ಕೊರೊನಾ ಪರೀಕ್ಷೆಗೆ ಸುಳ್ಳು ಮಾಹಿತಿ ನೀಡಿದರೆ FIR; ಮೈಸೂರು ಡಿಸಿ
ಮೈಸೂರು, ಆಗಸ್ಟ್ 01: ಕೊರೊನಾ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಜಿಲ್ಲಾಡಳಿತ ಸೋಂಕು ಪತ್ತೆ ಪರೀಕ್ಷೆಯನ್ನು ಹೆಚ್ಚಿಸಿದೆ. ಆದರೆ ಅನೇಕರು ಕ್ವಾರಂಟೈನ್ ಮತ್ತು ಆಸ್ಪತ್ರೆಗೆ ದಾಖಲಿಸುತ್ತಾರೆ, ಮನೆಗೆ ಪೋಸ್ಟರ್ ಹಚ್ಚುತ್ತಾರೆ ಎಂಬ ಕಾರಣಕ್ಕೆ ಸುಳ್ಳು ವಿಳಾಸ, ಸುಳ್ಳು ಮೊಬೈಲ್ ನಂಬರ್ ನೀಡುತ್ತಿದ್ದಾರೆ. ಅಂತಹವರ ವಿರುದ್ಧ ಎಫ್ಐಆರ್ ದಾಖಲಿಸುತ್ತೇವೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣ ಹಾಗೂ ಸಾವಿನ ಸಂಖ್ಯೆಗಳು ಹೆಚ್ಚಾಗುತ್ತಿವೆ. ಸುಳ್ಳು ಮಾಹಿತಿ ನೀಡಿ ಕೆಲವರು ಚಿಕಿತ್ಸೆ ಪಡೆಯದೆ ನಾಪತ್ತೆಯಾಗುತ್ತಿದ್ದಾರೆ. ಈ ಹಿನ್ನೆಲೆ ಜಿಲ್ಲಾಡಳಿತ ತಪ್ಪು ಮಾಹಿತಿ ನೀಡುವವರ ವಿರುದ್ಧ ಎಫ್ಐಆರ್ ದಾಖಲಿಸಲು ಮುಂದಾಗಿರುವುದಾಗಿ ತಿಳಿಸಿದರು.
ತಪಾಸಣೆ ವೇಳೆ 30ಕ್ಕೂ ಹೆಚ್ಚಿನ ಸೋಂಕಿತರು ತಪ್ಪು ವಿಳಾಸ ನೀಡಿದ್ದು, ಜಿಲ್ಲಾಡಳಿತದ ಸಂಪರ್ಕಕ್ಕೆ ಸಿಕ್ಕಿಲ್ಲ. ಪರೀಕ್ಷೆ ವರದಿ ಪಾಸಿಟಿವ್ ಬಂದಾಗ ಆರೋಗ್ಯಾಧಿಕಾರಿಗಳು ಕರೆ ಮಾಡಿದರೆ ಬೇರೆ ಯಾರೋ ಕರೆ ಸ್ವೀಕರಿಸುತ್ತಾರೆ ಅಥವಾ ನಂಬರ್ ತಪ್ಪಾಗಿರುತ್ತದೆ. ವಿಳಾಸ ಹುಡುಕಿ ಹೋದರೆ ಅಲ್ಲಿಯೂ ಸೋಂಕಿತರು ಸಿಗುವುದಿಲ್ಲ. ಹೀಗೆ ಆರೋಗ್ಯಾಧಿಕಾರಿಗಳನ್ನು ಕೊರೊನಾ ಟೆಸ್ಟಿಂಗ್ ವೇಳೆ ತಪ್ಪು ಮಾಹಿತಿ ನೀಡಿ ಯಾಮಾರಿಸುತ್ತಿದ್ದಾರೆ ಎಂದರು.

ಸಾಮಾನ್ಯವಾಗಿ ಗಂಟಲು ದ್ರವ ಪರೀಕ್ಷೆಯಲ್ಲಿ ನೀಡುವ ವಿವರವನ್ನು ಸರಿಯಾಗಿ ಪರಿಶೀಲಿಸಲು ಅಧಿಕಾರಿಗಳಿಗೆ ಸಾಧ್ಯವಾಗುತ್ತಿಲ್ಲ. ಇದನ್ನು ಬಂಡವಾಳವನ್ನಾಗಿ ಮಾಡಿಕೊಂಡಿರುವ ಕೆಲವರು ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದರು.
ಪರೀಕ್ಷೆ ಸಂದರ್ಭದಲ್ಲಿ ಆಧಾರ್, ರೇಷನ್ ಕಾರ್ಡ್ ಕಡ್ಡಾಯ: ಪರೀಕ್ಷೆ ವೇಳೆ ತಪ್ಪು ಮಾಹಿತಿ ನೀಡುತ್ತಿರುವ ಹಿನ್ನೆಲೆ ಇನ್ನು ಮುಂದೆ ಪರೀಕ್ಷೆ ವೇಳೆ ಆಧಾರ್ ಕಾರ್ಡ್ ನಂಬರ್, ಮತದಾರರ ಗುರುತಿನ ಚೀಟಿ ಮತ್ತು ರೇಷನ್ ಕಾರ್ಡ್ ಯಾವುದಾದ್ರೂ ಒಂದು ದಾಖಲೆಯನ್ನು ವ್ಯಕ್ತಿ ನೀಡಲೇಬೇಕು ಎಂಬ ನಿಯಮವನ್ನು ಜಿಲ್ಲಾಡಳಿತ ರೂಪಿಸಿದೆ.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ












Click it and Unblock the Notifications