ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ; ಮಾಧ್ಯಮದವರಿಗೆ ಪ್ರವೇಶ ನಿರಾಕರಣೆ
ಮೈಸೂರು, ಜುಲೈ 13: ಚಾಮುಂಡಿ ಬೆಟ್ಟದಲ್ಲಿ ಇಂದು ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಚಿತ್ರೀಕರಿಸಲು ಹೋದ ಮಾಧ್ಯಮದವರಿಗೆ ಪ್ರವೇಶ ನಿರಾಕರಿಸಿದ ಘಟನೆ ನಡೆದಿದೆ.
Recommended Video
ಬೆಟ್ಟದಲ್ಲಿ ಕಳೆದ ಮೂರು ಆಷಾಢ ಶುಕ್ರವಾರದ ಪೂಜೆ ಕುರಿತು ಮಾಧ್ಯಮಗಳು ವರದಿ ಮಾಡಿದ್ದವು. ಕಳೆದ ಬಾರಿ ಸಚಿವ ಈಶ್ವರಪ್ಪ ಹಾಗೂ ಸಂಸದ ಪ್ರತಾಪಸಿಂಹ ಆಗಮಿಸಿದ ವೇಳೆ ಸಾಮಾಜಿಕ ಅಂತರ ಕಾಪಾಡಿಕೊಂಡಿರಲಿಲ್ಲ. ಈ ಬಗ್ಗೆ ಅಂದು ಮಾಧ್ಯಮಗಳು ವರದಿ ಮಾಡಿದ ಹಿನ್ನೆಲೆಯಲ್ಲಿ ಈ ಬಾರಿ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದಾರೆ ಎನ್ನಲಾಗುತ್ತಿದೆ. ಮುಂಜಾನೆ ಆರು ಗಂಟೆಯಿಂದಲೂ ಮಾಧ್ಯಮದವರನ್ನು ತಾವರಕಟ್ಟೆ ಬಳಿಯೇ ತಡೆದಿದ್ದಾರೆ.

ಈ ವೇಳೆ ಸ್ಥಳಕ್ಕೆ ಆಗಮಿಸಿದ ಸಂಸದ ಪ್ರತಾಪಸಿಂಹ ಪತ್ರಕರ್ತರೊಂದಿಗೆ, ಕಳೆದ ಬಾರಿ ಮಾಧ್ಯಮದವರು ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ ಎಂದು ತೋರಿಸಿದ್ದೀರಿ. ಅಲ್ಲದೆ ಮಾಧ್ಯಮದವರಿಗೆ ಪ್ರವೇಶ ನೀಡುವ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡುವುದಾಗಿ ಹೇಳಿ ಅಲ್ಲಿಂದ ತೆರಳಿದ್ದಾರೆ. ಮಾಧ್ಯಮಗಳಲ್ಲಿ ವರದಿ ಬಿತ್ತರವಾದ ಹಿನ್ನೆಲೆಯಲ್ಲಿ ಇಂದು ಮಾಧ್ಯಮದವರಿಗೆ ಪ್ರವೇಶ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.












Click it and Unblock the Notifications