ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ; ಮೈಸೂರು ಡಿಸಿ ಖಡಕ್ ವಾರ್ನಿಂಗ್
ಮೈಸೂರು, ಸೆಪ್ಟೆಂಬರ್ 12: ಕೋವಿಡ್-19 ಸೋಂಕು ತಡೆಗಟ್ಟುವ ಕಾರ್ಯದಲ್ಲಿ ನಿರತರಾಗಿರುವ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ ಮೈಸೂರು ಡಿಸಿ ಶರತ್ ಬಿ.
ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ, ಕೊರೊನಾ ಸೋಂಕು ತಡೆಗಟ್ಟುವ ಕಾರ್ಯದಲ್ಲಿ ಮೈಸೂರು ನಗರ ಹಾಗೂ ಜಿಲ್ಲೆಯ ವಿವಿಧೆಡೆ ಆರೋಗ್ಯ ಇಲಾಖೆ ವತಿಯಿಂದ ಕೈಗೊಂಡಿರುವ ಸೋಂಕು ಪರೀಕ್ಷೆ ಕಾರ್ಯಕ್ಕೆ ಸಂಬಂಧಿಸಿದಂತೆ, ಕೆಲವು ಸಾರ್ವಜನಿಕರು ಅನಗತ್ಯವಾಗಿ ವೈದ್ಯರ ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.
ಇದು ಅತ್ಯಂತ ಗಂಭೀರ ಸ್ವರೂಪದ್ದಾಗಿರುವುದರಿಂದ ಇಂತಹ ಪ್ರಕರಣದಲ್ಲಿ ಭಾಗಿ ಆಗುವವರ ವಿರುದ್ಧ ತೀವ್ರ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿರುವ ಅವರು, ಸೋಂಕಿನ ವಿರುದ್ಧ ಹೋರಾಟದಲ್ಲಿ ಎಲ್ಲರೂ ಕೊರೊನಾ ವಾರಿಯರ್ ಗಳೊಂದಿಗೆ ಸಹಕರಿಸಬೇಕು ಎಂದು ತಿಳಿಸಿದ್ದಾರೆ.












Click it and Unblock the Notifications