Mysuru Dasara: ಈ ಬಾರಿ 'ಪ್ರಥಮ ಪ್ರಜೆ' ಇಲ್ಲದೆ ನಡೆಯಲಿದೆ ಜಂಬೂಸವಾರಿ!
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಕಳೆಗಟ್ಟುತ್ತಿದೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಈಗಾಗಲೇ ಜನಮನ ಸೂರೆಗೊಂಡಿವೆ. ದಸರಾ ಹಬ್ಬದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಕ್ಷಣ ಗಣನೆ ಆರಂಭವಾಗಿದ್ದು, ಇದೇ ಮೊದಲ ಬಾರಿಗೆ ಮೈಸೂರಿನ ಪ್ರಥಮ ಪ್ರಜೆ ಮೇಯರ್ ಇಲ್ಲದೆ ಜಂಬೂ ಸವಾರಿ ನಡೆಯಲಿದೆ.
ಅಕ್ಟೋಬರ್ 12ರಂದು ಅರಮನೆ ಆವರಣದಲ್ಲಿ ಜಂಬೂಸವಾರಿಗೆ ಚಾಲನೆ ಸಿಗಲಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಸಾಹಿತಿ ಡಾ. ಹಂಪನಾ ಅವರು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅದ್ದೂರಿ ಜಂಬೂ ಸವಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಜಂಜೂ ಸವಾರಿ ಮೆರವಣಿಗೆಯಲ್ಲಿ ಮೈಸೂರಿನ ಪ್ರಥಮ ಪ್ರಜೆಯಾದ ಮಹಾನಗರ ಪಾಲಿಕೆಯ ಮಹಾಪೌರರರಿಗೆ ಕುದುರೆ ಸವಾರಿ ಮಾಡುವ ಭಾಗ್ಯ ದೊರೆಯುತ್ತದೆ. ಆದರೆ, ಈ ಬಾರಿ ಅಂತಹ ಭಾಗ್ಯ ಇಲ್ಲವಾಗಿದೆ.
ಮೈಸೂರು ಮಹಾನಗರ ಪಾಲಿಕೆಯ ಅವಧಿ ಮುಗಿದು ಬರೋಬ್ಬರಿ 11 ತಿಂಗಳು ಕಳೆದರೂ ರಾಜ್ಯ ಸರಕಾರ ಚುನಾವಣೆ ನಡೆಸದ ಪರಿಣಾಮ ಮೈಸೂರಿನ ಪ್ರಥಮ ಪ್ರಜೆ ಆಯ್ಕೆಯಾಗಿಲ್ಲ. ಹೀಗಾಗಿ ಕುದುರೆ ಸವಾರಿ ಭಾಗ್ಯ, ಗಜಪಡೆಗೆ ಪುಷ್ಪಾರ್ಚನೆ ಮಾಡುವ ಅವಕಾಶ ಇಲ್ಲದಂತಾಗಿದೆ.
ಮೇಯರ್ ಆಗಿದ್ದವರು ಪುಷ್ಪಾರ್ಚನೆ ಮಾಡಿ ಕುದುರೆ ಸವಾರಿ ಮೂಲಕ ಜಂಬೂಸವಾರಿ ಮೆರವಣಿಗೆಯಲ್ಲಿ ಜನಸ್ತೋಮಕ್ಕೆ ಕೈ ಬೀಸುತ್ತ ಸಾಗುತ್ತಿದ್ದರು. ಆದರೆ ಈ ಬಾರಿ ಪಾಲಿಕೆಯಲ್ಲಿ ಚುನಾಯಿತ ಪ್ರತಿನಿಧಿಗಳು ಇಲ್ಲದೆ ಪ್ರಾದೇಶಿಕ ಆಯುಕ್ತರೇ ಆಡಳಿತಾಧಿಕಾರಿಯಾಗಿದ್ದು, ಮೇಯರ್ ಇಲ್ಲದೆ ದಸರಾ ನಡೆಯುವಂತಾಗಿದೆ.
1983ರಲ್ಲಿ ಪಾಲಿಕೆ ಅಸ್ತಿತ್ವಕ್ಕೆ ಬಂದಾಗ ಮೊದಲ ಮೇಯರ್ ಆಗಿದ್ದ ವಿಶ್ವನಾಥ್ ಅವರು ತಾವಾಗಿಯೇ ಕುದುರೆ ಸವಾರಿಯಿಂದ ಹಿಂದೆ ಸರಿದಿದ್ದರು. †1999ರಲ್ಲಿ ಮೇಯರ್ ಆಗಿದ್ದ ಶ್ರೀಕಂಠಯ್ಯ ಅವರು ಸಹ ಕುದುರೆಯನ್ನೇರದೆ ಎಲ್ಲಾ ಪಾಲಿಕೆ ಸದಸ್ಯರೊಂದಿಗೆ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ನಂತರ ಬಂದ ಎಲ್ಲ ಮೇಯರ್‌ಗಳು ಅಂಬಾರಿ ಹೊತ್ತ ಗಜಪಡೆಗೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಕುದುರೆ ಸವಾರಿಯಲ್ಲಿ ಪಾಲ್ಗೊಳ್ಳುತ್ತಿದ್ದರು.
ಕೋವಿಡ್ ಸಂದರ್ಭದಲ್ಲಿ ಸರಳ ದಸರಾ ನಡೆದ ಹಿನ್ನೆಲೆ ಅರಮನೆಯೊಳಗೆ ಜಂಬೂ ಸವಾರಿ ಮೆರವಣಿಗೆ ನಡೆದ ಹಿನ್ನೆಲೆಯಲ್ಲಿ ಮೇಯರ್ ಆಗಿದ್ದ ಸುನಂದಾ ಪಾಲನೇತ್ರ ಮತ್ತು ತಸ್ನಿಂ ಅವರಿಗೆ ಪುಷ್ಪಾರ್ಚನೆ ಅವಕಾಶ ಸಿಕ್ಕಿತಾದರೂ ಕುದುರೆ ಸವಾರಿಗೆ ಅವಕಾಶ ಸಿಗಲಿಲ್ಲ.
ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆ ಬೆಳೆಯಾಗಿದ್ದರಿಂದ ಸರ್ಕಾರ ಕೂಡ ಅದ್ದೂರಿಯಾಗಿ ದಸರಾ ಆಚರಿಸಲು ಮುಂದಾಗಿದೆ. ಯುವ ದಸರಾ, ರೈತ ದಸರಾ, ಮಕ್ಕಳ ದಸರಾ ಜನಮನ ಸೆಳೆದಿದ್ದು, ಜಂಬೂ ಸವಾರಿ ಕೂಡ ಅದ್ದೂರಿಯಾಗಿ ನಡೆಯಲಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications