ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು; ಖಾಸಗಿ ಆಸ್ಪತ್ರೆಗಳ ಮೇಲೆ ಕಣ್ಣಿಡಲು ಅಧಿಕಾರಿಗಳ ತಂಡಕ್ಕೆ ಡಿಸಿ ಸೂಚನೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಅಕ್ಟೋಬರ್ 27: ಕೊರೊನಾ ಸೋಂಕಿನ ಚಿಕಿತ್ಸೆ ಸಂಬಂಧವಾಗಿ ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾವಹಿಸಲು ರಚಿಸಿರುವ ಅಧಿಕಾರಿಗಳ ತಂಡ ದಿನವೂ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದರು.

ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಎಎಸ್‍ಐ, ಚೆಸ್ಕಾಂ ಮತ್ತು ನೋಡಲ್ ಅಧಿಕಾರಿಗಳನ್ನೊಳಗೊಂಡ ತಂಡವು ಖಾಸಗಿ ಆಸ್ಪತ್ರೆಗಳ ಕುರಿತು ನಿಗಾವಹಿಸಬೇಕು. ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳು ಶೇ.50 ರಷ್ಟು ಹಾಸಿಗೆಗಳನ್ನು ಸರ್ಕಾರ ಸೂಚಿಸುವ ಸೋಂಕಿತರಿಗೆ ಮೀಸಲಿಟ್ಟಿವೆ. ಯಾವುದೇ ಕಾರಣಕ್ಕೂ ಹಾಸಿಗೆಗಳ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದರು.

ಕೊರೊನಾ ಪರೀಕ್ಷೆ; ಹೆಚ್ಚುವರಿ ಸಿಬ್ಬಂದಿ ನಿಯೋಜನೆಗೆ ಮೈಸೂರು ಡಿಸಿ ಸೂಚನೆಕೊರೊನಾ ಪರೀಕ್ಷೆ; ಹೆಚ್ಚುವರಿ ಸಿಬ್ಬಂದಿ ನಿಯೋಜನೆಗೆ ಮೈಸೂರು ಡಿಸಿ ಸೂಚನೆ

ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿರುವ ದರವನ್ನು ಪಾಲಿಸುತ್ತಿದ್ದಾರೆಯೇ ಎಂಬುದನ್ನು ಸೋಂಕಿತರ ಕುಟುಂಬಸ್ಥರಿಂದ ಮಾಹಿತಿ ಪಡೆಯಬೇಕು. ನಿಗದಿತ ದರಕ್ಕಿಂತ ಹೆಚ್ಚು ದರ ವಿಧಿಸಿದರೆ ಅದನ್ನು ವಾಪಸ್​ ಕೊಡಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗುವ ಪ್ರತಿಯೊಬ್ಬ ವ್ಯಕ್ತಿಯ ಸಂಪೂರ್ಣ ಮಾಹಿತಿಯನ್ನು ಎಸ್ 3 ಪೋರ್ಟಲ್‍ನಲ್ಲಿ ದಾಖಲಿಸುವುದರ ಕುರಿತು ಗಮನ ನೀಡಬೇಕು ಎಂದರು.

Mysuru: DC Rohini Sindhuri Instructed Officials To Monitor Covid Treatment In Private Hospitals

ಪ್ರತಿ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಐಸಿಎಂಆರ್ ಸೂಚಿಸುವ ಚಿಕಿತ್ಸಾ ಕ್ರಮವನ್ನು ಅನುಸರಿಸುತ್ತಿರುವ ಬಗ್ಗೆ ಮಾಹಿತಿ ಪಡೆಯಬೇಕು. ಸೋಂಕಿತರು ಯಾವ ಕಾರಣಕ್ಕೆ ಮೃತಪಟ್ಟರು ಎಂಬುದರ ಬಗ್ಗೆ ಡೆತ್ ಆಡಿಟ್ ಮಾಡುವುದನ್ನು ಪರಿಶೀಲಿಸಬೇಕು. ಕೊರೊನಾ ಸೋಂಕು ತಗುಲಿದ ವ್ಯಕ್ತಿಗಳಿಗೆ ಹಾಗೂ ಕುಟುಂಬದವರಿಗೆ ಸಮಸ್ಯೆಯಾಗಬಾರದು ಎಂಬ ಸದುದ್ದೇಶದಿಂದ ತಂಡವನ್ನು ರಚಿಸಲಾಗಿದೆ. ತಂಡದ ಅಧಿಕಾರಿಗಳು ಆಸ್ಪತ್ರೆಯೊಂದಿಗೆ ನಿರಂತರ ಸಂಪರ್ಕ ಹೊಂದಿರಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಮರ್‌ನಾಥ್, ನೋಡಲ್ ಅಧಿಕಾರಿಗಳಾದ ಡಾ.ರವಿ, ಡಾ.ಸೀತಾಲಕ್ಷ್ಮೀ, ಡಾ.ಜಗದೀಶ್ ಹಾಗೂ ಅಧಿಕಾರಿಗಳು ಇದ್ದರು.

Recommended Video

Munirathna : ನಮ್ ಅಮ್ಮ ಸತ್ತು 25 ವರುಷ ಆಗಿದೆ | Oneindia Kannada

ಮೈಸೂರಿನಲ್ಲಿ ಕೊರೊನಾ ಪ್ರಕರಣ: ಮೈಸೂರಿನಲ್ಲಿ ಈವರೆಗೂ 47,032 ಕೊರೊನಾ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 44,026 ಮಂದಿ ಗುಣಮುಖರಾಗಿದ್ದು, 2,055 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ ಕೋವಿಡ್-19ನಿಂದ ಜಿಲ್ಲೆಯಲ್ಲಿ 951 ಮಂದಿ ಸಾವನ್ನಪ್ಪಿದ್ದಾರೆ.

English summary
Mysuru DC Rohini Sindhuri instructed officials team to monitor private hospitals regarding treatment of coronavirus
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X