Get Updates
Get notified of breaking news, exclusive insights, and must-see stories!

ರಾಜ್ಯದ ಈ ಮೂರು ನಗರಗಳಲ್ಲಿ ಗಾಳಿ ಗುಣಮಟ್ಟ ಕುಸಿತ: ಗ್ರೀನ್ ಪೀಸ್ ಹೇಳಿದ್ದೇನು?

ಮೈಸೂರು, ಸೆಪ್ಟೆಂಬರ್‌ 06: ಚಾಮುಂಡಿಬೆಟ್ಟ, ಬಂಡೀಪುರ, ನಾಗರಹೊಳೆ ಮತ್ತಿತರ ಸಮೃದ್ಧ ಅರಣ್ಯ ಪ್ರದೇಶಗಳಿದ್ದರೂ ಮೈಸೂರು ನಗರದ ಗಾಳಿಯ ಗುಣಮಟ್ಟ ತೀವ್ರ ಕುಸಿತ ಕಂಡಿದೆ ಎಂದರೆ ಅಚ್ಚರಿಯಾಗಬಹುದು ಆದರೆ ಗ್ರೀನ್ ಪೀಸ್ ಸಂಶೋಧನಾ ವರದಿಯಲ್ಲಿ ಈ ವಿಚಾರ ಬಹಿರಂಗಗೊಂಡಿದೆ. ಚಾಮುಂಡಿಬೆಟ್ಟದಂತಹ ಹಸಿರು ಅರಣ್ಯ ಪ್ರದೇಶವನ್ನು ಹೊಂದಿ ಆಕ್ಸಿಜನ್ ಕಣಜ ಎಂದು ಕರೆಯಲ್ಪಡುವ ಪ್ರದೇಶದಲ್ಲಿಯೇ ಗಾಳಿಯ ಗುಣಮಟ್ಟ ಕ್ಷೀಣಿಸಿದೆ ಎಂದರೆ ಬೇರೆ ನಗರಗಳ ಗತಿ ಏನು ಎಂಬ ಪ್ರಶ್ನೆ ಮೂಡದಿರದು.

ಈ ವರದಿ ಪ್ರಕಾರ ಮೈಸೂರು ಮಾತ್ರವಲ್ಲದೆ, ಬೆಂಗಳೂರು, ಮಂಗಳೂರಿನಲ್ಲಿ ನಾವು ಉಸಿರಾಡುವ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಮಾಲಿನ್ಯದ ಪ್ರಮಾಣ ಅಪಾಯಕಾರಿ ಮಟ್ಟಕ್ಕೆ ತಲುಪಿದೆ. ದಕ್ಷಿಣ ಭಾರತದ 10 ಪ್ರಮುಖ ನಗರಗಳ ಗಾಳಿಯಲ್ಲಿ ಮಾಲಿನ್ಯಕಾರಕ ಕಣಗಳಾದ ಪಿಎಂ 2.5 (ಸೂಕ್ಷ್ಮ) ಮತ್ತು ಪಿಎಂ 10 (ಅತಿಸೂಕ್ಷ್ಮ)ಗಳ ಪ್ರಮಾಣವು ಡಬ್ಲ್ಯುಎಚ್ಒ ಮಾರ್ಗಸೂಚಿ ನಿಗದಿಪಡಿಸಿದ ಸರಾಸರಿ ಮಟ್ಟಗಳನ್ನು ಮೀರಿದ್ದು ಇದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಗ್ರೀನ್ಪೀಸ್ ಇಂಡಿಯಾದ ವರದಿ ಹೇಳಿದೆ.

Deterioration Of Air Quality In These Three Cities Of The State

ಬೆಂಗಳೂರು, ಮಂಗಳೂರು, ಮೈಸೂರು, ಹೈದರಾಬಾದ್, ಚೆನ್ನೈ, ವಿಶಾಖಪಟ್ಟಣ, ಕೊಚ್ಚಿ, ಅಮರಾವತಿ, ವಿಜಯವಾಡ, ಮತ್ತು ಪುದುಚೇರಿ ನಗರಗಳಲ್ಲಿ ಗಾಳಿಯ ಗುಣಮಟ್ಟವನ್ನು ವಿಶ್ಲೇಷಿಸಿದ್ದು, ಈ ಹತ್ತು ನಗರಗಳ ಪೈಕಿ ವಿಶಾಖಪಟ್ಟಣಂನಲ್ಲಿ ಗಾಳಿಯ ಗುಣಮಟ್ಟ ತೀವ್ರ ಕುಸಿತ ಕಂಡಿದೆ.

