ಖಾಸಗಿ ಆಸ್ಪತ್ರೆಗಳಿಗೆ ಮೈಸೂರು ಡಿಸಿಯಿಂದ ಖಡಕ್ ಎಚ್ಚರಿಕೆ

ಮೈಸೂರು, ಜುಲೈ 1: ಕೊರೊನಾ ಸೋಂಕಿನಿಂದ ಸಾವನ್ನಪ್ಪಿದರೂ ಜಿಲ್ಲಾಡಳಿತಕ್ಕೆ ಯಾವುದೇ ರೀತಿಯ ಕನಿಷ್ಠ ಮಾಹಿತಿಯನ್ನೂ ನೀಡದ ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್‌ ಖಡಕ್ ಎಚ್ಚರಿಕೆ ನೀಡಿದ್ದಾರೆ.

ನೋಟಿಸ್ ಮೂಲಕ ಎಚ್ಚರಿಕೆ ನೀಡಿರುವ ಜಿಲ್ಲಾಧಿಕಾರಿಗಳು, ಕೊರೊನಾ ವೈರಸ್ ವಿಚಾರದಲ್ಲಿ ಖಾಸಗಿ ಆಸ್ಪತ್ರೆಗಳು ನಿರ್ಲಕ್ಷ್ಯ ವಹಿಸುತ್ತಿವೆ. SARI, ILI ಹಾಗೂ ಕೋವಿಡ್ ಗುಣಲಕ್ಷಣದ ರೋಗಿಯ ಮಾಹಿತಿಯನ್ನು ನೀಡಬೇಕು. ಯಾವುದೇ ಆಸ್ಪತ್ರೆಗಳಿಗೆ ಈ ಗುಣಲಕ್ಷಣದ ರೋಗಿ ದಾಖಲಾದರೆ ಕೂಡಲೇ ವೆಬ್ ಸೈಟ್ ಗೆ ಅಪ್ಡೇಟ್ ಮಾಡಬೇಕು. ಆದರೆ ಕೆಲವೊಂದು ಆಸ್ಪತ್ರೆಗಳು ಮಾಹಿತಿ ನೀಡುತ್ತಿಲ್ಲ. ಎರಡು ಕೋವಿಡ್ ಪ್ರಕರಣದ ರೋಗಿಗಳು ಸಾವನ್ನಪ್ಪಿದರೂ ಜಿಲ್ಲಾಡಳಿತಕ್ಕೆ ಯಾವುದೇ ಮಾಹಿತಿ ನೀಡಿಲ್ಲ. ಇದು ನಿರ್ಲಕ್ಷ್ಯತನದ ಪರಮಾವಧಿ. ಇದು ನಿಮಗೆ ಕೊನೆಯ ಎಚ್ಚರಿಕೆ ಎಂದಿದ್ದಾರೆ.

 Mysuru DC Abhiram Shankar Warned Private Hospital For Negligence On Coronavirus

ಇನ್ನು ಮುಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗುವ ಎಲ್ಲ ಮಾಹಿತಿ ನೀಡಿ. ಇಲ್ಲವಾದರೆ ನಿಮ್ಮ ಆರೋಗ್ಯ ಸಂಸ್ಥೆಯ ನೋಂದಣಿ ರದ್ದು ಮಾಡಬೇಕಾಗುತ್ತದೆ ಎಂದು ರೋಗಿ ಸಾವನ್ನಪ್ಪಿದರೂ ಮಾಹಿತಿ ನೀಡದ ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿಗಳು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+