ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ಪ್ರವಾಸಿ ತಾಣಗಳ ಕುರಿತು ಕೋವಿಡ್ ಸಭೆಯಲ್ಲಿ ತೀರ್ಮಾನ: ಸಚಿವ ಎಸ್‌ಟಿಎಸ್

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಆಗಸ್ಟ್ 06: "ಮೈಸೂರಿನಲ್ಲಿ ಕೋವಿಡ್ ಪ್ರಕರಣ ಸಂಬಂಧ ಶನಿವಾರ ಸಭೆ ಕರೆದಿದ್ದೇನೆ. ಪ್ರವಾಸಿ ತಾಣಗಳು ಸೇರಿದಂತೆ ಹೆಚ್ಚು ಮಂದಿ ಸೇರುವ ಸ್ಥಳಗಳಲ್ಲಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು? ಕೋವಿಡ್ ಪ್ರಕರಣವನ್ನು ಹೇಗೆ ಹತೋಟಿಗೆ ತರಬಹುದು ಎಂಬಿತ್ಯಾದಿಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಸಲಾಗುವುದು,'' ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.

ಮೈಸೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಸ್.ಟಿ. ಸೋಮಶೇಖರ್, "ಕೋವಿಡ್ ನಿರ್ವಹಣೆ ಬಗ್ಗೆ ಸರ್ಕಾರ ಅನೇಕ ಕ್ರಮಗಳನ್ನು ತೆಗೆದುಕೊಂಡಿದೆ. ಕೋವಿಡ್ ಹಾಗೂ ಪ್ರವಾಹ ಪರಿಸ್ಥಿತಿಗಳನ್ನು ನಿಭಾಯಿಸಲು ಹಾಲಿ ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ ವಹಿಸಿದ್ದಾರೆ. ನನಗೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಪರಿಸ್ಥಿತಿಯನ್ನು ನಿಭಾಯಿಸುವ ಹೊಣೆ ನೀಡಲಾಗಿದ್ದು, ಆ ನಿಟ್ಟಿನಲ್ಲಿ ಕ್ರಮವಹಿಸುತ್ತಿದ್ದೇನೆ,'' ಎಂದು ತಿಳಿಸಿದರು.

 ಕೋವಿಡ್ ಪರಿಸ್ಥಿತಿ ಕುರಿತು ಸಂಪೂರ್ಣ ಚರ್ಚೆ

ಕೋವಿಡ್ ಪರಿಸ್ಥಿತಿ ಕುರಿತು ಸಂಪೂರ್ಣ ಚರ್ಚೆ

"ಶುಕ್ರವಾರ ಚಾಮರಾಜನಗರದಲ್ಲಿ ಸಭೆ ನಡೆಸುತ್ತಿದ್ದು, ಶನಿವಾರ ಮೈಸೂರಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ಕರೆಯಲಾಗಿದೆ. ಈ ವೇಳೆ ಕೋವಿಡ್ ಪರಿಸ್ಥಿತಿ ಕುರಿತು ಸಂಪೂರ್ಣ ಚರ್ಚೆ ನಡೆಸಲಾಗುವುದು,'' ಎಂದು ತಿಳಿಸಿದರು.

ಮೈಸೂರು ವಿವಿ ಪ್ರಾಧ್ಯಾಪಕನ ಅತ್ಯಾಚಾರ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ಮೈಸೂರು ವಿವಿ ಪ್ರಾಧ್ಯಾಪಕನ ಅತ್ಯಾಚಾರ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್

ಕಳೆದೊಂದು ವರ್ಷದಿಂದ ಕೋವಿಡ್ ಇದ್ದು, ಅದರ ಜೊತೆಗೆ ಜೀವನ ನಡೆಸಬೇಕಿದೆ. ಹೀಗಾಗಿ ಜನರಿಗೆ ಹಾಗೂ ವ್ಯಾಪಾರ ವಹಿವಾಟಿಗೆ ತೊಂದರೆಯಾಗದಂತೆ, ಸೋಂಕು ಹರಡದಂತೆ ಯಾವ ಕ್ರಮಗಳನ್ನು ಕೈಗೊಳ್ಳಬಹುದು ಎಂಬ ನಿಟ್ಟಿನಲ್ಲಿ ವಿವರವಾಗಿ ಚರ್ಚೆ ನಡೆಸಲಾಗುವುದು ಎಂದು ಸಚಿವ ಸೋಮಶೇಖರ್ ತಿಳಿಸಿದರು.