ಇಲ್ಲಿನ ಗಾಳಿಯಲ್ಲಿ ಪಿಎಂ 2.5 ಕಣಗಳ ಪ್ರಮಾಣ ಡಬ್ಲ್ಯುಎಚ್ಒ ಮಾರ್ಗಸೂಚಿ ನಿಗದಿಪಡಿಸಿದ ಮಾನದಂಡಕ್ಕಿಂತ 10 ಪಟ್ಟು ಮತ್ತು ಪಿಎಂ 10 ಕಣಗಳ ಪ್ರಮಾಣ 9 ಪಟ್ಟು ಹೆಚ್ಚಿರುವುದು ದೃಢ ಪಟ್ಟಿದೆ. ಅಷ್ಟೇಅಲ್ಲದೆ ಇದು ಗಾಳಿಯ ಗುಣಮಟ್ಟ ಮಾಪಕ ನ್ಯಾಶನಲ್ ಎಂಬಿಯಂಟ್ ಏರ್ ಕ್ವಾಲಿಟಿ ಸ್ಟಾಂಡರ್ಡ್ (ಎನ್ಎಎಕ್ಯೂಎಸ್ /NAAQS) ನಿಗದಿಪಡಿಸಿದ ಮಿತಿಗಳನ್ನೂ ಮೀರಿದೆ ಎಂದು ಅಧ್ಯಯನವು ಹೇಳಿದೆ.

ಗಾಳಿಯಲ್ಲಿ ಮಾಲಿನ್ಯಕಾರಕ ಕಣಗಳು ಹೆಚ್ಚಳ

ಡಬ್ಲ್ಯುಎಚ್ಒ ಮಾರ್ಗಸೂಚಿಗಳೊಂದಿಗೆ ಹೋಲಿಸಿದಾಗ, ಗಾಳಿಯಲ್ಲಿ ಪಿಎಂ 2.5 ಕಣಗಳ ಮಟ್ಟವು ಮಂಗಳೂರು, ಹೈದರಾಬಾದ್, ವಿಜಯವಾಡ, ಕೊಚ್ಚಿ, ಅಮರಾವತಿ ಮತ್ತು ಚೆನ್ನೈನಲ್ಲಿ 6 ರಿಂದ 7 ಪಟ್ಟು ಹೆಚ್ಚಾಗಿದೆ. ಅದೇ ರೀತಿ, ಪಿಎಂ 10 ಕಣಗಳ ಮಟ್ಟವು ಬೆಂಗಳೂರು, ಮೈಸೂರು ಮತ್ತು ಪುದುಚೇರಿ ನಗರಗಳಲ್ಲಿ 4 ರಿಂದ 5 ಪಟ್ಟು ಹೆಚ್ಚಾಗಿದೆಯಂತೆ. ಈ ಸಂಶೋಧನಾ ತಂಡದ ನೇತೃತ್ವವನ್ನು ವಹಿಸಿದ್ದ ಸಂಶೋಧಕಿ, ಆಕಾಂಕ್ಷಾ ಸಿಂಗ್ ಮಾಹಿತಿ ನೀಡಿ ಶುದ್ಧ ಗಾಳಿ ನಮ್ಮ ಆರೋಗ್ಯದ ಮೂಲಭೂತ ಅಗತ್ಯಗಳಲ್ಲಿ ಒಂದು.

Deterioration Of Air Quality In These Three Cities Of The State

ಆದರೆ ಪ್ರಸ್ತುತ ವರದಿಯು ದೇಶದ ಎಲ್ಲಾ ಪ್ರಮುಖ ನಗರಗಳಲ್ಲಿನ ಮಾಲಿನ್ಯ ಕಾರಕ ಪಿಎಂ (ಪರ್ಟಿಕ್ಯುಲೇಟ್ ಮ್ಯಾಟರ್ಸ್) ಕಣಗಳ ಮಟ್ಟವು ಡಬ್ಲ್ಯುಎಚ್ಒ ನಿಂದ ಪರಿಷ್ಕೃತ ನಿಗದಿತ ಮಾರ್ಗಸೂಚಿಗಳನ್ನು ಮೀರಿದೆ ಎಂಬುದನ್ನು ಸ್ಪಷ್ಟಪಡಿಸುತ್ತಿದೆ. ಪ್ರಸ್ತುತ ಅಧ್ಯಯನವು ಗಾಳಿಯ ಗುಣಮಟ್ಟಕ್ಕೆ ಸಂಬಂಧಿಸಿದಂತೆ ನ್ಯಾಶನಲ್ ಆಂಬಿಯೆಂಟ್ ಏರ್ ಕ್ವಾಲಿಟಿ ಸ್ಟ್ಯಾಂಡರ್ಸ್ (ಎನ್ಎಎಕ್ಯೂಎಸ್) ಮಾರ್ಗಸೂಚಿಯಲ್ಲಿ ತಿಳಿಸಲಾದ ಮಾನದಂಡಗಳನ್ನು ಮೀರಿರುವ ನಗರಗಳ ಮೇಲೆ ಕೇಂದ್ರೀಕೃತವಾಗಿದೆ.

