ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ಚಾಮುಂಡಿ ಬೆಟ್ಟಕ್ಕೆ 3 ದಿನ ಭಕ್ತರಿಗೆ ಪ್ರವೇಶವಿಲ್ಲ

|
Google Oneindia Kannada News

ಮೈಸೂರು, ಅಕ್ಟೋಬರ್ 05; ಮಹಾಲಯ ಅಮಾವಾಸ್ಯೆ ಅಂಗವಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳುವ ಭಕ್ತರಿಗೆ ನಿರಾಸೆ ಕಾದಿದೆ. ಅಕ್ಟೋಬರ್ 5 ರಿಂದ 7 ತನಕ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಿ ಮೈಸೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಮಂಗಳವಾರ, ಬುಧವಾರ ಮತ್ತು ಗುರುವಾರ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಅಕ್ಟೋಬರ್ 7ರ ಗುರುವಾರ 2021ನೇ ಸಾಲಿನ ದಸರಾಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಲನೆ ದೊರೆಯಲಿದೆ.

ವಿಶೇಷ ವರದಿ: ಆಷಾಢದ ಮಳೆಯಲ್ಲಿ ಮಿಂದೆದ್ದ ಚಾಮುಂಡಿ ಬೆಟ್ಟ!ವಿಶೇಷ ವರದಿ: ಆಷಾಢದ ಮಳೆಯಲ್ಲಿ ಮಿಂದೆದ್ದ ಚಾಮುಂಡಿ ಬೆಟ್ಟ!

Devotees Entry Banned To Chamundi Hill From October 5 To 7

ಕೋವಿಡ್ ಮಾರ್ಗಸೂಚಿಗಳ ಅನ್ವಯ ಹೆಚ್ಚು ಜನರು ಸೇರದಂತೆ ತಡೆಯಲು ಮೈಸೂರು ಜಿಲ್ಲಾಧಿಕಾರಿ ಗೌತಮ್ ಬುಗಾದಿ ಭಕ್ತರ ಪ್ರವೇಶವನ್ನು ನಿಷೇಧಿಸಿ ಆದೇಶವನ್ನು ಹೊರಡಿಸಿದ್ದಾರೆ. ಅಕ್ಟೋಬರ್ ತಿಂಗಳಿನಲ್ಲಿ ಹಲವು ದಿನಗಳು ಅರಮನೆಗೆ ಸಹ ಜನರ ಭೇಟಿ ನಿರ್ಬಂಧಿಸಲಾಗಿದೆ.

ಮೈಸೂರು ದಸರಾ ವಿಶೇಷ; ದಸರಾ 'ಪೊಲೀಸ್ ಬ್ಯಾಂಡ್’ಗೆ ಹೊಸ ರೂಪ ಮೈಸೂರು ದಸರಾ ವಿಶೇಷ; ದಸರಾ 'ಪೊಲೀಸ್ ಬ್ಯಾಂಡ್’ಗೆ ಹೊಸ ರೂಪ

ದಸರಾ ಉದ್ಘಾಟನೆ; ಅಕ್ಟೋಬರ್ 7ರಂದು ಬೆಳಗ್ಗೆ 8.15ರಿಂದ 8.45ರ ಶುಭ ಮುಹೂರ್ತದಲ್ಲಿ ಚಾಮುಂಡಿ ಬೆಟ್ಟದಲ್ಲಿ 2021ನೇ ಸಾಲಿನ ದಸರಾವನ್ನು ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಉದ್ಘಾಟನೆ ಮಾಡಲಿದ್ದಾರೆ.

ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಎಸ್. ಎಂ. ಕೃಷ್ಣ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಎಸ್. ಎಂ. ಕೃಷ್ಣ

ದಸರಾ ಆರಂಭಗೊಂಡ ಬಳಿಕ ಮೈಸೂರು ಅರಮನೆ ಆವರಣದಲ್ಲಿ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಯುವ ದಸರಾ, ದಸರಾ ಆಹಾರ ಮೇಳ ಸೇರಿದಂತೆ ವಿವಿಧ ಕಾರ್ಯಕ್ರಮಗಳು ರದ್ದಾಗಿವೆ. ಅಕ್ಟೋಬರ್ 15ರಂದು ಜಂಬೂ ಸವಾರಿ ನಡೆಯಲಿದೆ.

ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಅಕ್ಟೋಬರ್ 15ರಂದು ನಡೆಯಲಿದೆ. ಸಂಜೆ 4.36 ರಿಂದ 4.44ರ ತನಕ ನಂದಿ ಧ್ವಜ ಪೂಜೆ ನಡೆಯಲಿದೆ. ಬಳಿಕ ಸಂಜೆ 5 ರಿಂದ 5.36ರ ತನಕ ಜಂಬೂ ಸವಾರಿ ಅರಮನೆ ಆವರಣದಲ್ಲಿ ಮಾತ್ರ ನಡೆಯಲಿದೆ.

ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿ. ವಿಜಯದಶಮಿಯ ದಿನ ಚಿನ್ನದ ಅಂಬಾರಿಯನ್ನು 56 ವರ್ಷದ ಅಭಿಮನ್ಯು ಆನೆ ಹೊರಲಿದೆ. ವಿಕ್ರಮ, ಅಶ್ವತ್ಥಾಮ, ಲಕ್ಷ್ಮೀ, ಚೈತ್ರಾ, ಕಾವೇರಿ, ಧನಂಜಯ, ಗೋಪಾಲಸ್ವಾಮಿ ಆನೆಗಳು ಈ ಬಾರಿಯ ದಸರಾದಲ್ಲಿ ಪಾಲ್ಗೊಳ್ಳುತ್ತಿವೆ.

ಧ್ವನಿ ಮತ್ತು ಬೆಳಕು ಕಾರ್ಯಕ್ರಮ ರದ್ದು; ಮೈಸೂರು ದಸರಾ ಮಹೋತ್ಸವದ ಪೂರ್ವಭಾವಿ ಕಾಮಗಾರಿಗಳು ಪ್ರಗತಿಯಲ್ಲಿರುವುದರಿಂದ ಹಾಗೂ ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಹಿನ್ನೆಲೆಯಲ್ಲಿ ಅಕ್ಟೋಬರ್ 4 ರಿಂದ 21ರವರೆಗೆ ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.

ಆನೆಗಳ ತಾಲೀಮು; ಮೈಸೂರು ಅರಮನೆಯಲ್ಲಿ 2021ನೇ ಸಾಲಿನ ದಸರಾ ಮಹೋತ್ಸವದ ಸಿದ್ಧತೆಗಳು ನಡೆಯುತ್ತಿವೆ. ಮಂಗಳವಾರ ಮೈಸೂರಿನಲ್ಲಿ ಫಿರಂಗಿ ಗಾಡಿಗಳಿಂದ ಕುಶಾಲತೋಪುಗಳನ್ನು ಸಿಡಿಸುವ 2ನೇ ಹಂತದ ತಾಲೀಮು ನಡೆಯಿತು. ಗಜಪಡೆ ಹಾಗೂ ಅಶ್ವಗಳು ಬೆದರದಂತೆ ಫಿರಂಗಿಗಳ ಮೂಲಕ ಕುಶಾಲತೋಪುಗಳನ್ನು ಸಿಡಿಸಲಾಯಿತು.

ಕಳೆದ ಸೆಪ್ಟೆಂಬರ್ 30ರಂದು ಮೊದಲ ತಾಲೀಮು ನಡೆಸಿದ್ದ ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಗಳು. ಇಂದು ಕೂಡ ಅರಮನೆ ಹೊರ ಆವರಣದಲ್ಲಿರುವ ಕೋಟೆ ಮಾರಮ್ಮನವರ ದೇಗುಲದ ಬಳಿ ಕುಶಾಲತೋಪುಗಳನ್ನು ಸಿಡಿಸುವ ತಾಲೀಮು ನಡೆಸಿದರು.

7 ಫಿರಂಗಿ ಗಾಡಿಗಳಿಂದ‌ 21 ಕುಶಾಲತೋಪುಗಳನ್ನು ಸಿಎಆರ್ ಸಿಬ್ಬಂದಿಗಳು ಸಿಡಿಸಿದರು. ಕುಶಾಲತೋಪುಗಳನ್ನು ಸಿಡಿಸುವ 2ನೇ ಹಂತದ ಇಂದಿನ ತಾಲೀಮು ಯಶಸ್ವಿಯಾಗಿದೆ. ಜಂಬೂ ಸವಾರಿ ಮೆರವಣಿಗೆಗೂ ಮುನ್ನಾ ಒಟ್ಟು ಮೂರು ಬಾರಿ ಕುಶಾಲತೋಪುಗಳನ್ನು ಸಿಡಿಸುವ ತಾಲೀಮು ನಡೆಯುತ್ತದೆ.

ಮೈಸೂರು ದಸರಾ ಹಿನ್ನಲೆಯಲ್ಲಿ ಮೈಸೂರು ನಗರ ಪೊಲೀಸರು ನಗರದಲ್ಲಿ ಭದ್ರತೆ ಹೆಚ್ಚಿಸಿದ್ದಾರೆ. ಅನುಮಾಸ್ಪದ ವ್ಯಕ್ತಿಗಳ ಸಂಚಾರ ಕಂಡು ಬಂದರೆ ಮಾಹಿತಿ ನೀಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

English summary
The Mysuru district administration has banned the entry of devotees to Chamundi Hill between October 5 and October 7, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X