• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರು ಡಿಸಿ ರೋಹಿಣಿ ಸಿಂಧೂರಿ ಕುಟುಂಬದ ಎಲ್ಲರಿಗೂ ಕೊರೊನಾ ಸೋಂಕು

|

ಮೈಸೂರು, ಮೇ 15: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಇಡೀ ಕುಟುಂಬದ ಸದಸ್ಯರಿಗೆ ಕೊರೊನಾ ವೈರಸ್ ಪಾಸಿಟಿವ್ ಆಗಿದ್ದು, ಡಿಸಿ ರೋಹಿಣಿ ಸಿಂಧೂರಿ ಅವರಿಗೆ ಮಾತ್ರ ನೆಗೆಟಿವ್ ವರದಿ ಬಂದಿದೆ.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ತಂದೆ-ತಾಯಿ, ಅತ್ತೆ-ಮಾವ ಹಾಗೂ ಪತಿ ಎಲ್ಲರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಎಲ್ಲರೂ ಹೋಂ ಐಸೋಲೇಷನ್‍ನಲ್ಲಿದ್ದಾರೆ. ಕುಟುಂಬಸ್ಥರಿಗೆಲ್ಲ ಪಾಸಿಟಿವ್ ಆಗಿದ್ದರಿಂದ ಡಿಸಿ ರೋಹಿಣಿ ಸಹ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದು, ವರದಿ ನೆಗೆಟಿವ್ ಬಂದಿದೆ. ಹೀಗಾಗಿ ಎಲ್ಲರಿಗೂ ಪಾಸಿಟಿವ್ ಆದರೂ ಇವರಿಗೆ ಮಾತ್ರ ಕೊರೊನಾ ನೆಗೆಟಿವ್ ಆಗಿದೆ.

ಮುಂಜಾಗ್ರತೆ ವಹಿಸಿದ ಕಾರಣ ಕುಟುಂಬಸ್ಥರಿಗೆ ಯಾವುದೇ ಸಮಸ್ಯೆ ಆಗಿಲ್ಲ. ಎಲ್ಲರೂ ಹೋಮ್ ಐಸೋಲೇಶನ್‍ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲೆಯಲ್ಲಿ ಕೊರೊನಾ ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದು, ದಣಿವರಿಯದೆ ಕೆಲಸ ಮಾಡುತ್ತಿದ್ದಾರೆ.

English summary
Covid-19 positive for the entire family of Mysuru District Collector Rohini Sindhuri, Covid negative report only to DC Rohini Sindhuri.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X