• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನಾಳೆ ಶಾಲೆಗಳ ರೀ ಓಪನ್, ಸ್ವಾಗತಕ್ಕೆ ಸಜ್ಜಾದ ಶಿಕ್ಷಣ ಇಲಾಖೆ

|

ಮೈಸೂರು, ಮೇ 28 : ಬೇಸಿಗೆ ರಜೆ ಮುಗಿದಿದ್ದು, ಮಕ್ಕಳು ಶಾಲೆಯತ್ತ ಮುಖ ಮಾಡುವ ಸಮಯ ಬಂದಾಯ್ತು. ರಜೆಯ ಮಜಾ ಅನುಭವಿಸಿದ್ದ ಮಕ್ಕಳು ಸಂಭ್ರಮದಿಂದ ಶಾಲೆಗೆ ಹಾಜರಾಗುವಂತೆ ಮಾಡಲು ಶಿಕ್ಷಣ ಇಲಾಖೆ ಸಜ್ಜಾಗಿದೆ. ಪ್ರಸ್ತಕ ಸಾಲಿನ ಶೈಕ್ಷಣಿಕ ವರ್ಷ (2019-20) ಮೇ 29ರ ನಾಳೆ ಆರಂಭವಾಗಲಿದೆ. ಹಾಗಾಗಿ ಶಾಲೆಗೆ ಬರುವ ಮಕ್ಕಳನ್ನು ನೂತನ ಶೈಕ್ಷಣಿಕ ವರ್ಷಕ್ಕೆ ಸ್ವಾಗತಿಸಲು ನಗರದ ಎಲ್ಲ ಸರ್ಕಾರಿ ಶಾಲೆಗಳು ಸಿದ್ಧಗೊಂಡಿವೆ.

ಶಾಲೆಗಳಿಗೆ ತಳಿರು ತೋರಣಗಳನ್ನು ಕಟ್ಟಿ ಹಬ್ಬದಂತೆ ಆಚರಿಸಲು, ವಿದ್ಯಾರ್ಥಿಗಳನ್ನು ಸ್ವಾಗತಿಸಿ ಸಿಹಿ ಹಂಚಲು ಶಿಕ್ಷಕರು ಇಂದು ಸಿದ್ಧತಾ ಕಾರ್ಯಗಳನ್ನು ಮಾಡಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಸೂಚಿಸಿದೆ.

ಶಾಲೆಗಳ ಆರಂಭದ ದಿನವೇ ಪಠ್ಯಪುಸ್ತಕ ವಿತರಣೆಗೆ ಕ್ರಮಕೈಗೊಳ್ಳಲಾಗಿದೆ. ಶೇ 80ರಷ್ಟು ಪಠ್ಯ ಪುಸ್ತಕಗಳು ಪೂರೈಕೆಯಾಗಿದ್ದು, ತಾಲ್ಲೂಕು ಕೇಂದ್ರದಿಂದ ನೇರವಾಗಿ ಶಾಲೆಗಳಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಸಮವಸ್ತ್ರ ಇನ್ನೂ ಪೂರೈಕೆಯಾಗಿಲ್ಲ.

ಹ್ಯಾಪಿ ನ್ಯೂಸ್: ಶಾಲಾ ಮಕ್ಕಳ ಬ್ಯಾಗ್ ಭಾರ ಇಳಿಸಿದ ಸರ್ಕಾರ

ಶೈಕ್ಷಣಿಕ ವರ್ಷದ ವೇಳಾಪಟ್ಟಿ, ಶಾಲಾ ಅಭಿವೃದ್ಧಿ ಯೋಜನೆ, ಶಾಲಾ ಪಂಚಾಂಗವನ್ನು ಸಿದ್ಧಪಡಿಸಿಕೊಳ್ಳಲು, ಶಾಲಾಭಿವೃದ್ಧಿ ಹಾಗೂ ಮೇಲ್ವಿಚಾರಣಾ ಸಮಿತಿಯ ಸಭೆ ನಡೆಸಿ ಆರಂಭೋತ್ಸವದ ಸಿದ್ಧತೆ ಮಾಡಿಕೊಳ್ಳಲು, ದಾಖಲೆ ಸಜ್ಜುಗೊಳಿಸಲು, ಮೊದಲ ದಿನದಿಂದಲೇ ಚಟುವಟಿಕೆ ಆರಂಭಿಸಲು ಸೂಚಿಸಲಾಗಿದೆ ಎನ್ನುತ್ತಾರೆ ಕ್ಷೇತ್ರ ಶಿಕ್ಷಣಾಧಿಕಾರಿಗಳು.‌

ಇದರೊಂದಿಗೆ ದಾಖಲಾತಿ ಆಂದೋಲನ, ಸೇತುಬಂಧ ಕಾರ್ಯಕ್ರಮ ನಡೆಸಲಾಗುವುದು. ಸರ್ಕಾರಿ ಶಾಲೆಗಳಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವ ಕರಪತ್ರಗಳನ್ನು ಸಿದ್ಧಗೊಳಿಸಿ ಗ್ರಾಮಗಳಲ್ಲಿ ಪ್ರಚಾರ ಮಾಡಲು ಹಾಗೂ ಚುನಾಯಿತ ಪ್ರತಿನಿಧಿಗಳು, ಎಸ್‌ಡಿಎಂಸಿ ಸದಸ್ಯರು ಪಾಲ್ಗೊಳ್ಳುವಂತೆ ಆಹ್ವಾನಿಸಲು ಮುಖ್ಯ ಶಿಕ್ಷಕರು ಸಿದ್ಧರಾಗಿದ್ದಾರೆ.

