• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹುಣಸೂರು ಉಪ ಚುನಾವಣೆ: ಜಿಲ್ಲಾಡಳಿತದಿಂದ ಅಂತಿಮ ಸಿದ್ಧತೆ

By ಮೈಸೂರು ಪ್ರತಿನಿಧಿ
|

ಮೈಸೂರು, ಡಿಸೆಂಬರ್ 4: ಹುಣಸೂರು ಉಪ ಚುನಾವಣಾ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಉಪ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ ಡಿ. ದೇವರಾಜು ಅರಸು ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಮಸ್ಟರಿಂಗ್ ಕಾರ್ಯ ನಡೆಯಿತು. ಉಪ ಚುನಾವಣೆಗಾಗಿ ತಾಲೂಕಿನಲ್ಲಿ ಒಟ್ಟು 274 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಇದರಲ್ಲಿ 50 ಅತಿ ಸೂಕ್ಷ್ಮ ಹಾಗೂ 224 ಸಾಮಾನ್ಯ ಮತಗಟ್ಟೆಗಳಿವೆ. ಮತಗಟ್ಟೆಗೆ ಅಧಿಕಾರಿ, ಸಿಬ್ಬಂದಿ ತೆರಳಲು 45 ಸರ್ಕಾರಿ ಬಸ್‌ಗಳ‌ ವ್ಯವಸ್ಥೆ ಮಾಡಲಾಗಿದೆ.

15 ಕ್ಷೇತ್ರದ ಉಪ ಚುನಾವಣೆ; ಬಿಜೆಪಿ ಆಂತರಿಕ ಸಮೀಕ್ಷೆ ವರದಿ15 ಕ್ಷೇತ್ರದ ಉಪ ಚುನಾವಣೆ; ಬಿಜೆಪಿ ಆಂತರಿಕ ಸಮೀಕ್ಷೆ ವರದಿ

ತಾಲೂಕಿನ 8 ಕಡೆಗಳಲ್ಲಿ ವೆಬ್‌ ಕ್ಯಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ಮತದಾನ ಕಾರ್ಯಕ್ಕೆ 1229 ಮಂದಿ ಅಧಿಕಾರಿ ಮತ್ತು ಸಿಬ್ಬಂದಿ ಬಳಕೆ ಮಾಡಲಾಗಿದೆ. ಸಾಮಾನ್ಯ ಮತಗಟ್ಟೆಗೆ ಓರ್ವ, ಅತಿ ಸೂಕ್ಷ್ಮ ಮತಗಟ್ಟೆಗೆ ಇಬ್ಬರು ಭದ್ರತಾ ಸಿಬ್ಬಂದಿ ನೇಮಿಸಲಾಗಿದೆ. ಹುಣಸೂರು ಕಾಡಂಚಿನ 6 ಹಾಡಿಗಳಲ್ಲಿ ಮತಗಟ್ಟೆ ಸ್ಥಾಪಿಸಿದ್ದು, ಉಪ ಚುನಾವಣೆಯಲ್ಲಿ ಯಾವುದೇ ಭಾಗದಲ್ಲಿ ಪಿಂಕ್ ಮತಗಟ್ಟೆ ಸ್ಥಾಪನೆ ಮಾಡಿಲ್ಲ.

ಹುಣಸೂರು ಕ್ಷೇತ್ರದಲ್ಲಿ ಒಟ್ಟು 2,27,974 ಮತದಾರರು, 4 ಮಂದಿ ಇತರೆ ಮತದಾರರಿದ್ದಾರೆ. ಪುರುಷ ಮತದಾರರು 1,14,146, ಮಹಿಳಾ ಮತದಾರರು 1,12,770 ಇದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಅಲ್ಲದೇ ಮಸ್ಟರಿಂಗ್, ಸ್ಟ್ರಾಂಗ್ ರೂಂ ಸ್ಥಳದಲ್ಲಿ ಸೇನಾ ಭದ್ರತೆ ಒದಗಿಸಲಾಗಿದೆ.

ಅಧಿಕಾರಿಗಳಿಗೆ ತರಾಟೆ: ಹುಣಸೂರು ಉಪ ಚುನಾವಣೆ ಮಸ್ಟರಿಂಗ್ ಕಾರ್ಯಕ್ಕೆ ಸಮಯಕ್ಕೆ ಸರಿಯಾಗಿ ಬಾರದ ಚುನಾವಣಾ ಸಿಬ್ಬಂದಿಗಳನ್ನು ನೋಡಲ್ ಅಧಿಕಾರಿ ತರಾಟೆಗೆ ತೆಗೆದುಕೊಂಡರು. ಮಸ್ಟರಿಂಗ್ ಕಾರ್ಯಕ್ಕೆ ಅಧಿಕಾರಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಟೈಮ್ ಸೆನ್ಸ್ ಇಲ್ವಾ, ಸಸ್ಪೆಂಡ್ ಮಾಡ್ತೀನಿ ಎಂದು ಎಚ್ಚರಿಸಿದರು.

English summary
The countdown for the by elections in Hunasuru has begun and all the preparations have been made by the District administration,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X