ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೂರದರ್ಶನ, ಸಾಮಾಜಿಕ ಜಾಲತಾಣದಲ್ಲಿ ಜಂಬೂಸವಾರಿ ನೇರ ಪ್ರಸಾರ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಅಕ್ಟೋಬರ್ 25: ಕೊರೊನಾ ವೈರಸ್ ಭೀತಿ ಹಿನ್ನೆಲೆ ಈ ಬಾರಿಯ ನಾಡಹಬ್ಬ ದಸರಾವನ್ನು ಸರಳ, ಸಾಂಪ್ರದಾಯಿಕ ಹಾಗೂ ವರ್ಚುವಲ್ ಆಗಿ ಆಚರಿಸಲಾಗುತ್ತಿದೆ.

ಮೈಸೂರು ದಸರೆಯ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಕಾರ್ಯಕ್ರಮವನ್ನು ದೂರದರ್ಶನ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಿಳಿಸಿದ್ದಾರೆ.

 ಅ.26ಕ್ಕೆ ದಸರಾ ಜಂಬೂಸವಾರಿ; ಪೊಲೀಸ್‌ ಆಯುಕ್ತರ ಪರಿಶೀಲನೆ ಅ.26ಕ್ಕೆ ದಸರಾ ಜಂಬೂಸವಾರಿ; ಪೊಲೀಸ್‌ ಆಯುಕ್ತರ ಪರಿಶೀಲನೆ

ಅ.26ರ ಸೋಮವಾರ ಮಧ್ಯಾಹ್ನ 2.59 ರಿಂದ 3.20 ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜ ಪೂಜೆ ಹಾಗೂ ಮಧ್ಯಾಹ್ನ 3.40 ರಿಂದ 4.15 ಗಂಟೆಯವರೆಗೆ ಸಲ್ಲುವ ಶುಭ ಕುಂಭಲಗ್ನದಲ್ಲಿ ಅರಮನೆ ಒಳಾವರಣದಲ್ಲಿ ವಿಜಯದಶಮಿಯ ಜಂಬೂಸವಾರಿ ಮೆರವಣಿಗೆ ನೆರವೇರಲಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

Mysuru Dasara Jamboo Savari Live Broadcast On Dooradarshana And Social Network Sites

ಈ ಕಾರ್ಯಕ್ರಮವನ್ನು ದೂರದರ್ಶನದಲ್ಲಿ ನೇರಪ್ರಸಾರ, ಮೈಸೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಫೇಸ್‌ ಬುಕ್ ಪೇಜ್ ಲಿಂಕ್ ನಲ್ಲಿ ವೀಕ್ಷಿಸಬಹುದು.

ಯ್ಯೂಟೂಬ್ ಲಿಂಕ್ ನಲ್ಲಿ ನೇರಪ್ರಸಾರ ಮಾಡಲಾಗುತ್ತಿದ್ದು, ಸಾರ್ವಜನಿಕರು ಮನೆಯಲ್ಲೆ ಕುಳಿತು ವೀಕ್ಷಿಸಬಹುದು ಎಂದು ಮೈಸೂರು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
The Jamboo Savari program can be watched in live on Dooradarshana and on the Facebook page of the Mysuru Vaarta and Public Relations Department.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X