Dhawan Rakesh: ಧವನ್ ರಾಕೇಶ್ ಭವಿಷ್ಯದ ನಾಯಕ: ಸಮಾವೇಶದಲ್ಲಿ ಉತ್ತರಾಧಿಕಾರಿ ಘೋಷಿಸಿದ ಸಿದ್ದರಾಮಯ್ಯ
ಮೈಸೂರು, ಏಪ್ರಿಲ್ 19: ರಾಜ್ಯದ ಹೈವೋಲ್ಟೇಜ್ ಕ್ಷೇತ್ರವಾಗಿ ವರುಣ ಮಾರ್ಪಟ್ಟಿದೆ. ದಿನದಿಂದ ದಿನಕ್ಕೆ ಚುನಾವಣಾ ರಂಗು ಕಾವೇರುತ್ತಿದೆ. ಇತ್ತ ಸಮಾವೇಶದಲ್ಲಿ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ ಮುನ್ನ ಭವಿಷ್ಯದ ನಾಯಕ ಧವನ್ ರಾಕೇಶ್ ಎಂದು ಘೋಷಿಸಿ ಗಮನ ಸೆಳೆದಿದ್ದಾರೆ. ಆ ಮೂಲಕ ಧವನ್ ಮುಂದಿನ ಉತ್ತರಾಧಿಕಾರಿ ಎಂಬ ಸಂದೇಶ ಸಾರಿದ್ದಾರೆ.
ನಂಜನಗೂಡಿನ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ವರುಣ ಕ್ಷೇತ್ರದ ಭವಿಷ್ಯದ ನಾಯಕ ಎಂದರೆ ಅದು ನನ್ನ ಮೊಮ್ಮಗ ಧವನ್ ರಾಕೇಶ್. ಈ ಬಾರಿಯ ಚುನಾವಣೆ ನನ್ನ ಕೊನೆಯ ಚುನಾವಣೆ. ಹಾಗಾಗಿ ಮುಂದಿನ ದಿನಗಳಲ್ಲಿ ಡಾ.ಯತೀಂದ್ರ ರಾಜಕೀಯ ಮುಂದುವರಿಸಿಕೊಂಡು ಹೋಗುತ್ತಾನೆ. ನಂತರ ಮೊಮ್ಮಗ ಧವನ್ ರಾಜಕೀಯಕ್ಕೆ ಬರುತ್ತಾರೆ. ಅವನಿಗೀಗ 17 ವರ್ಷ, ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಮುಂದಿನ ದಿನಗಳಲ್ಲಿ ನಿಮ್ಮ ಸೇವೆಗೆ ಬರುತ್ತಾನೆ. ಅದನ್ನು ಜನ ಸ್ವೀಕರಿಸಬೇಕು ಎಂದು ಹೇಳಿದರು.

ಮಗ ರಾಕೇಶ್ ಅಕಾಲಿಕ ಮರಣಕ್ಕೆ ತುತ್ತಾದನು. ಅವನು ಚಾಮುಂಡೇಶ್ವರಿ ಹಾಗೂ ವರುಣ ಕ್ಷೇತ್ರ ಎರಡನ್ನೂ ಉಸ್ತುವಾರಿ ನೋಡಿಕೊಳ್ಳುತ್ತಿದ್ದ. ಜನ ಈಗಲೂ ರಾಕೇಶ್ ಮೇಲೆ ಪ್ರೀತಿ, ಅಭಿಮಾನ ಇಟ್ಡಿದ್ದಾರೆ. ಅಲ್ಲದೆ, ಅವನ ಮಗ ಧವನ‌್ ರಾಕೇಶ್ ಕಂಡರೂ ಅಪಾರ ಪ್ರೀತಿ ತೋರುತ್ತಾರೆ. ಹಾಗಾಗಿ ಮುಂದೆ ಭವಿಷ್ಯದ ನಾಯಕನಾಗಿ ಇರುತ್ತಾನೆ ಎಂದು ಘೋಷಿಸಿದರು.
