Dhruva Narayan: ಮೈಸೂರು ಕಾಂಗ್ರೆಸ್ ಭವನದಲ್ಲಿ ಧ್ರುವನಾರಾಯಣ ಅಂತಿಮ ದರ್ಶನ
ಮೈಸೂರು, ಮಾರ್ಚ್ 11: ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ, ಸರಳ, ಸಜ್ಜನಿಕೆ ರಾಜಕಾರಣಿ ಆರ್. ಧ್ರುವನಾರಾಯಣ ಅವರು ಶನಿವಾರ ತೀವ್ರ ಹೃದಯಾಘಾತದಿಂದ ಶನಿವಾರ ಬೆಳಗ್ಗೆ ವಿಧಿವಶರಾಗದ್ದಾರೆ.
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದ ಅವರು, ಶುಕ್ರವಾರ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಶುಕ್ರವಾರ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ಮನೆಗೆ ಬಂದಿದ್ದ ಧ್ರುವನಾರಾಯಣ ಶನಿವಾರ ಮುಂಜಾನೆ 5.30ರ ಸಮಯದಲ್ಲಿ ಹೃದಯಾಘಾತಕ್ಕೆ ಒಳಗಾದರು. ತಕ್ಷಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅವರನ್ನು ಪರೀಕ್ಷಿಸಿದ ಮೃತಪಟ್ಟಿರುವುದು ಖಚಿತಪಡಿಸಿದ್ದಾರೆ. ಮೃತರಿಗೆ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳು ಇದ್ದಾರೆ.

ಚಾಮರಾಜನಗರ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಅವರು, ಎರಡು ಬಾರಿ ಶಾಸಕರಾಗಿಯೂ ಕೆಲಸ ಮಾಡಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ವಿ. ಶ್ರೀನಿವಾಸ ಪ್ರಸಾದ್ ಅವರ ಎದುರು ಅಲ್ಪ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಪ್ರಸ್ತುತ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿದ್ದರು.
ಆರ್.ಧ್ರುವನಾರಾಯಣ ಅವರ ಪಾರ್ಥಿವ ಶರೀರವನ್ನು ಮೈಸೂರಿನ ಶ್ರೀಮತಿ ಇಂದಿರಾ ಗಾಂಧಿ ಕಾಂಗ್ರೆಸ್ ಭವನದಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕ ಹಾಗೂ ಕಾಂಗ್ರೆಸ್ ಬಂಧುಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 3 ಗಂಟೆಗೆ ನಗರ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಧ್ವಜವಂದನಾ ಗೌರವ ಸಂತಾಪವನ್ನು ಮೈಸೂರು ಕಾಂಗ್ರೆಸ್ ಸೇವಾದಳ ಸಲ್ಲಿಸಿದೆ ಎಂದು ಜಿಲ್ಲಾಧ್ಯಕ್ಷರಾದ ಡಾ.ಬಿ ಜೆ ವಿಜಯ್ ಕುಮಾರ್ ತಿಳಿಸಿದ್ದಾರೆ.
ನಾಳೆ ಹೆಗ್ಗವಾಡಿ ಗ್ರಾಮದಲ್ಲಿ ಧ್ರುವನಾರಾಯಣ ಅಂತ್ಯಕ್ರಿಯೆ
ಚಾಮರಾಜನಗರ ತಾಲೂಕು ಹೆಗ್ಗವಾಡಿ ಗ್ರಾಮದಲ್ಲಿ ಧ್ರುವನಾರಾಯಣ ಅವರ ಅಂತ್ಯಕ್ರಿಯೆ ನಡೆಯಲಿದೆ. ಮೈಸೂರು ನಿವಾಸದಲ್ಲಿ ಪಾರ್ಥಿವ ಶರೀರ ವೀಕ್ಷಣೆಗೆ ಅವಕಾಶ ನಂತರ ಮೈಸೂರು ಕಾಂಗ್ರೆಸ್ ಭವನ, ಬಳಿಕ ನಂಜನಗೂಡು, ಚಾಮರಾಜನಗರನಗರಕ್ಕೆ ಪಾರ್ಥಿವ ಶರೀರವನ್ನು ತಂದು, ವೀಕ್ಷಣೆಗೆ ಅನುಕೂಲ ಕಲ್ಪಿಸಲಾಗುವುದು. ರಾತ್ರಿಯೇ ಹೆಗ್ಗವಾಡಿಗೆ ಕೊಂಡೊಯ್ಯಲಾಗುತ್ತದೆ. ಮಾ.12ರಂದು ಸ್ವಗ್ರಾಮ ಹೆಗ್ಗವಾಡಿಯ ತೋಟದಲ್ಲಿ ಮಧ್ಯಾಹ್ನ 1ಕ್ಕೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ










Click it and Unblock the Notifications