ಆದರೆ, ಈಗಾಗಲೇ ನಿಗದಿಪಡಿಸಲಾದ ಮಾನದಂಡಗಳನ್ನು ಅನುಸರಿಸುತ್ತಿರುವ ನಗರಗಳನ್ನೂ ಈ ಅಧ್ಯಯನಕ್ಕೆ ಒಳಪಡಿಸುವುದು ಅಗತ್ಯವಾಗಿದೆ. ಈ ನಗರಗಳಲ್ಲಿನ ಗಾಳಿಯ ಗುಣಮಟ್ಟವನ್ನು ಅದು ನಿಗದಿಪಡಿಸಿದ ಮಾನದಂಡಗಳನ್ನು ಮೀರುವ ಮುಂಚಿತವಾಗಿಯೇ ಕಾಪಾಡಿಕೊಳ್ಳುವುದು ಅಗತ್ಯ ಎಂದು ಅವರು ಎಚ್ಚರಿಸಿದ್ದಾರೆ.

ವೈಜ್ಞಾನಿಕ ಮಾರ್ಗಸೂಚಿ ಅನುಸರಣೆ ಅಗತ್ಯ

ಗ್ರೀನ್ಪೀಸ್ ಇಂಡಿಯಾದ ಪ್ರಚಾರಕಿ ಸೆಲೋಮಿ ಗಾರ್ನಾಯಕ್ ಅವರು ಗಾಳಿಯ ಗುಣಮಟ್ಟದ ಕುಸಿತದ ಕುರಿತಂತೆ ಮಾಹಿತಿ ನೀಡುತ್ತಾ ಈ ಸಮಸ್ಯೆಗಳ ಪರಿಹಾರಕ್ಕಾಗಿ, ಇತ್ತೀಚೆಗೆ ಪರಿಷ್ಕರಿಸಲಾದ ಡಬ್ಲ್ಯುಎಚ್ಒ ನ ವೈಜ್ಞಾನಿಕ ಮಾರ್ಗಸೂಚಿಗಳನ್ನು ಅನುಸರಿಸಲು ನ್ಯಾಶನಲ್ ಆಂಬಿಯೆಂಟ್ ಏರ್ ಕ್ವಾಲಿಟಿ ಸ್ಟ್ಯಾಂಡರ್ಸ್ (ಎನ್ಎಎಕ್ಯೂಎಸ್) (NAAQS)ಮುಂದಾಗಿದೆ. ಹೊಸ ಮಾರ್ಗಸೂಚಿಯಲ್ಲಿ ಗಾಳಿಯ ಗುಣಮಟ್ಟ ಆರೋಗ್ಯದ ಮೇಲೆ ಬೀರಬಹುದಾದ ಪರಿಣಾಮಗಳನ್ನೂ ಗಮನದಲ್ಲಿರಿಸಿಕೊಂಡು ಅದಕ್ಕೆ ಸಂಬಂಧಿಸಿದ ಅಂಶಗಳನ್ನು ಅಳವಡಿಸಿಕೊಳ್ಳಲು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಯನ್ನು ಗ್ರೀನ್ಪೀಸ್ ಇಂಡಿಯಾ ಆಗ್ರಹಿಸುತ್ತಿದೆ ಎಂದಿದ್ದಾರೆ.

Deterioration Of Air Quality In These Three Cities Of The State

ಗಾಳಿಯ ಗುಣಮಟ್ಟ ಕುಸಿತಕ್ಕೆ ವಾಹನಗಳು ಉಗುಳುವ ಹೊಗೆ, ರಸ್ತೆಯ ಧೂಳು, ಹೊಸ ಕಟ್ಟಡಗಳ ನಿರ್ಮಾಣ ಮತ್ತು ಹಳೆ ಕಟ್ಟಡಗಳ ಕೆಡವಿಕೆ ಮುಂತಾದ ಚಟುವಟಿಕೆಗಳು, ಕೈಗಾರಿಕಾ ಪ್ರಕ್ರಿಯೆಗಳು ಮತ್ತು ಕಟ್ಟಿಗೆಗಳನ್ನು ಉರಿಸುವಿಕೆ ಇವೇ ಮೊದಲಾದವುಗಳಿಂದ ಉಂಟಾಗುವ ಹೊರಸೂಸುವಿಕೆಯು ವಾತಾವರಣದಲ್ಲಿ ಪರ್ಟಿಕ್ಯುಲರ್ ಮ್ಯಾಟರ್ (ಪಿಎಂ) ಮಟ್ಟಗಳ ಹೆಚ್ಚುತ್ತಿದೆ. ಇದರ ತಡೆಗೆ ಪರಿಸರ ಸ್ನೇಹಿ ಕಾರ್ಯಕ್ರಮಗಳು ನಡೆಯಬೇಕಿದೆ. ಅಭಿವೃದ್ಧಿ ಹೆಸರಿನಲ್ಲಿ ಪರಿಸರಕ್ಕೆ ಮಾರಕವಾಗುವ ಕಾರ್ಯಗಳಿಗೆ ತಡೆಯೊಡ್ಡಬೇಕಿದೆ. ಜತೆಗೆ ಮರಗಿಡಗಳನ್ನು ನೆಡುವ ಮೂಲಕ ಹಸಿರೀಕರಣಕ್ಕೆ ಒತ್ತು ನೀಡಬೇಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+