ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರನ್ನು ಮಹಾನಗರ ಪಾಲಿಕೆ ಮಾಡುವ ವಿಚಾರ; ಸಭೆ ನಂತರ ತೀರ್ಮಾನ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಅಕ್ಟೋಬರ್ 2: ಮೈಸೂರನ್ನು ಮಹಾನಗರ ಪಾಲಿಕೆ ಮಾಡಬೇಕು ಎಂಬ ಬೇಡಿಕೆ ಇದೆ. ಹೀಗಾಗಿ ಇಲ್ಲಿನ ಶಾಸಕರು ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ಸೇರಿಸಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ತಿಳಿಸಿದರು.

ಗಾಂಧೀಜಿ ಪ್ರತಿಮೆಗೆ ಶುಕ್ರವಾರ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 8 ಗ್ರಾಮ ಪಂಚಾಯಿತಿಗಳಿಗೆ ಅರ್ಹತೆ ಇದೆ. ಜನಸಂಖ್ಯೆ ಆಧಾರದ ಮೇಲೆ ಮಹಾನಗರ ಪಾಲಿಕೆಯಾಗಿ ಪರಿವರ್ತಿಸಬೇಕೇ ಎಂಬ ಬಗ್ಗೆ ಸಭೆ ನಡೆಸಿ ಅಂತಿಮ ತೀರ್ಮಾನಿಸಲಾಗುವುದು ಎಂದರು.

ಸಿದ್ದರಾಮಯ್ಯ ಮೊದಲು ನಿದ್ದೆಯಿಂದ ಏಳಬೇಕು; ಸೋಮಶೇಖರ್‌ ಲೇವಡಿ ಸಿದ್ದರಾಮಯ್ಯ ಮೊದಲು ನಿದ್ದೆಯಿಂದ ಏಳಬೇಕು; ಸೋಮಶೇಖರ್‌ ಲೇವಡಿ

ಜಿಲ್ಲಾಧಿಕಾರಿಗಳ ವರ್ಗಾವಣೆಯಲ್ಲಿ ಯಾವುದೇ ಗೊಂದಲ ಇಲ್ಲ. ಇದು ಸರ್ಕಾರದ ನಿರ್ಧಾರವಾಗಿದ್ದು, ನಾವು ಆ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಈಗಿನ ಜಿಲ್ಲಾಧಿಕಾರಿಗಳೂ ಕರ್ನಾಟಕದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಹೀಗಾಗಿ ಕನ್ನಡಿಗರೇ ಬೇಕು ಎಂದು ಐಎಎಸ್ ಅಧಿಕಾರಿಗಳ ವಿಷಯದಲ್ಲಿ ಹೇಳಲಾಗದು ಎಂದು ಸಚಿವ ಸೋಮಶೇಖರ್ ಹೇಳಿದರು.

Decision Of Converting Mysuru Into Mahanagara Palike Will Be After Meeting

ರಾಜರಾಜೇಶ್ವರಿ ಕ್ಷೇತ್ರದಲ್ಲಿ ಮುನಿರತ್ನ ಅವರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಅವರಿಗೇ ಬಿಜೆಪಿ ಟಿಕೆಟ್ ನೀಡಬೇಕೆಂದು ನಾವು ಮನವಿ ಮಾಡಿದ್ದೇವೆ. ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ. ಬಿಜೆಪಿಯಲ್ಲಿ ಎರಡು ಅಭ್ಯರ್ಥಿಗಳ ಹೆಸರು ಕೇಳಿಬರುವುದು ಸಹಜ. ಹಿಂದಿನ ಪರಾಜಿತ ಅಭ್ಯರ್ಥಿಯನ್ನೂ ಪರಿಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ಈ ಬಗ್ಗೆ ಪಕ್ಷದಲ್ಲಿ ತೀರ್ಮಾನವಾಗುತ್ತದೆ ಎಂದರು.

English summary
There is a demand of converting Mysuru as mahanagara palike. The decision will be taken after a meeting with mla's and officials said minister ST Somashekhar,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X