ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಸರಾ ಮಹೋತ್ಸವ 2022: ರಾಷ್ಟ್ರಪತಿ ಸೇರಿದಂತೆ ವಿವಿಧ ಗಣ್ಯರಿಗೆ ಆಹ್ವಾನ

|
Google Oneindia Kannada News

ಮೈಸೂರು, ಸೆಪ್ಟೆಂಬರ್ 22; ಐತಿಹಾಸಿಕ ದಸರಾ ಮಹೋತ್ಸವ-2022ರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ನೇತೃತ್ವದ ತಂಡ ಗುರುವಾರ ನವದೆಹಲಿಗೆ ತೆರಳಿ ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ.

ವಿಶ್ವವಿಖ್ಯಾತ ದಸರಾ ಮಹೋತ್ಸವ ದಸರಾ ಮಹೋತ್ಸವವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟನೆ ಮಾಡಲಿದ್ದಾರೆ. ಈಗಾಗಲೆ ಕರ್ನಾಟಕ ಸರಕಾರ ಘೋಷಣೆ ಮಾಡಿದೆ. ಇದೀಗ ದಸರಾಗೆ ವಾರವಿರುವಾಗ ಗಣ್ಯರಿಗೆ ಅಧಿಕೃತ ಆಹ್ವಾನ ನೀಡಲಾಗುತ್ತಿದ್ದು, ಉದ್ಘಾಟಕರಾದ ರಾಷ್ಟ್ರಪತಿಗೂ ಆಹ್ವಾನ ನೀಡಲಾಗಿದೆ.

ಮೈಸೂರು ದಸಾರಾ 2022; ಮೈಸೂರು ಅರಮನೆಯಲ್ಲಿ ಸಿಂಹಾಸನದ ಜೋಡಣೆಮೈಸೂರು ದಸಾರಾ 2022; ಮೈಸೂರು ಅರಮನೆಯಲ್ಲಿ ಸಿಂಹಾಸನದ ಜೋಡಣೆ

ಸಚಿವರಾದ ಶಶಿಕಲಾ ಜೊಲ್ಲೆ, ಸಂಸದರಾದ ಪ್ರತಾಪ್ ಸಿಂಹ, ಅಣ್ಣ ಸಾಹೇಬ ಶಂಕರ ಜೊಲ್ಲೆ ಮತ್ತು ಮೈಸೂರು ಮೇಯರ್ ಶಿವಕುಮಾರ್‌ ಗುರುವಾರ ನವದೆಹಲಿಯಲ್ಲಿ ರಾಷ್ಟ್ರಪತಿಗೆ ದ್ರೌಪದಿ ಮುರ್ಮುಗೆ ಆಹ್ವಾನ ನೀಡಿದರು.

Dasara team led by S. T. Somashekhar Invited President Draupadi Murmu for Dasara 2022

ಸೆಪ್ಟೆಂಬರ್ 26 ರಂದು ನಾಡದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ನಾಡಹಬ್ಬ ಮೈಸೂರು ದಸರಾ ಆರಂಭವಾಗಲಿದೆ. ಅಂದು ಬೆಳಗ್ಗೆ 9.45ರಿಂದ 10.05ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ರಾಷ್ಟ್ರಪತಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇದೇ ಪ್ರಥಮಬಾರಿಗೆ ರಾಷ್ಟ್ರಪತಿಗಳು ದಸರಾ ಮಹೋತ್ಸವ ಉದ್ಘಾಟನೆ ಮಾಡುತ್ತಿದ್ದಾರೆ.

ದ್ರೌಪದಿ ಮುರ್ಮು ಭಾರತದ 15ನೇ ರಾಷ್ಟ್ರಪತಿ ಆಗಿದ್ದಾರೆ. ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರ ಜೀವನ ಮತ್ತು ಸಾಧನೆ ಎಲ್ಲರಿಗೂ ಸ್ಫೂರ್ತಿ ಸೆಲೆಯಾಗುತ್ತದೆ. 64 ವರ್ಷದ ಮುರ್ಮು ಈ ಪರಮೋನ್ನತ ಪದವಿಗೇರಿದ ದೇಶದ ಮೊದಲ ಬುಡಕಟ್ಟು ಮಹಿಳೆ ಹಾಗೂ ಸ್ವಾತಂತ್ರ್ಯೋತ್ತರ ಭಾರತದಲ್ಲಿ ಜನಿಸಿದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಒಡಿಶಾ ವಿಧಾನಸಭೆಯು 2007 ರ ವರ್ಷದ ಅತ್ಯುತ್ತಮ ಶಾಸಕಿಗಾಗಿ ನೀಡಲಾಗುವ ನೀಲಕಂಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲಾಗಿತ್ತು.

ಸೆಪ್ಟೆಂಬರ್ 26 ರಿಂದ ಆರಂಭವಾಗಲಿರುವ ನಾಡಹಬ್ಬ ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ರಾಜ್ಯಪಾಲರಾದ ಥಾವರ್‌ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದ ಸಚಿವರು, ರಾಜ್ಯಪಾಲರನ್ನು ಸನ್ಮಾನಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಬಳಿಕ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ಬಸವರಾಜ್ ಬೊಮ್ಮಾಯಿರನ್ನು ಭೇಟಿ ಮಾಡಿ, ಫಲಪುಷ್ಪಗಳನ್ನು ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಇದೇ ವೇಳೆ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ರನ್ನು ಭೇಟಿ ಮಾಡಿ ಆಹ್ವಾನ ನೀಡಿದ್ದಾರೆ.

ನಂತರ ರಾಜ್ಯ ಹೈಕೋರ್ಟ್ ಹಂಗಾಮಿ ಮುಖ್ಯನ್ಯಾಯಮೂರ್ತಿ ಅಲೋಕ್ ಆರಾಧೆರನ್ನು ಭೇಟಿ ಮಾಡಿ, ದಸರಾ ಮಹೋತ್ಸವ -2022ರ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ದಸರಾ ಸ್ವಾಗತ ಉಪಸಮಿತಿ ಕಾರ್ಯಾಧ್ಯಕ್ಷರಾದ ರೂಪ ಎಂ. ಜೆ., ಕಾರ್ಯದರ್ಶಿ ಕೆ. ಕುಬೇರಪ್ಪ, ಸಚಿವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಗೌಡ, ವಿಶೇಷ ಕರ್ತವ್ಯಾಧಿಕಾರಿ ದೊಡ್ಡನಾಗಯ್ಯ ಮತ್ತಿತರರು ಉಪಸ್ಥಿತರಿದ್ದರು.

English summary
President of India Draupadi Murmu was formally invited by the State Government for the inauguration of Mysuru Dasara 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X