ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಆರ್ ಎಸ್ ನಲ್ಲಿ ಡಿಸ್ನಿಲ್ಯಾಂಡ್ ನಿರ್ಮಾಣ ಖಚಿತ: ಸಾರಾ ಮಹೇಶ್

|
Google Oneindia Kannada News

ಮೈಸೂರು, ಜನವರಿ 1 : ಕೆಆರ್ ಎಸ್ ನಲ್ಲಿ ಡಿಸ್ನಿಲ್ಯಾಂಡ್ ಮಾದರಿ ಅಭಿವೃದ್ಧಿಗೆ ಕಾನೂನು ಪರಿಧಿಯಲ್ಲೇ ಸರ್ವ ಪ್ರಯತ್ನ ಮಾಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳಿದರು.

ಡಿಸ್ನಿಲ್ಯಾಂಡ್ ಮಾದರಿ ಯೋಜನೆ: ಕೆಆರ್‌ಎಸ್‌ಗೆ ಡಿ.ಕೆ.ಶಿವಕುಮಾರ್ ಭೇಟಿಡಿಸ್ನಿಲ್ಯಾಂಡ್ ಮಾದರಿ ಯೋಜನೆ: ಕೆಆರ್‌ಎಸ್‌ಗೆ ಡಿ.ಕೆ.ಶಿವಕುಮಾರ್ ಭೇಟಿ

ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಾ.ರಾ.ಮಹೇಶ್ ಅವರು ಕೆಆರ್ ಎಸ್ ಸುತ್ತಮುತ್ತಲಿನ ಪ್ರದೇಶದಲ್ಲಿ ಈಗಾಗಲೇ ಗಣಿಗಾರಿಕೆ, ಮತ್ತಿತರ ಉದ್ಯಮಗಳು ನಡೆಯುತ್ತಿಲ್ಲವೇ? ಎಂದು ಪ್ರಶ್ನಿಸಿದರು.

 ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಬೃಂದಾವನ ಗಾರ್ಡನ್ ಅಭಿವೃದ್ಧಿ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಬೃಂದಾವನ ಗಾರ್ಡನ್ ಅಭಿವೃದ್ಧಿ

ಆರ್‍ಟಿಐ ಪ್ರಕಾರ ಆ ವ್ಯಾಪ್ತಿಯ 22 ಗ್ರಾಮಗಳ ಸರಹದ್ದಿನಲ್ಲಿ ಗಣಿಗಾರಿಕೆ, ಹೋಟೆಲ್ ಉದ್ಯಮ, ಏಟಿಯಾ ಸಂಸ್ಥೆಯ ಪವರ್ ಪ್ರಾಜೆಕ್ಟ್ ಇತ್ಯಾದಿ ಯೋಜನೆಗಳು ಸುಮಾರು 15 ವರ್ಷಗಳಿಂದ ನಡೆಯುತ್ತಿವೆ. ಆದರೆ, ಈಗ ಸೂಕ್ಷ್ಮ ಪರಿಸರ ವಲಯ ಎಂದು ಪ್ರಚಾರ ಆಗುತ್ತಿರುವುದು ಅನುಮಾನ ಮೂಡಿಸಿದೆ ಎಂದರು.

Disneylands construction in KRS is sure:Sa Ra Mahesh

ಸಾರ್ವಜನಿಕ ಹಿತಾಸಕ್ತಿಯಿಂದ ಕೆಆರ್ ಎಸ್ ಸುತ್ತಲಿನ 300 ಎಕರೆ ಪ್ರದೇಶ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ಅಡ್ಡಿಪಡಿಸುತ್ತಿರುವುದು ವಿಪರ್ಯಾಸ. ಆದರೆ ಕಾನೂನಿನಲ್ಲಿ ಇರಬಹುದಾದ ಅವಕಾಶದ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ಮಾಡುತ್ತೇವೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಹೇಳಿದರು.

 ಕೆಆರ್ ಎಸ್ ಡಿಸ್ನಿಲ್ಯಾಂಡ್ ಯೋಜನೆಗೆ ಮೈತ್ರಿ ಸರ್ಕಾರದಲ್ಲೇ ಭುಗಿಲೆದ್ದ ಅಸಮಾಧಾನ ಕೆಆರ್ ಎಸ್ ಡಿಸ್ನಿಲ್ಯಾಂಡ್ ಯೋಜನೆಗೆ ಮೈತ್ರಿ ಸರ್ಕಾರದಲ್ಲೇ ಭುಗಿಲೆದ್ದ ಅಸಮಾಧಾನ

ಪರಿಸರ ಪ್ರವಾಸೋದ್ಯಮ, ಕೃಷಿ ಪ್ರವಾಸೋದ್ಯಮ ಹಾಗೂ ಜಲ ಪ್ರವಾಸೋದ್ಯಮಗಳೂ ಇವೆ. ಅವಕ್ಕೆ ಕಾನೂನಿನಲ್ಲಿ ವಿಶೇಷ ಅವಕಾಶಗಳಿರುತ್ತವೆ ಎನ್ನಲಾಗಿದೆ. ಹಾಗಾಗಿ ಸರ್ಕಾರ ಈ ನಿಟ್ಟಿನಲ್ಲಿ ಡಿಸ್ನಿಲ್ಯಾಂಡ್ ಮಾದರಿ ನಿರ್ಮಾಣಕ್ಕೆ ದಾರಿಗಳ ಹುಡುಕಾಟ ನಡೆಸಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.

English summary
Tourism Minister Sa Ra Mahesh Said that Disneyland's construction in KRS is sure.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X