• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೇವಾಲಯ ತೆರವು; ಜಿಲ್ಲಾಡಳಿತದ ವಿರುದ್ಧ ಪ್ರತಾಪ್ ಸಿಂಹ ಆಕ್ರೋಶ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಸೆಪ್ಟೆಂಬರ್ 12; ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಪುರಾತನ ದೇವಸ್ಥಾನವನ್ನು ಕೆಡವಿಹಾಕಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಈ ವಿಚಾರದಲ್ಲಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರ ಮೈಸೂರಿನ ಅಗ್ರಹಾರದ 101 ಗಣಪತಿ ದೇವಸ್ಥಾನದಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಾಪ್ ಸಿಂಹ, "ಮೈಸೂರಿನಾದ್ಯಂತ 90ಕ್ಕಿಂತ ಹೆಚ್ಚು ದೇವಾಲಯಗಳಿವೆ. ಅವುಗಳನ್ನು ಕೆಡವುದರಿಂದ ಜನರ ಭಾವನೆಗೆ ಧಕ್ಕೆಯಾಗುತ್ತೆ. ನಾನು ಕೆಡಿಪಿ ಸಭೆಯಲ್ಲಿ ಇದನ್ನು ಚರ್ಚೆ ಮಾಡಿದ್ದೇನೆ. ನಮ್ಮ ಹಿಂದೂ ದೇವಾಲಯಗಳನ್ನು ಟಾರ್ಗೆಟ್ ಮಾಡ್ತಿರಾ?, ದರ್ಗಾ, ಚರ್ಚ್‌ಗಳು ಯಾಕೆ ತೆರವು ಮಾಡಿಲ್ಲ" ಎಂದು ಕಿಡಿಕಾರಿದರು.

"ಮಧ್ಯರಾತ್ರಿಯಲ್ಲಿ ಕಳ್ಳರ ರೀತಿ ಬಂದು ಹಿಂದೂ ದೇವಾಲಯಗಳನ್ನು ಕೆಡವುತ್ತಿದ್ದೀರಾ?. ಕಳ್ಳರು ದರೋಡೆಕೋರರು ಜನರಿಲ್ಲದೆ ವೇಳೆ ಮಾಡುತ್ತಾರೆ. ಅದೇ ರೀತಿ ಇವರು ನಮ್ಮ ದೇವಸ್ಥಾನಗಳನ್ನು ಕೆಡವುತ್ತಿದ್ದಾರೆ. ಇದು ಯಾವುದೇ ಕಾರಣಕ್ಕೂ ಸರಿಯಲ್ಲ" ಎಂದು ಅಸಮಾಧಾನ ವ್ಯಕ್ತಪಡಿಸಿದರು.

 ನಂಜನಗೂಡಿನಲ್ಲಿ ಹಿಂದೂ ದೇವಾಲಯ ನೆಲಸಮ: ಬಿಜೆಪಿ ನಾಯಕರ ವಾಗ್ಯುದ್ಧ ನಂಜನಗೂಡಿನಲ್ಲಿ ಹಿಂದೂ ದೇವಾಲಯ ನೆಲಸಮ: ಬಿಜೆಪಿ ನಾಯಕರ ವಾಗ್ಯುದ್ಧ

"ಮಾತೆತ್ತಿದರೆ ಸುಪ್ರೀಂಕೋರ್ಟ್ ಆರ್ಡರ್ ಅಂತಾರೆ. ನಮ್ಮ ಹತ್ತಿರನೂ ಸುಪ್ರೀಂ ಕೋರ್ಟ್ ಆರ್ಡರ್ ಇದೆ. ಸುಪ್ರೀಂ ಕೋರ್ಟ್ 2009ರಲ್ಲಿ ಮಧ್ಯಂತರ ಆದೇಶ ನೀಡಿದೆ. ಎಂಟು ವಾರದೊಳಗೆ ತೀರ್ಪು ಅನುಷ್ಠಾನದ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದೆ. 2009ಕ್ಕೆ ದೇವಸ್ಥಾನ, ಮಸೀದಿ ಮತ್ತು ಚರ್ಚ್ ಗಳನ್ನು ತಲೆ ಎತ್ತಲು ಬಿಡಬೇಡಿ ಅಂತ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಮೈಸೂರಿನ ಕ್ಯಾತಮಾರನ ಹಳ್ಳಿಯಲ್ಲಿ ಮಸೀದಿ ತಲೆ ಎತ್ತಲು ಹೇಗೆ ಬಿಟ್ಡಿದ್ದೀರಾ?, ಇದರಿಂದ ರಾಜು ಮರ್ಡರ್ ಆಯಿತು" ಎಂದು ಪ್ರತಾಪ್ ಸಿಂಹ ಕಿಡಿಕಾರಿದರು.