 ರಾಜಕೀಯ ದಾಳಿ ಅಲ್ಲ

ರಾಜಕೀಯ ದಾಳಿ ಅಲ್ಲ

ಇನ್ನು ಶಾಸಕ ಜಮೀರ್ ಅಹ್ಮದ್ ಹಾಗೂ ಮಾಜಿ ಸಚಿವರಾದ ರೋಷನ್ ಬೇಗ್ ಮನೆ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ ಅಲ್ಲ. ಇ.ಡಿ ಅಧಿಕಾರಿಗಳು ಕೇಳಿದ ದಾಖಲೆಗಳನ್ನು ಕೊಟ್ಟರೆ ಸಮಸ್ಯೆಯಾಗುವುದಿಲ್ಲ. ಇನ್ನು ಈ ದಾಳಿಯನ್ನು ಬಿಜೆಪಿ ಮಾಡಿಸಿದೆ ಎಂಬ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷ ನಾಯಕರಾದ ಸಿದ್ದರಾಮಯ್ಯ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ತಿರುಗೇಟು ನೀಡಿದರು.

ನಾನೇ ಮುಂದಿನ ಮುಖ್ಯಮಂತ್ರಿ ಎಂದು ಹೇಳಿಕೆ ಕೊಡುತ್ತಿರುವ ಸಿದ್ದರಾಮಯ್ಯ ಬಗ್ಗೆ ಡಿ.ಕೆ.ಶಿವಕುಮಾರ್‌ಗೆ ಅಸಮಾಧಾನವಿರಬಹುದು. ಹಾಗಾಗಿ ಅವರ ಆಪ್ತರ ಮನೆ ಮೇಲೆ ಡಿಕೆಶಿಯವರೇ ಮಾಹಿತಿ ಕೊಟ್ಟು ದಾಳಿ ಮಾಡಿಸಿರಬಹುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

 ಯಾವ ಖಾತೆ ಕೊಟ್ಟರೂ ಸರಿ

ಯಾವ ಖಾತೆ ಕೊಟ್ಟರೂ ಸರಿ

ಸಂಪುಟದಲ್ಲಿ ಸಹಕಾರ ಖಾತೆಯನ್ನೇ ಕೇಳಿದ್ದೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವ ಎಸ್.ಟಿ. ಸೋಮಶೇಖರ್, ""ನಾನು ಸಚಿವ ಸ್ಥಾನಕ್ಕಾಗಿ ಎಲ್ಲೂ ಲಾಬಿ ಮಾಡಿಲ್ಲ. ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪ ಸರ್ಕಾರದಲ್ಲಿ ಒಂದು ವರ್ಷ ಸಚಿವನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಆ ಹಿನ್ನೆಲೆಯಲ್ಲಿ ಈಗ ಸಚಿವ ಸ್ಥಾನ ನೀಡಿದ್ದಾರೆ.''

"ಆದರೆ ಇಂಥದ್ದೇ ಖಾತೆ ಕೊಡಿ ಎಂದು ನಾನು ಕೇಳುವುದಿಲ್ಲ. ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ. ಒಂದು ವೇಳೆ, ನನ್ನನ್ನೇ ಕೇಳಿದರೆ ಬೆಂಗಳೂರು ಅಭಿವೃದ್ಧಿ ಖಾತೆ ಕೇಳುತ್ತೇನೆ. ಉಸ್ತುವಾರಿ ಜಿಲ್ಲೆ ಕೇಳಿದರೆ ಬೆಂಗಳೂರು ಜಿಲ್ಲೆಯನ್ನು ಕೇಳುತ್ತೇನೆ,'' ಎಂದು ತಿಳಿಸಿದರು.

 ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಭೇಟಿ

ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಭೇಟಿ

ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಮತ್ತೊಮ್ಮೆ ಸಚಿವರಾದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಎಸ್.ಟಿ. ಸೋಮಶೇಖರ್, ಚಾಮರಾಜನಗರ ಸಂಸದ ವಿ. ಶ್ರೀನಿವಾಸ್ ಪ್ರಸಾದ್‌ರನ್ನು ಭೇಟಿಯಾದರು. ಮೈಸೂರಿನ ಜಯಲಕ್ಷ್ಮಿ ಪುರಂನಲ್ಲಿರುವ ಶ್ರೀನಿವಾಸ್ ಪ್ರಸಾದ್ ನಿವಾಸಕ್ಕೆ ಆಗಮಿಸಿದ ಸಚಿವರು ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.

