ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಜೂನ್ 7ರವರೆಗೆ ಸಂಪೂರ್ಣ ಲಾಕ್‌ಡೌನ್

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮೇ 27: ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣದಿಂದ ಮೇ 29ರಿಂದ ಜೂನ್ 7 ರವರೆಗೆ ಲಾಕ್‌ಡೌನ್‌ಗೆ ಆದೇಶಿಸಲಾಗಿದೆ.

ಈ ಕುರಿತು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದು, ಹಾಲಿನ ಪಾರ್ಲರ್‌ಗಳು, ವೈದ್ಯಕೀಯ ಸೇವೆಗಳು, ಹಾಪ್‌ಕಾಮ್ಸ್‌ಗಳು ಮಾತ್ರ ತೆರೆಯಬಹುದಾಗಿದೆ ಎಂದು ತಿಳಿಸಿದ್ದಾರೆ.

Mysuru: DC Orders Total Lockdown From May 29 To June 7 As Covid-19 Cases Rise In The District

ಮೈಸೂರು ಜಿಲ್ಲೆಯಲ್ಲಿ ಜಿಲ್ಲಾಡಳಿತ ಹಾಗೂ ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ಆದರೂ ಸಹ ನಿಯಂತ್ರಣಕ್ಕೆ ಬರುತ್ತಿಲ್ಲ. ಪರಿಸ್ಥಿತಿ ಹೀಗೇ ಮುಂದುವರಿದರೆ ಕೈಮೀರುವ ಸಾಧ್ಯತೆ ಇದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಲಾಕ್‌ಡೌನ್ ತೀರ್ಮಾನವನ್ನು ಕೈಗೊಳ್ಳಲಾಗಿದೆ.

ಅಲ್ಲದೆ, ಈ ಬಗ್ಗೆ ಈಗಾಗಲೇ ಜಿಲ್ಲೆಯ ತಹಸಿಲ್ದಾರ್‌ಗಳು, ಜಿಲ್ಲಾ ಹಾಗೂ ತಾಲ್ಲೂಕುಗಳ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರ ಅಭಿಪ್ರಾಯಗಳನ್ನು ಪಡೆದು ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಲಾಕ್‌ಡೌನ್‌ನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಜೊತೆಗೆ ಸಾರ್ವಜನಿಕರಿಗೂ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ಅಗತ್ಯ ವಸ್ತುಗಳ ಅಂಗಡಿಗಳಿಗೆ 2 ದಿನಗಳಲ್ಲಿ ಮಾತ್ರ ಅವಕಾಶವಿದೆ (ಸೋಮವಾರ ಮತ್ತು ಗುರುವಾರ, ಬೆಳಿಗ್ಗೆ 6 ರಿಂದ 12 ರವರೆಗೆ)

ಆದರೆ, ಹಾಲು, ಮೊಸರು ಪ್ರತಿದಿನ ಲಭ್ಯವಾಗಲಿದ್ದು, ಖರೀದಿ ಪ್ರಕ್ರಿಯೆಗೆ ಜಿಲ್ಲಾಡಳಿತ ಕೆಲವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ವಾರದಲ್ಲಿ 2 ದಿನ ಅಗತ್ಯ ವಸ್ತುಗಳಿಗೆ ಅವಕಾಶ ನೀಡಿದ್ದನ್ನು ಜನತೆ ಸದುಪಯೋಗಪಡಿಸಿಕೊಳ್ಳಬೇಕು. ಈ ಸಂದರ್ಭದಲ್ಲಿ ಯಾರೂ ಆತಂಕಗೊಳ್ಳದೇ ಸಮಾಧಾನದಿಂದ ವಸ್ತುಗಳನ್ನು ಖರೀದಿಸಬೇಕು.

ಅಂದರೆ, ಅಂಗಡಿಗಳ ಮುಂದೆ ಗುಂಪು ಸೇರುವುದು, ಮುಗಿ ಬೀಳುವಂತಹ ಕಾರ್ಯಗಳನ್ನು ಮಾಡಬಾರದು. ಸಾಮಾಜಿಕ ಅಂತರವನ್ನು ಎಲ್ಲರೂ ಪಾಲಿಸುವುದರ ಜೊತೆಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆಯನ್ನೂ ಸಹ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜನರಲ್ಲಿ ಮನವಿ ಮಾಡಿದ್ದಾರೆ.

English summary
A full lockdown has been ordered from May 29 to June 7 due to increasing number of coronavirus cases in Mysuru district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X