ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೂನ್ 25 ರಿಂದ 4 ದಿನಗಳ ಕಾಲ ಮೈಸೂರು ಮಾರ್ಕೆಟ್ ಬಂದ್

|
Google Oneindia Kannada News

ಮೈಸೂರು, ಜೂನ್ 24: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ದೇವರಾಜ ಮಾರುಕಟ್ಟೆ, ಸಂತೆ ಪೇಟೆ, ಶಿವರಾಂಪೇಟೆ, ಮನ್ನಾರ್ಸ್ ಮಾರ್ಕೆಟ್, ಬೋಟಿ ಬಜಾರ್ ಬಂದ್ ಆಗಲಿವೆ.

ಮೈಸೂರು ನಗರದ ಪ್ರಮುಖ ವಾಣಿಜ್ಯ ಕೇಂದ್ರಗಳನ್ನು ಒಳಗೊಂಡ ಪ್ರದೇಶಗಳನ್ನು ಜೂನ್ 25 ರಿಂದ ನಾಲ್ಕು ದಿನಗಳ ಕಾಲ ಬಂದ್ ಮಾಡಲಾಗುತ್ತದೆ. ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಮೈಸೂರು ಜಿಲ್ಲಾಡಳಿತ ಈ ಆದೇಶ ಹೊರಡಿಸಿದೆ.

ಮೈಸೂರಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಕೊರೊನಾ ವೈರಸ್ ಸೋಂಕುಮೈಸೂರಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಕೊರೊನಾ ವೈರಸ್ ಸೋಂಕು

5 ಪ್ರದೇಶಗಳಲ್ಲಿ ಸ್ವಚ್ಛಗೊಳಿಸುವ ಸಲುವಾಗಿ ಹಾಗೂ ಸ್ಯಾನಿಟೈಜರ್ ಸಿಂಪಡಣೆ, ಥರ್ಮಲ್ ಸ್ಕ್ರೀನಿಂಗ್, ಇತರೆ ಮುನ್ನೆಚ್ಚರಿಕಾ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ.

Mysuru Market Close For 4 Days From 25th June

ನಗರದ ಹೃದಯ ಭಾಗದಲ್ಲಿ ಕೊರೊನಾ ವೈರಸ್ ಸೊಂಕು ಕಂಡು ಬಂದಿರುವ ಹಿನ್ನೆಲೆ ಆದೇಶ ಹೊರಡಿಸಲಾಗಿದ್ದು, ವ್ಯಾಪಾರಸ್ಥರು, ಸಾರ್ವಜನಿಕರು, ವಹಿವಾಟುದಾರರು ಕೊರೊನಾ ವೈರಸ್ ನಿಯಮ ಪಾಲನೆ ಮಾಡುವಂತೆ ಮನವಿ ಮಾಡಲಾಗಿದೆ.

ಕೊರೊನಾ ವೈರಸ್ ನ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲನೆ ಮಾಡದಿದ್ದಲ್ಲಿ ಅಂತಹ ಉದ್ದಿಮೆಗಳನ್ನು ಮುಚ್ಚಲಾಗುತ್ತದೆ ಎಂದು ಮೈಸೂರು ಜಿಲ್ಲಾಡಳಿತ ಕಠಿಣ ಎಚ್ಚರಿಕೆ ನೀಡಿದೆ.

English summary
The areas covering the major commercial centers of Mysore will be closed for four days from June 25. This order was issued by the Mysore District Administration as a precautionary measure to prevent the spread of coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X