 ಪ್ರಧಾನಿ ಹೆಸರಲ್ಲಿ ದೇವಾಲಯ: ಹಲವರ ಆಕ್ಷೇಪದ ಬಳಿಕ ಮೋದಿ ಪ್ರತಿಮೆ ಕಣ್ಮರೆ ಪ್ರಧಾನಿ ಹೆಸರಲ್ಲಿ ದೇವಾಲಯ: ಹಲವರ ಆಕ್ಷೇಪದ ಬಳಿಕ ಮೋದಿ ಪ್ರತಿಮೆ ಕಣ್ಮರೆ

"ರಾಜ್ಯ ಸರ್ಕಾರ ಮತ್ತೊಮ್ಮೆ ದೇವಾಲಯಗಳ ಪಟ್ಟಿ ಪರೀಲನೆ ಮಾಡಬೇಕು. 2010ರ ರಾಜ್ಯ ಸರ್ಕಾರದ ಆದೇಶವನ್ನು ತಕ್ಷಣ ವಾಪಸ್ ಪಡೆಯಬೇಕು. ಮತ್ತೊಮ್ಮೆ ಸುಪ್ರೀಂಕೋರ್ಟ್ ಮುಂದೆ ಪರಿಷ್ಕೃತ ಪಟ್ಟಿ ಸಲ್ಲಿಸಬೇಕು. ಸಾರ್ವಜನಿಕವಾಗಿ ತೊಂದರೆಯಾಗುವ ದೇವಾಲಯ, ಮಸೀದಿ ಹಾಗೂ ಚರ್ಚ್‌ಗಳನ್ನು ಪ್ರತ್ಯೇಕ ಪ್ರಕರಣವಾಗಿ ಪರಿಗಣಿಸಿ. ಸ್ಥಳೀಯರೊಂದಿಗೆ ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳಿ. ಇಲ್ಲವಾದರೆ ರಾಜ್ಯಾದ್ಯಂತ ದೇವಾಲಯಗಳನ್ನು ಉಳಿಸಿ ಎಂಬ ಅಭಿಯಾನ ಮಾಡಬೇಕಾಗುತ್ತದೆ" ಎಂದು ಎಚ್ಚರಿಕೆ ನೀಡಿದರು.

ಅಪಘಾತದಲ್ಲಿ ಮೃತಪಟ್ಟ ಗಂಡನ ನೆನಪಿಗಾಗಿ ದೇವಾಲಯ ಕಟ್ಟಿದ ಪತ್ನಿಅಪಘಾತದಲ್ಲಿ ಮೃತಪಟ್ಟ ಗಂಡನ ನೆನಪಿಗಾಗಿ ದೇವಾಲಯ ಕಟ್ಟಿದ ಪತ್ನಿ

"ಸುಪ್ರೀಂಕೋರ್ಟ್ ತೀರ್ಪನ್ನು ನಾನು ಮೈಸೂರಿಗೆ ಮಾತ್ರ ಸೀಮಿತಗೊಳಿಸಿ ಮಾತನಾಡುತ್ತಿಲ್ಲ. ಇಡೀ ದೇಶಕ್ಕೆ ಅನ್ವಯವಾಗುವಂತೆ ಮಾತನಾಡುತ್ತಿದ್ದೇನೆ. ಯಾವುದೇ ಪೂರ್ವಾಪರಗಳನ್ನು ಪರಿಶೀಲಿಸದೇ ಏಕಾಏಕಿ ದೇಗುಲಗಳ ನೆಲಸಮ ಸರಿಯಲ್ಲ. ಇಂತಹ ಘಟನೆಗಳನ್ನು ಯಾವುದೇ ನಾಗರೀಕ ಸಮಾಜ ಒಪ್ಪುವುದಿಲ್ಲ. ಯಾವುದೇ ಪ್ರಾರ್ಥನಾ ಮಂದಿರಗಳನ್ನು ತೆರವುಗೊಳಿಸುವ ಮುನ್ನಾ ಮೊದಲು ಅಲ್ಲಿನ ಸ್ಥಳೀಯ ನಿವಾಸಿಗಳೊಂದಿಗೆ ಚರ್ಚಿಸಬೇಕು" ಎಂದರು.

