ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಕೊಡದ ಖಾಸಗಿ ಆಸ್ಪತ್ರೆಗಳಿಗೆ ಮೈಸೂರು ಡಿಸಿ ಸೂಚನೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜುಲೈ 14: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಕಡ್ಡಾಯವಾಗಿ ಚಿಕಿತ್ಸೆ ನೀಡಲು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌ ಆದೇಶಿಸಿದ್ದಾರೆ.

Recommended Video

ಒಂದು ವಾರದ ಲಾಕ್ ಡೌನ್ , ಎನಿರುತ್ತೆ , ಎನಿರಲ್ಲಾ ? | karnataka Lockdown | Oneindia Knanada

ಜಿಲ್ಲೆಯಲ್ಲಿರುವ ಕೋವಿಡ್ ಕೇರ್ ಸೆಂಟರ್, ಜಿಲ್ಲಾ ಆಸ್ಪತ್ರೆ ಹಾಗೂ ಕೋವಿಡ್-19ಗೆ ಸಂಬಂಧಿಸಿದಂತೆ ಸರ್ಕಾರದ ವತಿಯಿಂದ ಸ್ಥಾಪಿಸಲ್ಪಟ್ಟ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರನ್ನು ಯಾವುದೇ ಖಾಸಗಿ ಆಸ್ಪತ್ರೆಗಳಿಗೆ ಪ್ರವೇಶ ನೀಡಿ ಚಿಕಿತ್ಸೆಗೊಳಪಡಿಸಲು ಸೂಚಿಸಿದ್ದಲ್ಲಿ ಸಂಬಂಧಪಟ್ಟ ಖಾಸಗಿ ಆಸ್ಪತ್ರೆಗಳು ಸೋಂಕಿತರನ್ನು ಕಡ್ಡಾಯವಾಗಿ ದಾಖಲಿಸಿಕೊಂಡು ಚಿಕಿತ್ಸೆ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಮೈಸೂರು ಜಿಲ್ಲೆಯ ಲಾಕ್ ಡೌನ್ ಗೊಂದಲಕ್ಕೆ ತೆರೆ ಎಳೆದ ಡಿಸಿಮೈಸೂರು ಜಿಲ್ಲೆಯ ಲಾಕ್ ಡೌನ್ ಗೊಂದಲಕ್ಕೆ ತೆರೆ ಎಳೆದ ಡಿಸಿ

Mysuru DC Ordered Private Hospitals To Treat Coronavirus Patients Compulsory

ಒಂದು ವೇಳೆ ಖಾಸಗಿ ಆಸ್ಪತ್ರೆಗಳು ಈ ಆದೇಶವನ್ನು ಪಾಲಿಸದಿದ್ದಲ್ಲಿ ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಸ್ಟಾಬ್ಲಿಷ್ ‌ಮೆಂಟ್‌ ಕಾಯ್ದೆ ಅನ್ವಯ ತಕ್ಷಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
As the number of coronavirus continues to increase daily, DC Abhiram G. Shankar has ordered all private hospitals to treat the coronavirus patients without fail,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X