ಮಕ್ಕಳಿಗೆ ಸಿಹಿ ಹಂಚಿ ಸ್ವಾಗತಿಸಲು ಇಲಾಖೆ ಆಯಾ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಸೂಚಿಸಿದೆ. ಅಡುಗೆ ಸಿಬ್ಬಂದಿ ಸಿಹಿ ಊಟ ತಯಾರಿಸಿ ಮಕ್ಕಳಿಗೆ ಬಡಿಸಲಿದ್ದಾರೆ. ಶಾಲೆಯತ್ತ ಮಕ್ಕಳನ್ನು ಆಕರ್ಷಿಸಲು ಪ್ರತಿವರ್ಷದಂತೆ ಈ ವರ್ಷವೂ ಇಲಾಖೆ ದಾಖಲಾತಿ ಆಂದೋಲನ ಹಮ್ಮಿಕೊಂಡಿದೆ. ಆಂದೋಲನದ ಭಾಗವಾಗಿ ಬೀದಿಗಳಲ್ಲಿ ವಾದ್ಯಗಳೊಂದಿಗೆ ಶಾಲೆಗೆ ಮಕ್ಕಳನ್ನು ಕರೆತರುವ ಘೋಷಣೆಗಳೊಂದಿಗೆ ಮೆರವಣಿಗೆ ನಡೆಯಲಿದೆ. ಶಿಕ್ಷಕರು, ಮಕ್ಕಳು ಇದರಲ್ಲಿ ಭಾಗಿಯಾಗಲಿದ್ದಾರೆ. ಜೂನ್‌ 8ರವರೆಗೆ ಆಂದೋಲನ ನಡೆಯಲಿದೆ.

ಬೆಂಗಳೂರಿನ 138 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಶೀಘ್ರ ಆರಂಭ

ಈ ಬಾರಿ ಶಾಲೆಗೆ ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ, ಶಾಲೆಯಲ್ಲಿನ ವ್ಯವಸ್ಥೆ, ದಾಖಲಾತಿ ಆಂದೋಲನದ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಅಲ್ಲದೇ ಪಠ್ಯಪುಸ್ತಕ, ಸಮವಸ್ತ್ರ ಸರಬರಾಜಿನ ಬಗ್ಗೆ, ಶೈಕ್ಷಣಿಕ ವರ್ಷದ ತಯಾರಿ ಹಾಗೂ ಸೌಕರ್ಯ, ಸ್ವಚ್ಛತಾ ಕಾರ್ಯಗಳ ಬಗ್ಗೆ ಮಾಹಿತಿ ಪಡೆಯುವಂತೆ ಇಲಾಖೆ ಸೂಚಿಸಿದ್ದು, ಡಿಡಿಪಿಐ ಮಿಂಚಿನ ಸಂಚಾರ ನಡೆಸಲಿದ್ದಾರೆ. ಜಿಲ್ಲೆಯಲ್ಲಿ ಇರುವ ಸಿಬಿಎಸ್ ಇ ಶಾಲೆಗಳು ಸೋಮವಾರದಿಂದಲೇ ಅಧಿಕೃತವಾಗಿ ಬಾಗಿಲು ತೆರೆದಿವೆ. ಮೇ 29ರಿಂದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳು ಪುನರಾರಂಭವಾಗುತ್ತಿವೆ.

ಉರುಳುತ್ತಿದ್ದ ಸರ್ಕಾರಿ ಶಾಲೆಯನ್ನು ಉಳಿಸಿದ ಅಪಾರ್ಟ್‌ಮೆಂಟ್ ನಿವಾಸಿಗಳು

ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಹಾಗೂ ಎಲ್.ಕೆಜಿ, ಯುಕೆಜಿ ತರಗತಿಗಳ ಪ್ರಾರಂಭ ಇನ್ನು ಈ ಬಾರಿಯ ರಾಜ್ಯದ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ಖಾಸಗಿ ಶಾಲೆಗಳಂತೆ ಗುಣಮಟ್ಟದ ಶಿಕ್ಷಣ ನೀಡಲು ತಯಾರಿ ನಡೆಸಲಾಗಿದೆ. ಜಿಲ್ಲೆಯಲ್ಲಿ 12 ಶಾಲೆಗಳಲ್ಲಿ ಎಲ್ ಕೆ ಜಿ, ಯುಕೆಜಿ, 33 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭವಾಗಲಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The summer vacation is over and it is a time for kids to face school.as the academic year will begin on May 29th, The Department of Education has prepared to welcome children
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more