"ಪ್ರಾರ್ಥನಾ ಮಂದಿರವನ್ನು ಉಳಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿದೆಯೇ? ಅಥವಾ ಸ್ಥಳಾಂತರ ಮಾಡಲು ಸಾಧ್ಯವಿದೆಯೇ? ಎಂಬೆಲ್ಲಾ ವಿಚಾರಗಳನ್ನು ಗಣನೆಗೆ ತೆಗೆದುಕೊಳ್ಳಬೇಕು. ಅನಿವಾರ್ಯ ಪರಿಸ್ಥಿತಿ ಇದ್ದರೆ ಮಾತ್ರ ಅಂತಹ ಪ್ರಾರ್ಥನಾ ಮಂದಿರಗಳನ್ನು ಮಾತ್ರ ತೆರವು ಮಾಡಿ. ಸ್ಥಳೀಯ ನಿವಾಸಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ತೆರವುಗೊಳಿಸಿ. ಇದಲ್ಲದೆ ಜನರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಯಾವುದೇ ಪ್ರಾರ್ಥನಾ ಮಂದಿರಗಳನ್ನು ತೆರವುಗೊಳಿಸಬಾರದು" ಎಂದು ಪ್ರತಾಪ್ ಸಿಂಹ ಹೇಳಿದರು.

ಬಿಜೆಪಿಯಲ್ಲೇ 2 ಬಣ; ಮೈಸೂರು ಜಿಲ್ಲೆಯಾದ್ಯಂತ ಹಿಂದೂ ದೇವಾಲಯಗಳ ತೆರವು ವಿಚಾರದಲ್ಲಿ ಬಿಜೆಪಿಯಲ್ಲಿಯೇ 2 ಬಣವಾಗಿದೆ. ಪ್ರತಾಪ್ ಸಿಂಹ ಜಿಲ್ಲಾಡಳಿತ ಕ್ರಮ ವಿರೋಧಿಸುತ್ತಿದ್ದಾರೆ.

ಸಂಸದ ಪ್ರತಾಪ್ ಸಿಂಹ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಎಸ್. ಎ. ರಾಮದಾಸ್, "ಅವರ ಅಭಿಪ್ರಾಯ ಬೇರೆ, ನನ್ನ ಅಭಿಪ್ರಾಯ ಬೇರೆ. ಸುಪ್ರೀಂಕೋರ್ಟ್‌ ಸೂಚನೆಯಂತೆ ಕ್ರಮ ಜರುಗುತ್ತಿದೆ" ಎಂದು ಹೇಳಿದ್ದಾರೆ.

"ಹಿಂದೂ ದೇವಾಲಯಗಳನ್ನು ಏಕಾಏಕಿ ತೆರವು ಮಾಡುತ್ತಿಲ್ಲ. ಮೊದಲು ಅದನ್ನು ಉಳಿಸಿಕೊಳ್ಳುವ ಯೋಚನೆ‌ ಮಾಡಲಾಗುತ್ತಿದೆ. ಎರಡನೇ ಹಂತದಲ್ಲಿ ಸ್ಥಳಾಂತರಕ್ಕೆ ಚಿಂತನೆ ಇದೆ. ಇದೆರಡು ಸಾಧ್ಯವಾಗದಿದ್ದಾಗ ತೆರವು ಮಾಡಲಾಗುತ್ತಿದೆ. ಇದರಲ್ಲಿ ಆ ಧರ್ಮದ್ದು ಈ ಧರ್ಮದ್ದು ಎಂಬುದು ಏನು ಇಲ್ಲ" ಎಂದು ತಿಳಿಸಿದ್ದಾರೆ.

English summary
Demolition of an ancient Hindu temple at Nanjangud, Mysuru district. BJP MP Pratap Simha upset with district administration.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X