ಇದು ನನ್ನ ಕೊನೆ ಚುನಾವಣೆ
ನಿಮ್ಮ ಉತ್ಸಾಹ ನೋಡಿದರೆ ಏನು ಮಾತನಾಡಬೇಕು ಎಂದು ಗೊತ್ತಾಗುತ್ತಿಲ್ಲ. ಇದು ನನ್ನ ಕೊನೆಯ ಚುನಾವಣೆ. ಮುಂದೆ ಡಾ ಯತೀಂದ್ರ ಇದ್ದಾನೆ, ಧವನ್ ಇದ್ದಾನೆ. ನಿಮ್ಮೆಲ್ಲರ ಆಶೀರ್ವಾದ ಬಯಸಿ ಸ್ಪರ್ಧೆ ಮಾಡುತ್ತಿದ್ದೇನೆ. ಬಿಜೆಪಿಯವರು ವರುಣ ಕ್ಷೇತ್ರದಲ್ಲಿ ಹುಟ್ಟಿ ಬೆಳೆದವರಿಗೆ ಅವಕಾಶ ನೀಡಿಲ್ಲ. ಬೆಂಗಳೂರಿನಿಂದ ಸೋಮಣ್ಣ ಅವರನ್ನು ಕರೆತಂದು ನಿಲ್ಲಿಸಿದ್ದಾರೆ. ಬಿಜೆಪಿ- ಜೆಡಿಎಸ್‌ನವರು ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಆದ್ದರಿಂದಲೇ ಜೆಡಿಎಸ್‌ನವರು ಡಾ ಭಾರತಿ ಶಂಕರ್ ಅವರನ್ನು ಕರೆತಂದು ನಿಲ್ಲಿಸಿದ್ದಾರೆ. ಬಿಜೆಪಿ, ಜೆಡಿಎಸ್ ಅಭ್ಯರ್ಥಿ ಸೋಲಿಸಿ ದೊಡ್ಡ ಅಂತರದಲ್ಲಿ ನೀವು ಗೆಲ್ಲಿಸುತ್ತೀರಿ ಎನ್ನುವ ವಿಶ್ವಾಸ ಇದೆ ಎಂದರು.

ಮಾತು ಮುಂದುವರಿಸಿದ ಸಿದ್ದರಾಮಯ್ಯ, ಬಿಜೆಪಿಯವರು ಕುತಂತ್ರ ಮಾಡುವುದರಲ್ಲಿ ನಿಸ್ಸೀಮರು. ಬಿಜೆಪಿ, ಜೆಡಿಎಸ್‌ನವರು ನನ್ನನ್ನು ಸೋಲಿಸಲೇಬೇಕು ಅಂತ ಹಣದ ಹೊಳೆ ಹರಿಸಬಹುದು. ಎಷ್ಟೇ ಕೋಟಿ ಖರ್ಚು ಮಾಡಲಿ, ಎಷ್ಟೇ ಕುತಂತ್ರ, ಹುನ್ನಾರ ಮಾಡಲಿ.ಚಾಮುಂಡೇಶ್ವರಿ ಕ್ಷೇತ್ರದ ಜನ ಇದ್ಯಾವುದಕ್ಕೂ ಸೊಪ್ಪು ಹಾಕಲ್ಲ ಎಂದಿದ್ದಾರೆ. ಈ ವೇಳೆ ವರುಣ ಕ್ಷೇತ್ರ ಎನ್ನುವ ಬದಲು ಚಾಮುಂಡೇಶ್ವರಿ ಕ್ಷೇತ್ರ ಎಂದಿದ್ದಾರೆ.
ಜನ ನನಗೆ ಆಶೀರ್ವಾದ ಮಾಡೇ ಮಾಡುತ್ತಾರೆ. ಬಿಜೆಪಿಯವರಿಗೆ ಭಯ. ಇಡೀ ರಾಜ್ಯದ ಜನ ಸಿದ್ದರಾಮಯ್ಯ ಅವರಿಗೆ ಪ್ರೀತಿ ತೋರಿಸುತ್ತಿದ್ದಾರೆ. ಆದ್ದರಿಂದ ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಬೇಕು ಅಂತ ತೀರ್ಮಾನಿಸಿದ್ದಾರೆ. ವರುಣ ನಾನು ಹುಟ್ಟಿದ ಹೋಬಳಿ. ನಮ್ಮೂರು ಸಿದ್ದರಾಮನಹುಂಡಿ ಇಲ್ಲೇ ಇದೆ. ಇದು ನನ್ನ ಕೊನೆಯ ಚುನಾವಣೆ ಎಂದು ಹೇಳಿದರು.
ರಾಜ್ಯದಲ್ಲಿ ಶೇಕಡ 40-50ರಷ್ಟು ಭ್ರಷ್ಟಾಚಾರ ನಡೆದಿದೆ. ಬಿಜೆಪಿಯನ್ನು ಸೋಲಿಸಲೇಬೇಕು. ಜೆಡಿಎಸ್‌ನವರಿಗೆ ಅತಂತ್ರ ಸರ್ಕಾರ ಬರಬೇಕು. ನನಗೆ ಸ್ಪಷ್ಟ ಮಾಹಿತಿ ಇದೆ. ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಸೂರ್ಯ ಚಂದ್ರರಿರುವಷ್ಟೇ ಸತ್ಯ. ವಿ ಸೋಮಣ್ಣ, ಬಸವರಾಜ ಬೊಮ್ಮಾಯಿ ಇಲ್ಲಿಗೆ ಬಂದು ಹೋಗಿದ್ದಾರೆ. ವರುಣ ತಾಲೂಕು ಮಾಡುವುದಾಗಿ ಹೇಳಿದ್ದಾರೆ. ನಾಲ್ಕು ವರ್ಷ ನೀವೇ ಅಧಿಕಾರದಲ್ಲಿದ್ದಿರಿ. ಯಾಕೆ ಮಾಡಲಿಲ್ಲ ? ಎಂದು ಪ್ರಶ್ನಿಸಿದರು.
-
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications