ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕರ ವಿರುದ್ಧ ತನಿಖೆಗೆ ಆದೇಶ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಅಕ್ಟೋಬರ್ 28: ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕರ ಸೇವೆಯಲ್ಲಿ ನಡೆದಿರುವ ಅಕ್ರಮ ವ್ಯವಹಾರಗಳ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮೈಸೂರು ಜಿಲ್ಲಾಡಳಿತ ಕೊನೆಗೂ ಮಣಿದಿದೆ.

ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ವಿರುದ್ಧ ತನಿಖೆ ನಡೆಸಲು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ. ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್ ಸುಬ್ರಹ್ಮಣ್ಯ ಅವರ ಸೇವೆಯಲ್ಲಿ ನಡೆದಿರುವ ಅಕ್ರಮ ವ್ಯವಹಾರಗಳ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ಕಳೆದ 9 ದಿನಗಳಿಂದ ದಲಿತ ಸಂಘರ್ಷ ಸಮಿತಿ ಮುಖಂಡ ಚೋರನಹಳ್ಳಿ ಶಿವಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿತ್ತು.

ಮೈಸೂರು; ಖಾಸಗಿ ಆಸ್ಪತ್ರೆಗಳ ಮೇಲೆ ಕಣ್ಣಿಡಲು ಅಧಿಕಾರಿಗಳ ತಂಡಕ್ಕೆ ಡಿಸಿ ಸೂಚನೆಮೈಸೂರು; ಖಾಸಗಿ ಆಸ್ಪತ್ರೆಗಳ ಮೇಲೆ ಕಣ್ಣಿಡಲು ಅಧಿಕಾರಿಗಳ ತಂಡಕ್ಕೆ ಡಿಸಿ ಸೂಚನೆ

9 ದಿನಗಳಿಂದಲೂ ಜಿಲ್ಲಾಧಿಕಾರಿ ಕಚೇರಿ ಬಳಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು ತಮ್ಮ ಮನವಿಗೆ ಸ್ಪಂದಿಸದಿದ್ದರೆ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸುವುದಾಗಿ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದರು. ಇದೀಗ ಪ್ರತಿಭಟನಾಕಾರರ ಹೋರಾಟಕ್ಕೆ ಮಣಿದಿರುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಟಿ.ಎಸ್ ಸುಬ್ರಹ್ಮಣ್ಯ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ.

Mysuru: DC Ordered An Inquiry Against Palace Board Deputy Director TS Subramanian

ತನಿಖಾ ಆದೇಶದ ಪ್ರತಿ ನೀಡಿದ ನಂತರ ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆದಿದ್ದಾರೆ. ತಮ್ಮ ಮನವಿಗೆ ಜಿಲ್ಲಾಡಳಿತ ಸ್ಪಂದಿಸಿದ ಹಿನ್ನೆಲೆಯಲ್ಲಿ ಚೋರನಹಳ್ಳಿ ಶಿವಣ್ಣ ಪ್ರತಿಭಟನಾ ಸ್ಥಳ ತೆರವು ಮಾಡಿದರು.

English summary
Mysuru dc rohini sindhuri has ordered an inquiry against the Palace Board Deputy Director TS Subramanian. Since 9 days, Dalit sangarsha samiti has conducted protest regarding this
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X