರನ್ನು ಆಹ್ವಾನಿಸಿದ ಸಚಿವ

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಸಿದ್ಧತೆ ಜೋರಾಗಿಯೇ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ. ಸೋಮಶೇಖರ್ ಮೈಸೂರು ಒಡೆಯರ್ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರನ್ನು ಶನಿವಾರ ಭೇಟಿ ಆಗಿದ್ದರು. ಮೈಸೂರು ಅರಮನೆಯ ಖಾಸಗಿ ನಿವಾಸದಲ್ಲಿ ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲಪುಷ್ಪ ತಾಂಬೂಲ ನೀಡಿ ದಸರಾ ಉತ್ಸವಕ್ಕೆ ಆಹ್ವಾನ ನೀಡಿದರು.

ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ವಿಧಾನಪರಿಷತ್ ಸದಸ್ಯರಾದ ಮಂಜೇಗೌಡ, ಮೇಯರ್ ಶಿವಕುಮಾರ್, ಉಪಮೇಯರ್ ಜಿ.ರೂಪಾ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸೇರಿದಂತೆ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರಮೋದಾದೇವಿ ಒಡೆಯರ್‌ ಅವರಿಗೆ ಸನ್ಮಾನ

ಪ್ರಮೋದಾದೇವಿ ಒಡೆಯರ್‌ ಅವರಿಗೆ ಸನ್ಮಾನ

ಇದೇ ಸಂದರ್ಭದಲ್ಲಿ ಪ್ರಮೋದಾದೇವಿ ಒಡೆಯರ್‌ ಅವರಿಗೆ ಸನ್ಮಾನ ಮಾಡಿ, ಸರ್ಕಾರದಿಂದ ಪ್ರತಿ ವರ್ಷದಂತೆ ಈ ವರ್ಷವೂ ಅವರನ್ನು ಆಹ್ವಾನಿಸಲಾಯಿತು. ಬಳಿಕ ಈ ಬಗ್ಗೆ ಮಾತನಾಡಿದ ಸಚಿವರು, ದಸರಾ ಉತ್ಸವಕ್ಕೆ ವ್ಯವಸ್ಥಿತವಾಗಿ ಸಿದ್ಧತೆಗಳು ನಡೆಯುತ್ತಿದೆ. ದಸರಾ ಉತ್ಸವಕ್ಕೆ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್‌ ಅವರನ್ನು ಆಹ್ವಾನಿಸಲಾಯಿತು. ದಸರಾಗೆ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ಹೇಳಿದ್ದಾರೆ ಎಂದು ಹೇಳಿದರು.

ಕಿಚ್ಚ ಸುದೀಪ್‌ ಆಗಮನದ ನಿರೀಕ್ಷೆಯಲ್ಲಿದ್ದ ಫ್ಯಾನ್ಸ್‌

ಕಿಚ್ಚ ಸುದೀಪ್‌ ಆಗಮನದ ನಿರೀಕ್ಷೆಯಲ್ಲಿದ್ದ ಫ್ಯಾನ್ಸ್‌

ಯುವ ದಸರಾಗೆ ನಟ ಕಿಚ್ಚ ಸುದೀಪ್ ಅವರು ಆಗಮಿಸುತ್ತಿಲ್ಲ. ಅನಿವಾರ್ಯ ಕಾರಣಗಳಿಂದ ಅವರು ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತಿದೆ. ರಾಮದಾಸ್ ಅವರು ಮೋದಿ ಯುಗ ಉತ್ಸವ ಮಾಡುತ್ತಿದ್ದಾರೆ. ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ದಸರಾ ಸಂಬಂಧ ಪ್ರಚಾರದ ಕೊರತೆ ಆಗಿಲ್ಲ. ಏನಾದರೂ ಸಮಸ್ಯೆ ಇದ್ದರೆ ಪರಿಹರಿಸಲಾಗುವುದು. ಪ್ರಚಾರ ಸಮಿತಿ ರಚನೆ ಮಾಡಿದ್ದು, ಎಲ್ಲಾ ರೀತಿಯಲ್ಲಿ ಕೆಲಸ ಮಾಡಲಾಗುತ್ತಿದೆ. ಸೋಮವಾರ ರಾಷ್ಟ್ರಪತಿಗಳು ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಮಾಡಲಿದ್ದಾರೆ. ವೇದಿಕೆಯಲ್ಲಿ 13 ಆಸನಗಳಿರಲಿವೆ. ರಾಷ್ಟ್ರಪತಿಗಳು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಆರು ಜನ ಕೇಂದ್ರ ಸಚಿವರು, ನಾಲ್ವರು ರಾಜ್ಯ ಸಚಿವರು ವೇದಿಕೆಯಲ್ಲಿ ಇರಲಿದ್ದಾರೆ ಎಂದು ಮಾಹಿತಿ ನೀಡಿದರು.

English summary
Occasion of Mysuru Dasara Mahotsav, will organized fruit flower show at Nishad Bhag Kuppanna Park Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X