ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೊಸ ವರ್ಷದ ಮೊದಲ ದಿನ ನಾಡದೇವತೆ ದರ್ಶನ ಭಾಗ್ಯವಿಲ್ಲ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಡಿಸೆಂಬರ್ 25: 2021ರ ಮೊದಲ ದಿನ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆಯುವ ಭಕ್ತರ ಬಯಕೆ ಈಡೇರುವುದಿಲ್ಲ. ಹೊಸ ವರ್ಷ ಸಂದರ್ಭದಲ್ಲಿ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶವನ್ನು ಮೈಸೂರು ಜಿಲ್ಲಾಡಳಿತ ನಿಷೇಧಿಸಿದೆ.

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಹೊಸ ವರ್ಷದ ಮೊದಲ ದಿನ ಅಂದರೆ ಜನವರಿ 1ರಂದು ಸಾರ್ವಜನಿಕರು, ಭಕ್ತರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿವಂತಿಲ್ಲ.

ಮೈಸೂರು: ಕೊರೊನಾ ಕಾರಣದಿಂದ ಸುತ್ತೂರು ಜಾತ್ರೆ ರದ್ದುಮೈಸೂರು: ಕೊರೊನಾ ಕಾರಣದಿಂದ ಸುತ್ತೂರು ಜಾತ್ರೆ ರದ್ದು

Devotees Entry To Chamundi Hills Banned On January 1

ಚಾಮುಂಡಿಬೆಟ್ಟಕ್ಕೆ ಮೆಟ್ಟಿಲುಗಳ ಮೂಲಕವೂ ಪ್ರವೇಶ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಮೈಸೂರು ಜಿಲ್ಲೆಯಲ್ಲಿ ಈ ಬಾರಿ ಹೊಸ ವರ್ಷಾಚರಣೆ ಇಲ್ಲಮೈಸೂರು ಜಿಲ್ಲೆಯಲ್ಲಿ ಈ ಬಾರಿ ಹೊಸ ವರ್ಷಾಚರಣೆ ಇಲ್ಲ

ರೂಪಾಂತರ ಕೋವಿಡ್ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ಹೆಚ್ಚು ಜನರು ಸೇರದಂತೆ ಸರ್ಕಾರ ಸೂಚನೆ ನೀಡಿದೆ. ಆದ್ದರಿಂದ, ಜಾತ್ರೆ, ಉತ್ಸವಗಳನ್ನು ರದ್ದುಗೊಳಿಸಲಾಗುತ್ತಿದೆ. ಹೊಸ ವರ್ಷದ ಸಂದರ್ಭದಲ್ಲಿ ಹೆಚ್ಚು ಜನರು ಭೇಟಿ ನೀಡುವುದರಿಂದ ಭಕ್ತರ ಪ್ರವೇಶ ನಿಷೇಧಿಸಲಾಗಿದೆ.

ಕ್ರಿಸ್ಮಸ್ ಸಂಭ್ರಮ; ಮೈಸೂರು ಚರ್ಚ್‌ನಲ್ಲಿ ಸಾಮೂಹಿಕ ಪ್ರಾರ್ಥನೆ ಕ್ರಿಸ್ಮಸ್ ಸಂಭ್ರಮ; ಮೈಸೂರು ಚರ್ಚ್‌ನಲ್ಲಿ ಸಾಮೂಹಿಕ ಪ್ರಾರ್ಥನೆ

ಗುರುವಾರದ ಮಾಹಿತಿಯಂತೆ ಮೈಸೂರು ಜಿಲ್ಲೆಯಲ್ಲಿ 88 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 52045. ಸಕ್ರಿಯ ಪ್ರಕರಣಗಳ ಸಂಖ್ಯೆ 492.

ಕೋವಿಡ್ ಪರಿಸ್ಥಿತಿಯ ಹಿನ್ನಲೆಯಲ್ಲಿ ಸುತ್ತೂರಿನಲ್ಲಿ ನಡೆಯಬೇಕಿದ್ದ ಜಾತ್ರೆಯನ್ನು ಸಹ ರದ್ದು ಮಾಡಲಾಗಿದೆ. 2021ರ ಫೆಬ್ರವರಿ 8 ರಿಂದ 13ರ ತನಕ ಜಾತ್ರೆ ನಡೆಯಬೇಕಿತ್ತು.

English summary
Mysuru deputy commissioner Rohini Sindhuri ordered to his ban devotees entry to Chamundi hills on January 1, 2021. Entry banned as a part of precautionary measures against spread of COVID-19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X