ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಪರೀಕ್ಷೆಗೆ ಸುಳ್ಳು ಮಾಹಿತಿ ನೀಡಿದರೆ FIR; ಮೈಸೂರು ಡಿಸಿ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಆಗಸ್ಟ್‌ 01: ಕೊರೊನಾ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಜಿಲ್ಲಾಡಳಿತ ಸೋಂಕು ಪತ್ತೆ ಪರೀಕ್ಷೆಯನ್ನು ಹೆಚ್ಚಿಸಿದೆ. ಆದರೆ ಅನೇಕರು ಕ್ವಾರಂಟೈನ್ ಮತ್ತು ಆಸ್ಪತ್ರೆಗೆ ದಾಖಲಿಸುತ್ತಾರೆ, ಮನೆಗೆ ಪೋಸ್ಟರ್ ಹಚ್ಚುತ್ತಾರೆ ಎಂಬ ಕಾರಣಕ್ಕೆ ಸುಳ್ಳು ವಿಳಾಸ, ಸುಳ್ಳು ಮೊಬೈಲ್‌ ನಂಬರ್‌ ನೀಡುತ್ತಿದ್ದಾರೆ. ಅಂತಹವರ ವಿರುದ್ಧ ಎಫ್ಐಆರ್ ದಾಖಲಿಸುತ್ತೇವೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣ ಹಾಗೂ ಸಾವಿನ ಸಂಖ್ಯೆಗಳು ಹೆಚ್ಚಾಗುತ್ತಿವೆ. ಸುಳ್ಳು ಮಾಹಿತಿ ನೀಡಿ ಕೆಲವರು ಚಿಕಿತ್ಸೆ ಪಡೆಯದೆ ನಾಪತ್ತೆಯಾಗುತ್ತಿದ್ದಾರೆ. ಈ ಹಿನ್ನೆಲೆ ಜಿಲ್ಲಾಡಳಿತ ತಪ್ಪು ಮಾಹಿತಿ ನೀಡುವವರ ವಿರುದ್ಧ ಎಫ್ಐಆರ್ ದಾಖಲಿಸಲು ಮುಂದಾಗಿರುವುದಾಗಿ ತಿಳಿಸಿದರು.

ಮೈಸೂರಿನಲ್ಲಿ ಕೊರೊನಾ ಬಂದ 30ಕ್ಕೂ ಹೆಚ್ಚು ಮಂದಿ ನಾಪತ್ತೆ?ಮೈಸೂರಿನಲ್ಲಿ ಕೊರೊನಾ ಬಂದ 30ಕ್ಕೂ ಹೆಚ್ಚು ಮಂದಿ ನಾಪತ್ತೆ?

ತಪಾಸಣೆ ವೇಳೆ 30ಕ್ಕೂ ಹೆಚ್ಚಿನ ಸೋಂಕಿತರು ತಪ್ಪು ವಿಳಾಸ ನೀಡಿದ್ದು, ಜಿಲ್ಲಾಡಳಿತದ ಸಂಪರ್ಕಕ್ಕೆ ಸಿಕ್ಕಿಲ್ಲ. ಪರೀಕ್ಷೆ ವರದಿ ಪಾಸಿಟಿವ್ ಬಂದಾಗ ಆರೋಗ್ಯಾಧಿಕಾರಿಗಳು ಕರೆ ಮಾಡಿದರೆ ಬೇರೆ ಯಾರೋ ಕರೆ ಸ್ವೀಕರಿಸುತ್ತಾರೆ ಅಥವಾ ನಂಬರ್ ತಪ್ಪಾಗಿರುತ್ತದೆ. ವಿಳಾಸ ಹುಡುಕಿ ಹೋದರೆ ಅಲ್ಲಿಯೂ ಸೋಂಕಿತರು ಸಿಗುವುದಿಲ್ಲ. ಹೀಗೆ ಆರೋಗ್ಯಾಧಿಕಾರಿಗಳನ್ನು ಕೊರೊನಾ ಟೆಸ್ಟಿಂಗ್ ವೇಳೆ ತಪ್ಪು ಮಾಹಿತಿ ನೀಡಿ ಯಾಮಾರಿಸುತ್ತಿದ್ದಾರೆ ಎಂದರು.

Mysuru DC Warned People Those Who Give Wrong Information During Corona Test

ಸಾಮಾನ್ಯವಾಗಿ ಗಂಟಲು ದ್ರವ ಪರೀಕ್ಷೆಯಲ್ಲಿ ನೀಡುವ ವಿವರವನ್ನು ಸರಿಯಾಗಿ ಪರಿಶೀಲಿಸಲು ಅಧಿಕಾರಿಗಳಿಗೆ ಸಾಧ್ಯವಾಗುತ್ತಿಲ್ಲ. ಇದನ್ನು ಬಂಡವಾಳವನ್ನಾಗಿ ಮಾಡಿಕೊಂಡಿರುವ ಕೆಲವರು ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದರು.

ಪರೀಕ್ಷೆ ಸಂದರ್ಭದಲ್ಲಿ ಆಧಾರ್, ರೇಷನ್ ಕಾರ್ಡ್ ಕಡ್ಡಾಯ: ಪರೀಕ್ಷೆ ವೇಳೆ ತಪ್ಪು ಮಾಹಿತಿ ನೀಡುತ್ತಿರುವ ಹಿನ್ನೆಲೆ ಇನ್ನು ಮುಂದೆ ಪರೀಕ್ಷೆ ವೇಳೆ ಆಧಾರ್ ಕಾರ್ಡ್ ನಂಬರ್, ಮತದಾರರ ಗುರುತಿನ ಚೀಟಿ ಮತ್ತು ರೇಷನ್ ಕಾರ್ಡ್ ಯಾವುದಾದ್ರೂ ಒಂದು ದಾಖಲೆಯನ್ನು ವ್ಯಕ್ತಿ ನೀಡಲೇಬೇಕು ಎಂಬ ನಿಯಮವನ್ನು ಜಿಲ್ಲಾಡಳಿತ ರೂಪಿಸಿದೆ.

English summary
"Many people in the district are giving false addresses, false mobile numbers to escape from quarantine and hospitals. We will file an FIR against them" warned DC Abhiram G Shankar,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X