 ಬಿಎಸ್‌ಪಿಯಿಂದ ನನಗೆ ಮೋಸವಾಗಿದೆ

ಬಿಎಸ್‌ಪಿಯಿಂದ ನನಗೆ ಮೋಸವಾಗಿದೆ

ಬಿಎಸ್‌ಪಿಯಿಂದ ನನಗೆ ಮೋಸವಾಗಿದೆ, ನನ್ನಿಂದ ಬಿಎಸ್‌ಪಿ ಪಕ್ಷಕ್ಕೆ ಮೋಸವಾಗಿಲ್ಲ ಎಂದು ಕೊಳ್ಳೇಗಾಲ ಶಾಸಕ ಎನ್. ಮಹೇಶ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಎನ್. ಮಹೇಶ್, "ಬಿಎಸ್‌ಪಿ ನನ್ನ ತಾಯಿ ಪಕ್ಷ ಎಂದು ಹೇಳಿದ್ದೆ. ಆದರೆ ತಾಯಿಯೇ ಮಗನಿಗೆ ಮೋಸ ಮಾಡಿದಾಗ ಮಗ ಏನು ಮಾಡಬೇಕು. ಮಗ ಅನಾಥನಾಗಿದ್ದ, ಈಗಾಗಿ ರಾಜಕೀಯವಾಗಿ ದಾರಿ ಕಂಡುಕೊಂಡಿದ್ದೇನೆ,'' ಎಂದು ಹೇಳಿದರು.

"ನನ್ನನ್ನು ಟ್ರೋಲ್ ಮಾಡುತ್ತಿರುವವರು ಯಾರು ಎಂಬುದು ನನಗೆ ಗೊತ್ತಿದೆ. ಬಿಎಸ್‌ಪಿ ಗೆಳೆಯರಿಗೆ ನಾನು ಹೇಳುವುದಿಷ್ಟು. ನನ್ನನ್ನು ಟ್ರೋಲ್ ಮಾಡಿಕೊಂಡು ಸಮಯ ವ್ಯರ್ಥ ಮಾಡಬೇಡಿ. ಆ ಸಮಯವನ್ನು ಬಿಎಸ್‌ಪಿ ಪಕ್ಷ ಕಟ್ಟಲು ಬಳಸಿ. ನನ್ನನ್ನು ಟ್ರೋಲ್ ಮಾಡುತ್ತಿರುವವರಿಗೆ ಮಲೆ ಮಹದೇಶ್ವರ ಸ್ವಾಮಿ ಒಳೆಯದ್ದನ್ನು ಮಾಡಲಿ,' ಎಂದು ಶಾಸಕ ಎನ್. ಮಹೇಶ್ ತಿಳಿಸಿದರು.

 ಬಿಜೆಪಿ ಸೇರುವುದು ಬಿಟ್ಟು ಬೇರೆ ದಾರಿಯೇ ಇಲ್ಲ

ಬಿಜೆಪಿ ಸೇರುವುದು ಬಿಟ್ಟು ಬೇರೆ ದಾರಿಯೇ ಇಲ್ಲ

"ಅವತ್ತಿನ ರಾಜಕೀಯ ಸಂದರ್ಭಕ್ಕೆ ಹೇಳಿದ ಮಾತನ್ನು ಇವತ್ತಿನ ನೆಲೆಯಲ್ಲಿ ನಿಂತು ನೋಡಬಾರದು. ಹೋರಾಟಗಳ ವೇಳೆ ಹೇಳಿದ ಮಾತೇ ಬೇರೆ. ಅಧಿಕಾರ ಸ್ಥಾನಗಳಿಗೆ ಬಂದಾಗಿನ ಮಾತೇ ಬೇರೆ ಎಂಬುದು ನನಗೆ ಅರ್ಥವಾಗಿದೆ. ನಮ್ಮ ಮತ ಬ್ಯಾಂಕ್ ಯಾವುದು ನಮ್ಮನ್ನು ಬಿಟ್ಟು ಹೋಗಿಲ್ಲ. ನನಗೆ ಬಿಜೆಪಿ ಸೇರುವುದು ಬಿಟ್ಟು ಬೇರೆ ದಾರಿಯೇ ಇರಲಿಲ್ಲ. ಕಾಂಗ್ರೆಸ್‌ನಲ್ಲಿ ಸ್ಥಾನಗಳು ಇಲ್ಲ, ಇದಿಲ್ಲದಿದ್ದರೆ ಚುನಾವಣಾ ರಾಜಕಾರಣ ಬಿಡಬೇಕಿತ್ತು. ಹೀಗಾಗಿ ಬಿಜೆಪಿ ಸೇರಿದ್ದೇನೆ,'' ಎಂದು ಎನ್. ಮಹೇಶ್ ಹೇಳಿದರು.

English summary
The meeting of the Covid- 19 cases in Mysuru was convened on Saturday and tourist sites will be discussed, Minister ST. Somashekhar said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X