ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚುನಾವಣಾ ನೀತಿ ಸಂಹಿತೆ:ಚೆಕ್ ಪೋಸ್ಟ್ ಗಳಲ್ಲಿ ಜರ್ಮನ್ ಮಾದರಿಯ ಟೆಂಟ್ ಅಳವಡಿಕೆ

|
Google Oneindia Kannada News

ಮೈಸೂರು, ಮಾರ್ಚ್ 13:ಲೋಕಸಭಾ ಚುನಾವಣೆ ನೀತಿ ಸಂಹಿತೆಯನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಸರ್ಕಾರಿ ವಾಹನಗಳನ್ನು ವಶಕ್ಕೆ ಪಡೆದು ಪತ್ರಗಳನ್ನು ತೆರವುಗೊಳಿಸಲಾಗಿದೆ.

ಜಿಲ್ಲೆಯನ್ನು ಪ್ರವೇಶಿಸುವ ಮತ್ತು ನಿರ್ಗಮಿಸುವ ಸ್ಥಳಗಳು ಸೇರಿದಂತೆ 12 ರಾಜ್ಯ ಹೆದ್ದಾರಿಗಳಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಇಲ್ಲಿನ ಸಿಬ್ಬಂದಿ ಒಳ ಬರುವ ಮತ್ತು ಹೊರ ಹೋಗುವ ಎಲ್ಲಾ ವಾಹನಗಳನ್ನು ಪರೀಕ್ಷಿಸಲಿದ್ದಾರೆ.

ಚುನಾವಣೆ ಸ್ಪರ್ಧಿಸಲು ಕಾಂಗ್ರೆಸ್‌ಗೆ ಷರತ್ತು ಹಾಕಿದ ದೇವೇಗೌಡಚುನಾವಣೆ ಸ್ಪರ್ಧಿಸಲು ಕಾಂಗ್ರೆಸ್‌ಗೆ ಷರತ್ತು ಹಾಕಿದ ದೇವೇಗೌಡ

ಚೆಕ್ ಪೋಸ್ಟ್ ಗಳಲ್ಲಿ ಜರ್ಮನ್ ಮಾದರಿಯ ಟೆಂಟ್ ಗಳನ್ನು ನಿರ್ಮಿಸಿ, ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಮೈಸೂರು - ಬೆಂಗಳೂರು ರಸ್ತೆಯ ಕೆಆರ್ ಮಿಲ್ ಬಳಿ ಚೆಕ್ ಪೋಸ್ಟ್ ತೆರೆಯಲಾಗಿದೆ.

District Administration has instructed carry only Rs.50,000 for functions

ಮದುವೆ ಮತ್ತು ಧಾರ್ಮಿಕ ಸಮಾರಂಭಗಳಿಗೆ 50 ಸಾವಿರ ರೂ.ವರೆಗೆ ಕೊಂಡೊಯ್ಯಲು ಯಾವುದೇ ಅನುಮತಿ ಬೇಕಿಲ್ಲ. ಇಂತಹ ಕಾರ್ಯಕ್ರಮಗಳು ರಾಜಕೀಯ ಚಟುವಟಿಕೆಗಳಿಗೆ ದುರುಪಯೋಗವಾಗದಂತೆ ಸಂಘಟಕರು ಎಚ್ಚರಿಕೆ ವಹಿಸಬೇಕು. ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

 ಮೈಸೂರಿನಲ್ಲಿ ಯುವ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳಿಂದ ತಂತ್ರ ಮೈಸೂರಿನಲ್ಲಿ ಯುವ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳಿಂದ ತಂತ್ರ

ನಗರ ಪಾಲಿಕೆ ಮತ್ತು ಮುಡಾ ಜಿಲ್ಲಾಡಳಿತ ಈಗಾಗಲೇ ಪೋಸ್ಟರ್ಸ್, ಬ್ಯಾನರ್ , ಬಾವುಟ ರಾಜಕೀಯಕ್ಕೆ ಸಂಬಂಧಿಸಿದ ಪ್ರಕಟಣೆಗಳನ್ನು ತೆರವು ಮಾಡಿದೆ. ನಗರ ವ್ಯಾಪ್ತಿಯಲ್ಲಿ ಅಳವಡಿಸಿದ್ದ ಸರ್ಕಾರಿ ಜಾಹೀರಾತುಗಳನ್ನು ಸಹ ತೆಗೆಯಲಾಗಿದೆ.

District Administration has instructed carry only Rs.50,000 for functions

ಸಂಸದ ಪ್ರತಾಪ್ ಸಿಂಹ ಸೇರಿದಂತೆ ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರಿಗೆ ನೀಡಲಾಗಿದ್ದ 12 ಕಾರುಗಳನ್ನು ವಾಪಸ್ ಪಡೆಯಲಾಗಿದೆ. ಅಂತೆಯೇ ಜಿಲ್ಲಾಧಿಕಾರಿಗಳ ಕಚೇರಿಯ ಮೊದಲನೇ ಮಹಡಿಯಲ್ಲಿ ಮೀಡಿಯಾ ಸೆಂಟರ್ ಆರಂಭಿಸಿ, ರಾಜಕೀಯ ಭಾಷಣಗಳ ಮೇಲೆ ನಿಗಾ ವಹಿಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

English summary
Mysuru district administration prepared all manner of strict enforcement of the Lok Sabha election code of conduct in the district.District Administration has instructed to people carry only 50 thousand rupees for functions.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X