ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು; 16 ಖಾಸಗಿ ಕೋವಿಡ್ ಕೇರ್ ಸೆಂಟರ್ ಮುಚ್ಚಲು ಆದೇಶ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮೇ 20; ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಸೋಂಕು ಆತಂಕ ಮೂಡಿಸಿದೆ. ಇದರ ನಡುವೆಯೇ ಅಸಮರ್ಪಕ ರೀತಿಯಲ್ಲಿ ಚಿಕಿತ್ಸೆ ನೀಡುತ್ತಿದ್ದ 16 ಖಾಸಗಿ ಕೋವಿಡ್ ಕೇರ್‌ ಸೆಂಟರ್‌ಗಳನ್ನು ಮುಚ್ಚುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಕೆ. ಆರ್. ಕ್ಷೇತ್ರದ ಶಾಸಕ ಎಸ್. ಎ. ರಾಮದಾಸ್ ನೇತೃತ್ವದಲ್ಲಿ ನಗರದಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಕೋವಿಡ್ ಕೇರ್ ಸೆಂಟರ್‌ಗಳಿಗೆ ತೆರಳಿ ಅಲ್ಲಿನ ಚಿಕಿತ್ಸಾ ವ್ಯವಸ್ಥೆ ಬಗ್ಗೆ ಪರಿಶೀಲನೆಯನ್ನು ನಡೆಸಿದ್ದರು. ಈ ಪರಿಶೀಲನೆ ವೇಳೆ ಖಾಸಗಿ ಆಸ್ಪತ್ರೆಗಳ ಕಳ್ಳಾಟ ಬಯಲಾಗಿತ್ತು.

ಮೈಸೂರು: ಕೊರೊನಾ ಸೋಂಕಿನಿಂದ ಮೃತಪಟ್ಟರೆ 5 ಲಕ್ಷ ರೂ. ಪರಿಹಾರಮೈಸೂರು: ಕೊರೊನಾ ಸೋಂಕಿನಿಂದ ಮೃತಪಟ್ಟರೆ 5 ಲಕ್ಷ ರೂ. ಪರಿಹಾರ

ಈ ಹಿನ್ನೆಲೆಯಲ್ಲಿ ತುರ್ತು ಸಭೆ ಕರೆದಿದ್ದ ಶಾಸಕ ರಾಮದಾಸ್, ಖಾಸಗಿ ಆಸ್ಪತ್ರೆಗೆ ನೋಟಿಸ್ ನೀಡುವಂತೆ ಸಭೆಯಲ್ಲಿ ಸೂಚನೆ ನೀಡಿದ್ದರು. ಹೀಗಾಗಿ ನೋಟಿಸ್ ನೀಡುವ ಜೊತೆಗೆ ಕಠಿಣ ತೀರ್ಮಾನ ಕೈಗೊಂಡ ಜಿಲ್ಲಾ ಆರೋಗ್ಯಾಧಿಕಾರಿ ಅಮರನಾಥ್ ಮೈಸೂರಿನ 16 ಕೋವಿಡ್ ಕೇರ್ ಸೆಂಟರ್‌ಗಳನ್ನು ಮುಚ್ಚುವಂತೆ ಆದೇಶಿಸಿದ್ದಾರೆ.

ಕೋವಿಡ್ ಪರಿಸ್ಥಿತಿ; ಮೈಸೂರು ಜೈಲಿನಿಂದ 46 ಕೈದಿಗಳು ಬಿಡುಗಡೆ ಕೋವಿಡ್ ಪರಿಸ್ಥಿತಿ; ಮೈಸೂರು ಜೈಲಿನಿಂದ 46 ಕೈದಿಗಳು ಬಿಡುಗಡೆ

 DHO Ordered To Close 16 Private Covid Care Center

ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಯಾವುದೇ ಮುನ್ನೆಚ್ಚರಿಕೆ ಕ್ರಮವಹಿಸದೆ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಜೊತೆಗೆ ಕೆಲವು ಆಸ್ಪತ್ರೆಗಳಲ್ಲಿ ಹಣ ವಸೂಲಿ ಮಾಡಿದ ಬಗ್ಗೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸೆಂಟರ್‌ಗಳನ್ನು ಮುಚ್ಚಿ ಎಂದು ಡಿಎಚ್ಒ ಸೂಚನೆ ನೀಡಿದ್ದು, 16 ಕೋವಿಡ್ ಕೇರ್ ಸೆಂಟರ್ ರದ್ದು ಮಾಡಿದ್ದಾರೆ.

ಮೈಸೂರು; ಬ್ಲ್ಯಾಕ್ ಫಂಗಸ್‌ಗೆ ಇಬ್ಬರು ಕೋವಿಡ್ ವಾರಿಯರ್ಸ್ ಬಲಿ ಮೈಸೂರು; ಬ್ಲ್ಯಾಕ್ ಫಂಗಸ್‌ಗೆ ಇಬ್ಬರು ಕೋವಿಡ್ ವಾರಿಯರ್ಸ್ ಬಲಿ

ಈ ಎಲ್ಲಾ ಸೆಂಟರ್‌ಗಳು ಖಾಸಗಿ ಆಸ್ಪತ್ರೆಗಳು ನಿರ್ವಹಣೆ ಮಾಡುತ್ತಿದ್ದವು. ಕೆಲವು ಕಡೆಗಳಲ್ಲಿ ಪಿಪಿಇ ಕಿಟ್ ಇಲ್ಲದೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವುದು ರಾಮದಾಸ್ ಪರಿಶೀಲನೆ ವೇಳೆ ಕಂಡು ಬಂದಿತ್ತು.‌ ಹೀಗಾಗಿ ಇಂತಹ ಸೆಂಟರ್‌ಗಳ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳುವುದಾಗಿ ಶಾಸಕ ರಾಮದಾಸ್ ಹೇಳಿದ್ದರು.

English summary
Mysuru district health officer ordered to close 16 private Covid care center who fail to follow treatment norms.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X